Homeಮುಖಪುಟರಾಷ್ಟ್ರವ್ಯಾಪಿ ಮುಷ್ಕರ ಹಿಂಪಡೆದ ಲಾರಿ ಚಾಲಕರು

ರಾಷ್ಟ್ರವ್ಯಾಪಿ ಮುಷ್ಕರ ಹಿಂಪಡೆದ ಲಾರಿ ಚಾಲಕರು

- Advertisement -
- Advertisement -

ಕೇಂದ್ರ ಸರ್ಕಾರದ ಹೊಸ ಕ್ರಿಮಿನಲ್ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ಲಾರಿ ಚಾಲಕರು ಹಮ್ಮಿಕೊಂಡಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ, ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ.

ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಹೊಸ ಕ್ರಿಮಿನಲ್‌ ಕಾನೂನಿನಲ್ಲಿ ಹಿಟ್‌ ಅಂಡ್‌ ರನ್ ಪ್ರಕರಣಗಳಿಗೆ ಜೈಲು ಶಿಕ್ಷೆಯ ಮಿತಿಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಲಾರಿ ಚಾಲಕರು ರಾಷ್ಟ್ರವ್ಯಾಪಿ ಮುಷ್ಕರ ಕೈಗೊಂಡಿದ್ದರು. ಜನವರಿ 1ರಿಂದ ಮುಷ್ಕರ ಆರಂಭಗೊಂಡಿತ್ತು. ಲಾರಿ ಚಾಲಕರ ಮುಷ್ಕರಕ್ಕೆ ಬಸ್, ಆಟೋ ಚಾಲಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದರು.

ಇದರಿಂದ ಅಗತ್ಯ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆ ಎಐಎಂಟಿಸಿ ಮುಖಂಡರೊಂದಿಗೆ ನಿನ್ನೆ(ಜ.2) ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಮಾತುಕತೆ ನಡೆಸಿದ್ದು, ಅದು ಸಫಲಗೊಂಡಿದೆ.

ಹೊಸ ಕ್ರಿಮಿನಲ್‌ ಕಾನೂನಿಗೆ ವಿರೋಧವೇಕೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಎರಡು ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಹೊಸ ಕಾನೂನಿನ ವಿರುದ್ಧ ಮಹಾರಾಷ್ಟ್ರ, ಉತ್ತರ ಪ್ರದೇಶ, ಹರಿಯಾಣ, ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿತ್ತು.

“ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ” ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚೆಗೆ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಮೂರು ಕ್ರಿಮಿನಲ್ ಕಾನೂಗಳಾದ ಭಾರತೀಯ ನ್ಯಾಯ (ಎರಡನೆಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೆಯ) ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ (ಎರಡನೆಯ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.

ಈ ಮೂರು ಕಾನೂನಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ- 1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್- 1898, ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-1872 ಅನ್ನು ಬದಲಾಯಿಸುತ್ತದೆ. ಭಾರತೀಯ ನ್ಯಾಯ ಸಂಹಿತೆ ಜಾರಿಯಾದರೆ, ಭಾರತೀಯ ದಂಡ ಸಂಹಿತೆ (IPC)ರದ್ದಾಗಲಿದೆ.

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ

ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು, 3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಕೋರಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ : ಬಿಜೆಎ ವತಿಯಿಂದ ಜ.3ರಿಂದ “ಜನ ಗಣ ಮನ ಅಭಿಯಾನ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...