Homeಅಂತರಾಷ್ಟ್ರೀಯತನ್ನ ತಾಳಕ್ಕೆ ತಕ್ಕಂತೆ ಕುಣಿಯದ ಹಾರ್ವರ್ಡ್‌: ಅನುದಾನ ಸ್ಥಗಿತಗೊಳಿಸಿದ ಟ್ರಂಪ್ ಆಡಳಿತ

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ ಹಾರ್ವರ್ಡ್‌: ಅನುದಾನ ಸ್ಥಗಿತಗೊಳಿಸಿದ ಟ್ರಂಪ್ ಆಡಳಿತ

- Advertisement -
- Advertisement -

ತನ್ನ ತಾಳಕ್ಕೆ ತಕ್ಕಂತೆ ಕುಣಿಯದ ವಿಶ್ವಪ್ರಸಿದ್ದ ಹಾರ್ವರ್ಡ್‌ ವಿಶ್ವ ವಿದ್ಯಾಲಯದ 2.2 ಬಿಲಿಯನ್‌ ಡಾಲರ್‌ಗಿಂತಲೂ ಹೆಚ್ಚಿನ ಅನುದಾನ ಮತ್ತು 60 ಮಿಲಿಯನ್‌ಗಿಂತಲೂ ಹೆಚ್ಚಿನ ಮೌಲ್ಯದ ಒಪ್ಪಂದಗಳನ್ನು ಯುಎಸ್‌ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತ ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

ಶ್ವೇತಭವನದಿಂದ ಬಂದ ಅವಶ್ಯಕತೆಗಳ ಪಟ್ಟಿಯನ್ನು ಹಾರ್ವರ್ಡ್ ತಿರಸ್ಕರಿಸಿದ ಕೆಲವೇ ಗಂಟೆಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯಹೂದಿ ವಿರೋಧಿ ನೀತಿಯನ್ನು ಎದುರಿಸುವುದು ಮತ್ತು ವಿಶ್ವವಿದ್ಯಾನಿಲಯದ ಆಡಳಿತ, ಪ್ರವೇಶ ಮತ್ತು ನೇಮಕಾತಿ ಪದ್ಧತಿಗಳನ್ನು ಸುಧಾರಿಸುವ ಗುರಿಯನ್ನು ಇದು ಹೊಂದಿದೆ.

“ಹಾರ್ವರ್ಡ್‌ನ ಪ್ರತಿಕ್ರಿಯೆಯು ನಮ್ಮ ದೇಶದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಚಾಲ್ತಿಯಲ್ಲಿರುವ ದೇಶ ವಿರೋಧಿ ಮನಸ್ಥಿತಿಗಳನ್ನು ಬಲಪಡಿಸುತ್ತದೆ” ಎಂದು ಯುಎಸ್ ಶಿಕ್ಷಣ ಇಲಾಖೆ ಹೇಳಿಕೆಯಲ್ಲಿ ತಿಳಿಸಿರುವುದಾಗಿ ವರದಿಗಳು ಹೇಳಿವೆ.

ಶುಕ್ರವಾರ ಶ್ವೇತಭವನವು ಹೊಸ ಮತ್ತು ವಿಸ್ತೃತ ಬೇಡಿಕೆಗಳ ಪಟ್ಟಿಯನ್ನು ಕಳುಹಿಸಿದ್ದು, ಫೆಡರಲ್ ಸರ್ಕಾರದೊಂದಿಗೆ ಆರ್ಥಿಕ ಸಂಬಂಧವನ್ನು ಕಾಪಾಡಿಕೊಳ್ಳಲು ಹಾರ್ವರ್ಡ್ ಅವುಗಳನ್ನು ಪಾಲಿಸಬೇಕು ಎಂಬುವುದಾಗಿ ಎಚ್ಚರಿಸಲಾಗಿದೆ ಎಂದು ಹಾರ್ವರ್ಡ್ ಅಧ್ಯಕ್ಷ ಅಲನ್ ಗಾರ್ಬರ್ ಸೋಮವಾರ (ಏ.14) ವಿಶ್ವವಿದ್ಯಾಲಯ ಸಮುದಾಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ನಾವು ಅವರ ಪ್ರಸ್ತಾವಿತ ಒಪ್ಪಂದವನ್ನು ಸ್ವೀಕರಿಸುವುದಿಲ್ಲ ಎಂದು ನಮ್ಮ ಕಾನೂನು ಸಲಹೆಗಾರರ ​​ಮೂಲಕ ಆಡಳಿತಕ್ಕೆ ತಿಳಿಸಿದ್ದೇವೆ” ಎಂದು ಗಾರ್ಬರ್ ಹೇಳಿದ್ದಾರೆ. “ವಿಶ್ವವಿದ್ಯಾನಿಲಯವು ತನ್ನ ಸ್ವಾತಂತ್ರ್ಯವನ್ನು ಅಥವಾ ತನ್ನ ಸಾಂವಿಧಾನಿಕ ಹಕ್ಕುಗಳನ್ನು ಬಿಟ್ಟುಕೊಡುವುದಿಲ್ಲ” ಎಂದಿದ್ದಾರೆ.

