Homeಅಂತರಾಷ್ಟ್ರೀಯನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

ನಾಲ್ಕು ದೇಶಗಳ 5.32 ಲಕ್ಷ ನಾಗರಿಕರ ಗಡಿಪಾರಿಗೆ ಮುಂದಾದ ಟ್ರಂಪ್ ಆಡಳಿತ

- Advertisement -
- Advertisement -

ಕ್ಯೂಬಾ, ಹೈಟಿ, ನಿಕರಾಗುವಾ ಮತ್ತು ವೆನೆಜುವೆಲಾದ ಲಕ್ಷಾಂತರ ನಾಗರಿಕರಿಗೆ ನೀಡಿದ್ದ ಕಾನೂನು ರಕ್ಷಣೆಗಳನ್ನು ರದ್ದುಗೊಳಿಸುವುದಾಗಿ ಅಮೆರಿಕದ ಹೋಮ್‌ಲ್ಯಾಂಡ್ ಸೆಕ್ಯುರಿಟಿ ಇಲಾಖೆ ಹೇಳಿದ್ದು, ಮುಂದಿನ ಒಂದು ತಿಂಗಳಲ್ಲಿ ಅವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ.

ಈ ಆದೇಶವು ಅಕ್ಟೋಬರ್ 2022ರ ನಂತರ ಅಮೆರಿಕ್ಕೆ ಬಂದಿರುವ ನಾಲ್ಕು ದೇಶಗಳ ಸುಮಾರು 5,32,000 ಜನರಿಗೆ ಅನ್ವಯಿಸುತ್ತದೆ. ಆರ್ಥಿಕ ಪ್ರಾಯೋಜಕರೊಂದಿಗೆ ಅಮೆರಿಕಕ್ಕೆ ಬಂದಿರುವ ಇವರು, ಎರಡು ವರ್ಷಗಳ ಕಾಲ ದೇಶದಲ್ಲಿ ಉಳಿಯಲು ಮತ್ತು ಕೆಲಸ ಮಾಡಲು ಅರ್ಹರು ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಇವರು ಏಪ್ರಿಲ್ 24ರಂದು ಅಥವಾ ಫೆಡರಲ್ ರಿಜಿಸ್ಟರ್‌ನಲ್ಲಿ ನೋಟಿಸ್ ಪ್ರಕಟವಾದ 30 ದಿನಗಳಲ್ಲಿ ಅಮೆರಿಕದಲ್ಲಿ ಉಳಿಯುವ ತಮ್ಮ ಕಾನೂನು ಸ್ಥಾನಮಾನವನ್ನು ಕಳೆದುಕೊಳ್ಳಲಿದ್ದಾರೆ.

ಹೊಸ ನೀತಿಯು ಈಗಾಗಲೇ ಅಮೆರಿಕದಲ್ಲಿರುವ ಮತ್ತು ಮಾನವೀಯ ಪೆರೋಲ್ ಕಾರ್ಯಕ್ರಮದ ಅಡಿಯಲ್ಲಿ ಬಂದ ಜನರ ಮೇಲೆ ಪರಿಣಾಮ ಬೀರಲಿದೆ.

ಯುದ್ಧ ಅಥವಾ ರಾಜಕೀಯ ಅಸ್ಥಿರತೆ ಇರುವ ದೇಶಗಳ ಜನರು ಅಮೆರಿಕಕ್ಕೆ ಪ್ರವೇಶಿಸಲು ಮತ್ತು ತಾತ್ಕಾಲಿಕವಾಗಿ ವಾಸಿಸಲು ಅಧ್ಯಕ್ಷರು ದೀರ್ಘಕಾಲದಿಂದ ಬಳಸುತ್ತಿರುವ ಕಾನೂನು ಸಾಧನವಾದ ಮಾನವೀಯ ಪೆರೋಲ್‌ನ “ವಿಶಾಲ ದುರುಪಯೋಗ”ವನ್ನು ಕೊನೆಗೊಳಿಸಲು ಟ್ರಂಪ್ ಆಡಳಿತವು ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಲಾಗಿದೆ.

ತಮ್ಮ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಲಕ್ಷಾಂತರ ಜನರನ್ನು ಗಡಿಪಾರು ಮಾಡುವುದಾಗಿ ಭರವಸೆ ನೀಡಿದ್ದರು. ಅಧ್ಯಕ್ಷರಾಗಿ ಅವರು ವಲಸಿಗರು ಅಮೆರಿಕಕ್ಕೆ ಬಂದು ಉಳಿಯಲು ಇರುವ ಕಾನೂನುಬದ್ಧ ಮಾರ್ಗಗಳನ್ನು ಸಹ ಕೊನೆಗೊಳಿಸುತ್ತಿದ್ದಾರೆ.

