HomeಮುಖಪುಟTRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

TRP ಹಗರಣ: ರಿಪಬ್ಲಿಕ್ ಟಿವಿ ಹಣ ನೀಡಿರುವುದನ್ನು ಒಪ್ಪಿಕೊಂಡ ವೀಕ್ಷಕರು

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಬಾರ್ಕ್ ಸ್ಥಗಿತಗೊಳಿಸಿದೆ.

- Advertisement -
- Advertisement -

ರಿಪಬ್ಲಿಕ್‌ ಟಿವಿ ಹಾಗೂ ಮುಂಬೈ ಮೂಲದ ಸ್ಥಳೀಯ ಚಾನೆಲ್‌‌ ಒಂದು ತಮ್ಮ ಚಾನೆಲ್‌ಗಳನ್ನು ಕೆಲವು ಗಂಟೆಗಳ ಕಾಲ ಆನ್‌ನಲ್ಲಿ ಇಡುವುದಕ್ಕಾಗಿ ನಮಗೆ ನೇರವಾಗಿ ಹಣ ನೀಡಿವೆ ಎಂದು ನಾಲ್ವರು ವೀಕ್ಷಕರು ಮ್ಯಾಜಿಸ್ಟ್ರೇಟ್‌ ಮುಂದೆ ಹೇಳಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ರಿಪಬ್ಲಿಕ್‌ ಟಿವಿ ಮತ್ತು ಮುಂಬೈನ ಸ್ಥಳೀಯ ಚಾನೆಲ್‌‌‌ಗಳಾದ ಬಾಕ್ಸ್‌ ಸಿನೆಮಾ ಹಾಗೂ ಫಕ್ತ್‌ ಮರಾಠಿ ಚಾನೆಲ್‌ಗಳು ನಕಲಿ ಟಿಆರ್‌ಪಿ ಹಗರಣದಲ್ಲಿ ಭಾಗಿಯಾವೆ ಎಂದು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: TRP ಹಗರಣ: ಎಲ್ಲರಂತೆ ಹೈಕೋರ್ಟ್‌ಗೆ ಹೋಗಿ ಎಂದ ಸುಪ್ರೀಂ, ರಿಪಬ್ಲಿಕ್ ಅರ್ನಾಬ್‌ಗೆ ಮುಖಭಂಗ!

ಪ್ರಕರಣವನ್ನು ಇಂದು ಮ್ಯಾಜಿಸ್ಟ್ರೇಟ್‌ ವಿಚಾರಣೆ ನಡೆಸಿದ್ದು, ತಾವು ಹಣ ಪಡೆದಿರುವುದಾಗಿ ನಾಲ್ವರು ಹೇಳಿದ್ದಾರೆ. ಪ್ರಕರಣದಲ್ಲಿ ಇವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗುತ್ತದೆ ಎಂದು ತನಿಖೆ ನಡೆಸುತ್ತಿರುವ ಕ್ರೈಂ ಬ್ರಾಂಚ್‌ ಪೊಲೀಸರು ಹೇಳಿದ್ದಾರೆ.

