Homeಮುಖಪುಟಮತದಾರರಿಗೆ ಲಂಚ : ಟಿಆರ್‌ಎಸ್ ಸಂಸದೆಗೆ 6 ತಿಂಗಳ ಜೈಲು ಶಿಕ್ಷೆ

ಮತದಾರರಿಗೆ ಲಂಚ : ಟಿಆರ್‌ಎಸ್ ಸಂಸದೆಗೆ 6 ತಿಂಗಳ ಜೈಲು ಶಿಕ್ಷೆ

- Advertisement -
- Advertisement -

ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಮತದಾರರಿಗೆ ಮತ ಹಾಕುವಂತೆ ಲಂಚ ನೀಡಿದ ಆರೋಪದ ಮೇಲೆ ಮೊದಲ ಬಾರಿಗೆ ಲೋಕಸಭಾ ಸಂಸದರೊಬ್ಬರಿಗೆ ಶಿಕ್ಷೆಯಾಗಿದೆ. ಮೆಹಬೂಬಾದ್ ಕ್ಷೇತ್ರವನ್ನು ಪ್ರತಿನಿಧಿಸುವ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್‌ಎಸ್) ಸಂಸದೆ ಕವಿತಾ ಮಾಲೋತ್‌ಗೆ ವಿಶೇಷ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಿದೆ.

ಸಂಸದೆ ಕವಿತಾ ಮಾಲೋತ್‌ ಜೊತೆಗೆ ಮತ್ತು ಅವರ ಸಹಾಯಕ ಶೌಕತ್ ಅಲಿ ಅವರಿಗೂ ಶಿಕ್ಷೆ ವಿಧಿಸಿದ್ದು, ಇಬ್ಬರಿಗೂ ಜಾಮೀನು ನೀಡಲಾಗಿದೆ. ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಆರೋಪಿಗಳಿಗೆ ಜಾಮೀನು ನೀಡಲಾಗಿದೆ. ತಮ್ಮ ಶಿಕ್ಷೆಯ ವಿರುದ್ದ ಕವಿತಾ ಅವರು ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಂಸದೆ ಕವಿತಾ ಮಾಲೋತ್ ಅವರ ಸಹಾಯಕ ಶೌಕತ್ ಅಲಿ ಅವರು 2019ರ ಲೋಸಭಾ ಚುನಾವಣಾ ವೇಳೆಯಲ್ಲಿ ಮತದಾರರಿಗೆ 500 ರೂಪಾಯಿ ಲಂಚ ನೀಡುತ್ತಿದ್ದ ವೇಳೆ ಬುರ್ಗಂಪಹಾದ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಕೊರೊನಾ ಭೀತಿ ಸೃಷ್ಟಿಸಿದ ಆರೋಪ: ಟಿವಿ ಪ್ಯಾನಲಿಸ್ಟ್‌ ವಿರುದ್ಧ ದೂರ ದಾಖಲಿಸಿದ ತೆಲಂಗಾಣ ಸರ್ಕಾರ

ಕವಿತಾ ಮಾಲೋತ್ ಅವರ ಸಹಾಯಕ ಶೌಕತ್ ಅಲಿಯನ್ನು ರೆಡ್‌ಹ್ಯಾಂಡ್‌ ಆಗಿ ಸೆರೆಹಿಡಿದ ಬುರ್ಗಂಪಹಾದ್ ಪೊಲೀಸರು, ಲಂಚ ಪ್ರಕರಣದಲ್ಲಿ ಅಲಿಯನ್ನು ಮೊದಲ ಆರೋಪಿ ಎಂದೂ, ಕವಿತಾ ಅವರನ್ನು ಎರಡನೇ ಆರೋಪಿ ಎಂದು ಪ್ರಕರಣ ದಾಖಲಿಸಿದ್ದರು. ಪೊಲೀಸರ ವಿಚಾರಣೆ ವೇಳೆ ಅಲಿ ಕೂಡ ಈ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಕವಿತಾ ತನಗೆ ನೀಡಿದ್ದ ಹಣವನ್ನು ವಿತರಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಈ ಹಿಂದೆಯೂ ವಿಶೇಷ ಸೆಷನ್ಸ್ ನ್ಯಾಯಾಲಯ ಅಪರಾಧ ಎಸಗಿದ ಸಂಸದರಿಗೆ ಶಿಕ್ಷೆ ವಿಧಿಸಿತ್ತು. ಈ ಹಿಂದೆ ಬಿಜೆಪಿ ಶಾಸಕ ರಾಜ ಸಿಂಗ್ ಮತ್ತು ಟಿಆರ್‌ಎಸ್‌ ಶಾಸಕ ದಾನಮ್ ನಾಗೇಂದರ್ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಶಾಸಕರ ಮೇಲೆ ತ್ವರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಆದೇಶವನ್ನು ಅನುಸರಿಸಿ 2018 ರ ಮಾರ್ಚ್‌ನಲ್ಲಿ ವಿಶೇಷ ಸೆಷನ್ಸ್ ನ್ಯಾಯಾಲಯವನ್ನು ಸ್ಥಾಪಿಸಲಾಗಿತ್ತು. ಬೊಲಾರಮ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದರೆ, ಬಂಜಾರ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ದಾನಮ್ ನಾಗೇಂದರ್ ಅವರಿಗೆ ಶಿಕ್ಷೆ ವಿಧಿಸಲಾಗಿತ್ತು.


ಇದನ್ನೂ ಓದಿ: ತೆಲಂಗಾಣ: 40,000 ಕೋಟಿ ಸಾಲವಿದ್ದರೂ ಅಧಿಕಾರಿಗಳಿಗೆ ಐಷಾರಾಮಿ ಕಾರು ನೀಡಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...