Homeಅಂತರಾಷ್ಟ್ರೀಯ12 ದೇಶದ ಪ್ರಜೆಗಳ ಅಮೆರಿಕ ಪ್ರವೇಶಕ್ಕೆ ನಿಷೇಧ ಹೇರಿದ ಟ್ರಂಪ್ ಆಡಳಿತ

12 ದೇಶದ ಪ್ರಜೆಗಳ ಅಮೆರಿಕ ಪ್ರವೇಶಕ್ಕೆ ನಿಷೇಧ ಹೇರಿದ ಟ್ರಂಪ್ ಆಡಳಿತ

- Advertisement -
- Advertisement -

ರಾಷ್ಟ್ರೀಯ ಭದ್ರತಾ ಅಪಾಯಗಳನ್ನು ಉಲ್ಲೇಖಿಸಿ 12 ದೇಶದ ಪ್ರಜೆಗಳು ಅಮೆರಿಕ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸುವ ಆದೇಶವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

“ಟ್ರಂಪ್ ಅವರ ಘೋಷಣೆಯು ಸ್ಕ್ರೀನಿಂಗ್ ಮತ್ತು ಪರಿಶೀಲನೆಗೆ ಸಂಬಂಧಿಸಿದಂತೆ ಕೊರತೆಯನ್ನು ಹೊಂದಿರುವ ಮತ್ತು ಯುನೈಟೆಡ್ ಸ್ಟೇಟ್ಸ್‌ಗೆ ಹೆಚ್ಚಿನ ಅಪಾಯವನ್ನುಂಟುಮಾಡುವ 12 ದೇಶಗಳ ಪ್ರಜೆಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸುತ್ತದೆ ಮತ್ತು ಮಿತಿಗೊಳಿಸುತ್ತದೆ” ಎಂದು ಶ್ವೇತಭವನ ಹೇಳಿಕೆಯಲ್ಲಿ ವಿವರಿಸಿದೆ.

“ನಮ್ಮ ದೇಶಕ್ಕೆ ಬಂದು ನಮಗೆ ಹಾನಿ ಮಾಡಲು ಬಯಸುವ ಅಪಾಯಕಾರಿ ವಿದೇಶಿಗರಿಂದ ಅಮೆರಿಕನ್ನರನ್ನು ರಕ್ಷಿಸುವ ಭರವಸೆಯನ್ನು ಅಧ್ಯಕ್ಷ ಟ್ರಂಪ್ ಈಡೇರಿಸುತ್ತಿದ್ದಾರೆ” ಎಂದು ಶ್ವೇತಭವನದ ವಕ್ತಾರೆ ಅಬಿಗೈಲ್ ಜಾಕ್ಸನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಆಡಳಿತದ ಮೊದಲ ಅವಧಿಯಲ್ಲಿ ಏಳು ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರ ಮೇಲೆ ನಿರ್ಬಂಧಗಳನ್ನು ಹೇರಲಾಗಿತ್ತು. ಈ ನೀತಿಯು 2018 ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಅನುಮೋದನೆ ಪಡೆಯುವ ಮೊದಲು ಹಲವಾರು ಪರಿಷ್ಕರಣೆಗಳಿಗೆ ಒಳಗಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಟ್ರಂಪ್ ಆಡಳಿತದ ಬಳಿಕ ಬಂದ ಡೆಮಾಕ್ರಟಿಕ್ ಸರ್ಕಾರದ ಅಧ್ಯಕ್ಷ ಜೋ ಬೈಡೆನ್ 2021ರಲ್ಲಿ ಈ ನಿರ್ಬಂಧಗಳನ್ನು ರದ್ದುಗೊಳಿಸಿದರು. “ಇದು ನಮ್ಮ ರಾಷ್ಟ್ರೀಯ ಆತ್ಮಸಾಕ್ಷಿಯ ಮೇಲಿನ ಕಳಂಕ” ಎಂದು ಅವರು ಹೇಳಿದ್ದರು.

ನಿರ್ಬಂಧಕ್ಕೆ ಒಳಗಾದ 12 ದೇಶಗಳು ಯಾವುವು?

ವರದಿಗಳ ಪ್ರಕಾರ, ಅಫ್ಘಾನಿಸ್ತಾನ, ಮ್ಯಾನ್ಮಾರ್, ಛಡ್, ಕಾಂಗೋ ಗಣರಾಜ್ಯ, ಈಕ್ವಿಟೇರಿಯಲ್ ಗುನಿಯಾ, ಎರಿಟ್ರಿಯಾ, ಹೈಟಿ, ಇರಾನ್, ಲಿಬಿಯಾ, ಸೋಮಾಲಿಯಾ, ಸುಡಾನ್, ಯೆಮನ್ ದೇಶಗಳ ಪ್ರಜೆಗಳ ಅಮೆರಿಕ ಪ್ರವೇಶಕ್ಕೆ ಟ್ರಂಪ್ ಆಡಳಿತ ನಿರ್ಬಂಧ ವಿಧಿಸಿದೆ.

ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...