ಹಾರ್ವರ್ಡ್ ವಿಶ್ವವಿದ್ಯಾಲಯವು ಯಹೂದಿ ವಿರೋಧಿ ಹೋರಾಟವನ್ನು ಲಘುವಾಗಿ ಪರಿಗಣಿಸಿಲ್ಲ. ಆದರೂ, ಸರ್ಕಾರದ ಹಲವು ಬೇಡಿಕೆಗಳು ಅತಿರೇಕದಿಂದ ಕೂಡಿವೆ. ಸರ್ಕಾರ ಮುಂದಿಟ್ಟಿರುವ ಕೆಲವು ಬೇಡಿಕೆಗಳು ಯಹೂದಿ ವಿರೋಧಿ ಹೋರಾಟವನ್ನು ತಡೆಯುವ ಗುರಿಯನ್ನು ಹೊಂದಿದ್ದರೂ, ಬಹುಪಾಲು ಬೇಡಿಕೆಗಳು ಹಾರ್ವರ್ಡ್‌ನ ‘ಬೌದ್ಧಿಕ ಪರಿಸ್ಥಿತಿಗಳ’ ನೇರ ಸರ್ಕಾರಿ ನಿಯಂತ್ರಣವನ್ನು ತೋರಿಸುತ್ತದೆ ಎಂದು ಗಾರ್ಬರ್ ಹೇಳಿದ್ದಾಗಿ ಬಿಬಿಸಿ ವರದಿ ಮಾಡಿದೆ.

ಗಾರ್ಬರ್ ಅವರ ಪತ್ರದ ಬೆನ್ನಲ್ಲೇ ಯುಎಸ್‌ ಶಿಕ್ಷಣ ಇಲಾಖೆಯು ನಿಧಿ ಸ್ಥಗಿತವನ್ನು ಘೋಷಿಸಿದೆ. “ಇತ್ತೀಚಿನ ವರ್ಷಗಳಲ್ಲಿ ಕ್ಯಾಂಪಸ್‌ಗಳನ್ನು ಕಾಡುತ್ತಿರುವ ಕಲಿಕೆಯ ಅಡ್ಡಿ ಸ್ವೀಕಾರಾರ್ಹವಲ್ಲ. ಯಹೂದಿ ವಿದ್ಯಾರ್ಥಿಗಳ ಮೇಲಿನ ಕಿರುಕುಳ ಅಸಹನೀಯ. ಗಣ್ಯ ವಿಶ್ವವಿದ್ಯಾನಿಲಯಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುವ ಮತ್ತು ತೆರಿಗೆದಾರರ ಬೆಂಬಲವನ್ನು ಪಡೆಯುವುದನ್ನು ಮುಂದುವರಿಸಲು ಬಯಸಿದರೆ ಅರ್ಥಪೂರ್ಣ ಬದಲಾವಣೆಗೆ ಬದ್ಧರಾಗುವ ಸಮಯ ಇದು” ಎಂದು ಶಿಕ್ಷಣ ಇಲಾಖೆ ಹೇಳಿದೆ.

ಅಮೆರಿಕನ್ ಮೌಲ್ಯಗಳಿಗೆ ವಿರುದ್ದವಾಗಿರುವ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಬೇಕು.ಯಹೂದಿ ವಿರೋಧಿ ಮನಸ್ಥಿತಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಪರಿಶೀಲಿಸಲು ಬಾಹ್ಯ ಸರ್ಕಾರ-ಅನುಮೋದಿತ ಪಕ್ಷಕ್ಕೆ ಅವಕಾಶ ನೀಡಬೇಕು. ಕ್ಯಾಂಪಸ್‌ನಲ್ಲಿ ಮಾಸ್ಕ್‌ ನಿಷೇಧಿಸುವುದು, ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ ಉಪಕ್ರಮಗಳನ್ನು ಕೊನೆಗೊಳಿಸುವುದು, ಅಪರಾಧ ಚಟುವಟಿಕೆ, ಹಿಂಸೆ ಅಥವಾ ಕಿರುಕುಳವನ್ನು ಉತ್ತೇಜಿಸುವ ಆರೋಪ ಹೊತ್ತಿರುವ ವಿದ್ಯಾರ್ಥಿ ಕ್ಲಬ್‌ಗಳ ಮಾನ್ಯತೆ ರದ್ದುಪಡಿಸುವುದು ಸರ್ಕಾರದ ಬೇಡಿಕೆಗಳಲ್ಲಿ ಸೇರಿವೆ.

ಗಾಜಾ ಮೇಲಿನ ಇಸ್ರೇಲ್ ಆಕ್ರಮಣ ಮತ್ತು ಅದಕ್ಕೆ ಅಮೆರಿಕದ ಬೆಂಬಲದ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯಗಳು ಯಹೂದಿ ವಿರೋಧಿತ್ವವನ್ನು ಪ್ರವರ್ಧಮಾನಕ್ಕೆ ತರಲು ಅವಕಾಶ ಮಾಡಿಕೊಟ್ಟಿವೆ ಎಂದು ಶ್ವೇತಭವನ ವಾದಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹಾರ್ವರ್ಡ್ ಫೆಡರಲ್ ಹೂಡಿಕೆಯನ್ನು ಸಮರ್ಥಿಸುವ ಬೌದ್ಧಿಕ ಮತ್ತು ನಾಗರಿಕ ಹಕ್ಕುಗಳ ಷರತ್ತುಗಳನ್ನು ಪೂರೈಸಲು ವಿಫಲವಾಗಿದೆ ಎಂದು ಆಡಳಿತವು ಶುಕ್ರವಾರ ಬರೆದ ಪತ್ರದಲ್ಲಿ ತಿಳಿಸಿದೆ.

ಗಾಜಾ ಕದನವಿರಾಮ ಮಾತುಕತೆ: ಕತಾರ್‌ಗೆ ನಿಯೋಗ ಕಳುಹಿಸುತ್ತಿರುವುದಾಗಿ ಹೇಳಿದ ಹಮಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...