ಮೂವರು ರಿಪಬ್ಲಿಕ್‌ ಟಿವಿಯಿಂದ ತಮಗೆ ಹಣ ಬಂದಿರುವುದಾಗಿಯು, ಇನ್ನೊಬ್ಬರು ‘ಬಾಕ್ಸ್‌ ಸಿನಿಮಾ’ದಿಂದ ಹಣ ಬಂದಿರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಮೂವರು ಸಾಕ್ಷಿಗಳು ರಿಪಬ್ಲಿಕ್‌ ಟಿವಿಯ ಅಧಿಕಾರಿಗಳ ಹೆಸರು ಹೇಳಿರುವುದನ್ನು ಮುಂಬಯಿ ಪೊಲೀಸ್‌ ಆಯುಕ್ತ ಪರಂಬೀರ್‌ ಸಿಂಗ್‌ ಖಚಿತಪಡಿಸಿದ್ದರಾದರೂ, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ ಅವರು ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ತನಿಖೆ ಸಂದರ್ಭದಲ್ಲಿ ಸಾಕ್ಷಿಗಳು ಸಿಆರ್‌ಪಿಸಿ ಸೆಕ್ಷನ್‌ 164 ರ ಅಡಿಯಲ್ಲಿ ಈ ಹೇಳಿಕೆಗಳನ್ನು ನ್ಯಾಯಾಧೀಶರ ಮುಂದೆ ದಾಖಲಿಸಿದ್ದಾರೆ ಎಂದು ಪೊಲೀಸರು ವಿವರಿದ್ದಾರೆ. ಸಾಕ್ಷಿಗಳು ಸ್ವಯಂ ಪ್ರೇರಿತರಾಗಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಖಚಿತವಾದರೆ ಮಾತ್ರ ನ್ಯಾಯಾಧೀಶರು ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಾರೆ. ಹೀಗಾಗಿ ಈ ತಪ್ಪೊಪ್ಪಿಗೆಗಳನ್ನು ಪೊಲೀಸರು ಸಾಕ್ಷಿಗಳಿಂದ ಹೊರತೆಗೆದಿದ್ದಾರೆ ಎಂದು ಈಗ ಆರೋಪಿಸಲಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ರಿಪಬ್ಲಿಕ್ ಟಿವಿಯಿಂದ 200 ಕೋಟಿ ಮಾನನಷ್ಟ ಪರಿಹಾರ ಕೇಳಿದ ಸುಶಾಂತ್ ಗೆಳೆಯ!

ಇಲ್ಲಿಯವರೆಗೆ ಬಂಧಿಸಲಾಗಿರುವ ಐವರಲ್ಲಿ ಮೂವರು ತಾವು ಈ ಹಗರಣದ ಪಾಲುದಾರರು ಎಂದು ಒಪ್ಪಿಕೊಂಡಿದ್ದು, ಮನೆಗಳಿಗೆ ಹಣ ನೀಡುತ್ತಿದ್ದುದಾಗಿ ಹೇಳಿದ್ದಾರೆ. ಇವರಲ್ಲಿ ಹನ್ಸಾ ರಿಸರ್ಚ್‌ನ ಮಾಜಿ ಉದ್ಯೋಗಿಯೂ ಸೇರಿದ್ದಾರೆ.

ಟಿಆರ್‌ಪಿಗಾಗಿ ದತ್ತಾಂಶಗಳನ್ನು ಸಂಗ್ರಹಿಸಲು ಮನೆ ಮನೆಗಳಿಗೆ ಪೀಪಲ್‌ಮೀಟರ್‌ಗಳನ್ನು ಇನ್‌ಸ್ಟಾಲ್‌ ಮಾಡುವ ಗುತ್ತಿಗೆಯನ್ನು ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್‌ (ಬಾರ್ಕ್‌) ಹನ್ಸಾಗೆ ನೀಡಿತ್ತು. ನಿರ್ದಿಷ್ಟ ವಾಹಿನಿಯನ್ನು ಮಾತ್ರ ಆನ್‌ ಮಾಡಿ ಇಡುವಂತೆ ಮನೆಗಳಿಗೆ ಹಣ ನೀಡುವ ಮೂಲಕ ಇದರಲ್ಲಿ ವಂಚನೆ ನಡೆದಿದ್ದು, ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿರುವುದು ಪ್ರಕರಣಕ್ಕೆ ಬಲ ನೀಡಿದೆ ಎಂದು ಪೊಲೀಸರು ಹೇಳಿದ್ದಾರೆ.

ಟಿಆರ್‌ಪಿ ಹಗರಣದ ಹಿನ್ನಲೆಯಲ್ಲಿ ಬಾರ್ಕ್ 12 ವಾರಗಳ ಅವಧಿಗೆ ಟಿಆರ್‌ಪಿ ರೇಟಿಂಗ್‌ ನೀಡುವುದನ್ನು ಸ್ಥಗಿತಗೊಳಿಸಿದೆ.

ಇದನ್ನೂ ಓದಿ: ಅರ್ನಾಬ್ ರಿಪಬ್ಲಿಕ್ ಚಾನೆಲ್ ವಿರುದ್ಧ PIL: ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...