Homeಮುಖಪುಟಟಿಆರ್‌ಪಿ ಹಗರಣ: BARC ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

ಟಿಆರ್‌ಪಿ ಹಗರಣ: BARC ನ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

"ಪ್ರಕರಣದ ತನಿಖೆಯ ವೇಳೆ ಹಗರಣದಲ್ಲಿ ಇವರ ಪಾತ್ರವೂ ಇರುವುದು ತಿಳಿದುಬಂದಿತ್ತು. ಹಾಗಾಗಿ ಬಂಧಿಸಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು" ಎಂದು ಪೊಲೀಸರು ತಿಳಿಸಿದರು.

- Advertisement -
- Advertisement -

ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಂದು ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ (BARC) ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ಅವರನ್ನು ಬಂಧಿಸಿದ್ದಾರೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 14 ಜನರನ್ನು ಬಂಧಿಸಲಾಗಿದೆ.

“ಪ್ರಕರಣದ ತನಿಖೆಯ ವೇಳೆ ಹಗರಣದಲ್ಲಿ ಇವರ ಪಾತ್ರವೂ ಇರುವುದು ತಿಳಿದುಬಂದಿತ್ತು. ಹಾಗಾಗಿ ಬಂಧಿಸಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಪೊಲೀಸರು ತಿಳಿಸಿದರು.

ಇದನ್ನೂ ಓದಿ: ಟಿಆರ್‌ಪಿ ಹಗರಣ: ವೀಕ್ಷಕರ ಸಂಖ್ಯೆ ಹೆಚ್ಚಿಸಲು 15 ಲಕ್ಷ ಪಾವತಿ ಮಾಡಿದ್ದ ರಿಪಬ್ಲಿಕ್ ಟಿವಿ!

ಭಾನುವಾರ ರಿಪಬ್ಲಿಕ್‌ ಮೀಡಿಯಾ ನೆಟ್‌ವರ್ಕ್‌ನ ಸಿಇಒ ವಿಕಾಸ್‌ ಖಾನ್‌ಚಂದಾನಿರನ್ನು ಬಂಧಿಸಲಾಗಿತ್ತು. ಆದರೆ ಬುಧವಾರ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು.

ಕೆಲವು ವೀಕ್ಷಕರು ರಿಪಬ್ಲಿಕ್ ಟಿವಿಯನ್ನು ನೋಡದಿದ್ದರೂ ಸಹ ಅದನ್ನು ನೋಡುವಂತೆ ಮಾಡಲು ಟಿವಿ ವೀಕ್ಷಕರಿಗೆ ಹಣ ನೀಡಲಾಗಿದೆ ಎಂಬುದಕ್ಕೆ ಸಾಕ್ಷ್ಯ ದೊರಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಟಿಆರ್‌ಪಿ ಹಗರಣದ ಬಗ್ಗೆ ಆರಂಭಿಕ ತನಿಖೆಯಲ್ಲಿ ಎರಡು ಸ್ಥಳೀಯ ಫಕ್ತ್ ಮರಾಠಿ ಮತ್ತು ಬಾಕ್ಸ್ ಸಿನೆಮಾ ಚಾನೆಲ್‌ಗಳನ್ನು ಹೆಸರಿಸಲಾಗಿದೆ.

ಇದನ್ನೂ ಓದಿ: Explainer: ಏನಿದು ಟಿಆರ್‌ಪಿ? ಹೇಗೆ ತಿರುಚಲಾಗುತ್ತದೆ? ರಿಪಬ್ಲಿಕ್ ಟಿವಿ ಸಿಕ್ಕಿಬಿದ್ದಿದ್ದು ಹೇಗೆ?

ರಿಪಬ್ಲಿಕ್ ಟಿವಿಯ ವೀಕ್ಷಕರ ಸಂಖ್ಯೆ ಹೆಚ್ಚಿಸಲು ಬೇಕಾಗಿ ಆಯ್ದ ಕುಟುಂಬಗಳಿಗೆ ಪ್ರತಿ ತಿಂಗಳು 15 ಲಕ್ಷ ರೂ. ಪಾವತಿಸಲಾಗುತ್ತಿತ್ತು ಎಂದು ಥಾಣೆ ಮೂಲದ ಕೇಬಲ್ ವಿತರಕ ಸಂಸ್ಥೆಯಾದ ಕ್ರಿಸ್ಟಲ್ ಬ್ರಾಡ್‌ಕಾಸ್ಟ್ ಮಾಲಕ ಆಶಿಶ್ ಚೌಧರಿ ಒಪ್ಪಿಕೊಂಡಿದ್ದಾಗಿ ಟಿಆರ್‌ಪಿ ಹಗರಣದ ಬಗ್ಗೆ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್ ಇಲಾಖೆಯ ಅಪರಾಧ ವಿಭಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಿಳಿಸಿತ್ತು.

ಆರೋಪಿಯು ತಾನು ಹವಾಲಾ ಆಪರೇಟರ್‌ಗಳಿಂದ ಹಣ ಸ್ವೀಕರಿಸಿದ್ದಾಗಿ ಮತ್ತು ಈ ಬಗ್ಗೆ ತಪ್ಪೊಪ್ಪಿಗೆ ಸಾಕ್ಷಿಯಾಗಲು ಒಪ್ಪಿಕೊಂಡಿದ್ದಾಗಿಯೂ ಪೊಲೀಸರು ತಿಳಿಸಿದ್ದಾರೆ. ಮ್ಯಾಕ್ಸ್‌ಮೀಡಿಯಾ ಎಂಬ ಮಾರಾಟ ಸಂಸ್ಥೆಯ ಅಭಿಷೇಕ್ ಕೊಲವಾಡೆ ಮತ್ತು ಆಶಿಶ್ ಚೌಧರಿಯ ಪೊಲೀಸ್ ಕಸ್ಟಡಿ ಅವಧಿಯನ್ನು ವಿಸ್ತರಿಸುವಂತೆ ಕೋರಿ ಅಪರಾಧ ವಿಭಾಗ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರವನ್ನು ಪೊಲೀಸರು ಬಹಿರಂಗಪಡಿಸಿದ್ದರು.


ಇದನ್ನೂ ಓದಿ: ‘ರಿಪಬ್ಲಿಕ್’ ಆಫ್ ಮೋದಿ, ಮೀಡಿಯಾ ಆ್ಯಂಡ್ ಪಿಆರ್‍ಒಸ್:  ಓಟು, ಟಿಆರ್‍ಪಿಗಾಗಿ ಯಾವ ಮಟ್ಟಕ್ಕೂ…..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

0
ಕೋವಿಡ್ -19 ವಿರುದ್ಧದ 'ಕೋವಿಶೀಲ್ಡ್‌' ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ...