ಜನವರಿ 20 ರಂದು ನಡೆಯಲಿರುವ ಚುನಾಯಿತ ಅಧ್ಯಕ್ಷ ಜೋ ಬೈಡನ್‌ರ ಪ್ರಮಾಣವಚನ ಸ್ವೀಕಾರದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರ ರಾಜಧಾನಿ ವಾಶಿಂಗ್ಟನ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಜೋ ಬೈಡೆನ್ ಅಧಿಕಾರ ಸ್ವೀಕಾರಕ್ಕೂ ಮುನ್ನ ಗಲಭೆಗಳು ನಡೆಯಬಹುದು ಎಂದು ಭದ್ರತಾ ಸಂಸ್ಥೆಗಳು ನೀಡಿರುವ ಎಚ್ಚರಿಕೆಯ ಆಧಾರದಲ್ಲಿ ಅವರು ಈ ಕ್ರಮ ತೆಗೆದುಕೊಂಡಿದ್ದಾರೆ.
ಸ್ಥಳೀಯ ಜನರ ಮೇಲೆ ತುರ್ತು ಪರಿಸ್ಥಿತಿಯ ವ್ಯತಿರಿಕ್ತ ಪರಿಣಾಮಗಳು ಬೀರದಂತೆ ಕ್ರಮವಹಿಸಲು ಆಂತರಿಕ ಭದ್ರತಾ ಇಲಾಖೆ ಮತ್ತು ಕೇಂದ್ರೀಯ ತುರ್ತು ಪರಿಸ್ಥಿತಿ ನಿರ್ವಹಣಾ ಸಂಸ್ಥೆ (ಫೆಮ)ಗಳು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೋಮವಾರ ಬಿಡುಗಡೆ ಮಾಡಲಾದ ಹೇಳಿಕೆಯೊಂದರಲ್ಲಿ ಸೂಚಿಸಲಾಗಿದೆ.
ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ನಿವೃತ್ತಿಯ ಬಗ್ಗೆ BJP ಹೈಕಮಾಂಡ್ ಹೇಳಿದ್ದೇನು?
ತುರ್ತು ಪರಿಸ್ಥಿತಿಯು ವಾಶಿಂಗ್ಟನ್‌ನಲ್ಲಿ ಸೋಮವಾರದಿಂದ ಜನವರಿ 24ರವರೆಗೆ ಜಾರಿಯಲ್ಲಿರುತ್ತದೆ ಎಂದು ಎನ್‌ಟಿವಿ ವರದಿ ಮಾಡಿದೆ.
ಕಳೆದ ವಾರ ಟ್ರಂಪ್ ಅವರ ಸಾವಿರಾರು ಬೆಂಬಲಿಗರು ಅಮೆರಿಕದ ಕ್ಯಾಪಿಟಲ್ ಮೇಲೆ ನಡೆಸಿದ ದಾಳಿಯ ಹಿನ್ನೆಲೆಯಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: ರೈತ ಹೋರಾಟ: ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಗೆ ರಾಜ್ಯ ರೈತ ಸಂಘ ಆಕ್ಷೇಪ


