Homeಅಂತರಾಷ್ಟ್ರೀಯಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

- Advertisement -
- Advertisement -

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ.

“ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ ನಡೆಸುವ ಯಾವುದೇ ದೇಶವು ಅಮೆರಿಕ ಸಂಯುಕ್ತ ಸಂಸ್ಥಾನದೊಂದಿಗೆ ಮಾಡುವ ಎಲ್ಲಾ ವ್ಯವಹಾರಗಳ ಮೇಲೆ ಶೇಕಡ 25 ಸುಂಕವನ್ನು ಪಾವತಿಸಬೇಕು. ಈ ಆದೇಶವು ಅಂತಿಮ ಮತ್ತು ನಿರ್ಣಾಯಕವಾಗಿದೆ” ಎಂದು ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ಹೇಳಿದ್ದಾರೆ.

ಟ್ರೇಡಿಂಗ್ ಎಕನಾಮಿಕ್ಸ್ ಎಂಬ ಆರ್ಥಿಕ ಡೇಟಾಬೇಸ್ ಪ್ರಕಾರ, ಚೀನಾ, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ಇರಾಕ್ ಇರಾನ್‌ನ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರಗಳಾಗಿವೆ. ನಂತರ ಸ್ಥಾನದಲ್ಲಿ ಭಾರತವಿದೆ. ಹಾಗಾಗಿ, ಟ್ರಂಪ್‌ನ ಹೊಸ ಸುಂಕ ಭಾರತದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಇರಾನ್ ವಿರುದ್ಧ ಸಂಭಾವ್ಯ ಮಿಲಿಟರಿ ಕ್ರಮದ ಬಗ್ಗೆ ಟ್ರಂಪ್ ಚಿಂತಿಸುತ್ತಿರುವಾಗಲೇ ಈ ಸುಂಕ ಘೋಷಣೆ ಹೊರಬಿದ್ದಿದೆ. ಮಾನವ ಹಕ್ಕುಗಳ ಗುಂಪುಗಳು ಇರಾನ್‌ನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿ ಮಾಡಿವೆ.

ಇರಾನ್‌ ಮೇಲೆ ದಾಳಿ ನಡೆಸುವುದು ಅಮೆರಿಕ ಮುಂದಿರುವ ಹಲವು ಆಯ್ಕೆಗಳಲ್ಲಿ ಒಂದಾಗಿವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಸೋಮವಾರ ಹೇಳಿದ್ದಾರೆ.

ಇರಾನ್ ಹೊರಗೆ (ಪ್ರಪಂಚಕ್ಕೆ) ಕಠಿಣವಾಗಿ, ಬಲಿಷ್ಠವಾಗಿ ಮಾತನಾಡುತ್ತಿದ್ದರೂ, ಒಳಗೆ (ಖಾಸಗಿಯಾಗಿ) ಟ್ರಂಪ್ ಪ್ರತಿನಿಧಿಯೊಂದಿಗೆ ಮಾತುಕತೆ ನಡೆಸಲು ಮುಕ್ತ ಮನಸ್ಸಿನಿಂದ, ಸೌಮ್ಯವಾದ ಧೋರಣೆಯನ್ನು ತೋರಿಸುತ್ತಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...

ಗೋಣಿ ತುಮಕೂರು ಅಸ್ಪೃಶ್ಯತೆ ಆಚರಣೆ ಪ್ರಕರಣ: ತಹಶೀಲ್ದಾರ್ ಸಮ್ಮುಖದಲ್ಲಿ ದೇಗುಲ ಪ್ರವೇಶಿಸಿದ ನವ ದಂಪತಿ

ಕಳೆದ ವಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದ ದಲಿತ ನವ ದಂಪತಿ ದೇಗುಲ  ಪ್ರವೇಶ ಹಾಗೂ ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ತಾಲೂಕು ಗೋಣಿ ತುಮಕೂರು ಗ್ರಾಮದಲ್ಲಿರುವ ಸವರ್ಣೀಯ ಮತ್ತು ದಲಿತ ಜನಾಂಗದ ನಡುವೆ...

ದ್ವೇಷ ಭಾಷಣ ಆರೋಪ: ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಎಫ್ಐಆರ್ 

ಯಾದಗಿರಿ ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಆಚರಣೆಯ ಸಂದರ್ಭದಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಿಲ್ಲೆಯ ಗುರ್ಮಿತ್ಕಲ್ ಪಟ್ಟಣದಲ್ಲಿ ಈ...