ಹೊಸ ಆದೇಶದ ಮೊದಲು, ಮಾನವೀಯ ಪೆರೋಲ್‌ನಲ್ಲಿ ಬಂದವರು ತಮ್ಮ ಪೆರೋಲ್ ಅವಧಿ ಮುಗಿಯುವವರೆಗೆ ಅಮೆರಿಕದಲ್ಲಿಯೇ ಉಳಿಯಬಹುದಿತ್ತು. ಆದರೆ, ಟ್ರಂಪ್ ಆಡಳಿತ ಅವರಿಗೆ ಹೆಚ್ಚು ಕಾಲ ಉಳಿಯಲು ಅನುವು ಮಾಡಿಕೊಡುವ ಆಶ್ರಯ ವೀಸಾಗಳು ಮತ್ತು ಇತರ ವಿನಂತಿಗಳಿಗಾಗಿ ಅವರ ಅರ್ಜಿಗಳನ್ನು ಪ್ರಕ್ರಿಯೆಗೊಳಿಸುವುದನ್ನು ನಿಲ್ಲಿಸಿತ್ತು.

ಸರ್ಕಾರದ ನಿರ್ಧಾರವನ್ನು ಈಗಾಗಲೇ ಫೆಡರಲ್ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಾಗಿದೆ.

ಅಮೆರಿಕದ ನಾಗರಿಕರು ಮತ್ತು ವಲಸಿಗರ ಗುಂಪೊಂದು ಮಾನವೀಯ ಪೆರೋಲ್ ಅನ್ನು ಕೊನೆಗೊಳಿಸಿದ್ದಕ್ಕಾಗಿ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ಹೂಡಿದೆ ಮತ್ತು ನಾಲ್ಕು ರಾಷ್ಟ್ರಗಳಿಗೆ ನೀಡಿದ್ದ ಸೌಲಭ್ಯಗಳನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿದೆ.

ಈ ಹಿಂದಿನ ಬೈಡೆನ್‌ ಆಡಳಿತವು ನಾಲ್ಕು ದೇಶಗಳಿಂದ ತಿಂಗಳಿಗೆ 30,000 ಜನರು ಎರಡು ವರ್ಷಗಳ ಕಾಲ ಅಮೆರಿಕಕ್ಕೆ ಕೆಲಸ ಮಾಡುವ ಅರ್ಹತೆಯೊಂದಿಗೆ ಬರಲು ಅವಕಾಶ ಮಾಡಿಕೊಟ್ಟಿತ್ತು. ಈ ದೇಶಗಳ ಜನರನ್ನು ಗಡಿಪಾರು ಮಾಡಿದರೆ ಅವರನ್ನು ಸ್ವೀಕರಿಸಲು ಮೆಕ್ಸಿಕೊದ ಮನವೊಲಿಸಿತ್ತು.

ಕ್ಯೂಬಾ ಸಾಮಾನ್ಯವಾಗಿ ತಿಂಗಳಿಗೆ ಒಂದು ಗಡಿಪಾರು ವಿಮಾನದ ಮೂಲಕ ಹೋಗಲು ಒಪ್ಪಿಕೊಂಡಿತ್ತು. ಆದರೆ, ವೆನೆಜುವೆಲಾ ಮತ್ತು ನಿಕರಾಗುವಾ ಇದಕ್ಕೆ ಒಪ್ಪಿರಲಿಲ್ಲ. ಈ ಮೂರು ಅಮೆರಿಕದ ವಿರೋಧಿ ದೇಶಗಳಾಗಿವೆ.

2021 ರಲ್ಲಿ ಟೆಕ್ಸಾಸ್‌ನ ಡೆಲ್ ರಿಯೊ ಎಂಬ ಸಣ್ಣ ಗಡಿ ಪಟ್ಟಣದಲ್ಲಿ ಕೆರಿಬಿಯನ್ ದೇಶದ ವಲಸಿಗರ ಸಂಖ್ಯೆ ಹೆಚ್ಚಳವಾದಾಗ, ಹೈಟಿ ಅನೇಕ ಗಡಿಪಾರು ವಿಮಾನಗಳನ್ನು ಸ್ವೀಕರಿಸಿತ್ತು. ಆದರೆ, ಹೈಟಿ ನಿರಂತರ ಪ್ರಕ್ಷುಬ್ಧತೆಯಲ್ಲಿದೆ, ಇದು ಅಮೆರಿಕದ ಪ್ರಯತ್ನಗಳಿಗೆ ಅಡ್ಡಿಯಾಯಿತು.

2022ರ ಅಂತ್ಯದಿಂದ, ಸಿಹೆಚ್‌ಎನ್‌ವಿ ಎಂದೂ ಕರೆಯಲ್ಪಡುವ ಈ ನೀತಿಯಡಿಯಲ್ಲಿ ಅರ್ಧ ಮಿಲಿಯನ್‌ಗಿಂತಲೂ ಹೆಚ್ಚು ಜನರು ಅಮೆರಿಕಕ್ಕೆ ಬಂದಿದ್ದಾರೆ. ಅಕ್ರಮವಾಗಿ ಗಡಿ ದಾಟಿದವರನ್ನು ಹತ್ತಿಕ್ಕುವಾಗ, ಹೊಸ ಕಾನೂನು ಮಾರ್ಗಗಳ ಮೂಲಕ ಬರುವಂತೆ ಜನರನ್ನು ಪ್ರೋತ್ಸಾಹಿಸುವುದು ಬೈಡೆನ್‌ ಆಡಳಿತದ ವಿಧಾನದ ಒಂದು ಭಾಗವಾಗಿತ್ತು.

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...