Homeಅಂತರಾಷ್ಟ್ರೀಯಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲೆ ಪ್ರತಿ ಸುಂಕ : ಟ್ರಂಪ್ ಘೋಷಣೆ

ಕೆನಡಾ, ಮೆಕ್ಸಿಕೊ ಮೇಲೆ ಶೇ.25, ಚೀನಾ ಮೇಲೆ ಶೇ.20ರಷ್ಟು ಸುಂಕ ಹೆಚ್ಚಳ

- Advertisement -
- Advertisement -

ಭಾರತ, ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳು ನಮ್ಮಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚು ಸುಂಕ ವಿಧಿಸುತ್ತಿವೆ ಎಂದು ಟೀಕಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಗಳವಾರ (ಮಾ.4) ರಾತ್ರಿ ಅಮೆರಿಕದ ಸಂಸತ್ತು ಕಾಂಗ್ರೆಸ್‌ನ ಜಂಟಿ ಅಧಿವೇಶನ ಉದ್ದೇಶಿಸಿ ಸುದೀರ್ಘ 2 ಗಂಟೆಗಳಷ್ಟು ಸಮಯ ಮಾತನಾಡಿದ ಟ್ರಂಪ್, ಪ್ರತಿ ಸುಂಕ ವಿಧಿಸುವ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಭಾರತ ಸೇರಿದಂತೆ ವಿಶ್ವದಾದ್ಯಂತ ಹಲವಾರು ದೇಶಗಳು ಬಹಳ ಸಮಯದಿಂದ ನಮ್ಮ ಸರಕುಗಳಿಗೆ ಹೆಚ್ಚಿನ ಸುಂಕ ವಿಧಿಸುತ್ತಿವೆ. ಇದು ಅಮೆರಿಕಕ್ಕೆ ಆಗುತ್ತಿರುವ ‘ಅನ್ಯಾಯ’ಎಂದಿದ್ದಾರೆ.

“ಯುರೋಪಿಯನ್ ಯೂನಿಯನ್, ಚೀನಾ, ಬ್ರೆಝಿಲ್, ಭಾರತ, ಮೆಕ್ಸಿಕೋ ಮತ್ತು ಕೆನಡಾ ಸೇರಿದಂತೆ ಹಲವು ದೇಶಗಳು ನಾವು ಅವುಗಳ ಸರಕುಗಳಿಗೆ ವಿಧಿಸಿದ್ದಕಿಂತ ಭಾರೀ ಪ್ರಮಾಣದ ಸುಂಕವನ್ನು ನಮ್ಮ ಸರಕುಗಳ ಮೇಲೆ ವಿಧಿಸುತ್ತಿದೆ. ದಶಕಗಳಿಂದ ಇದು ನಡೆಯುತ್ತಿದೆ. ಈಗ ನಮ್ಮ ಸರದಿ ನಾವೂ ಪ್ರತಿಸುಂಕ ವಿಧಿಸುತ್ತೇವೆ” ಎಂದು ಟ್ರಂಪ್ ಹೇಳಿದ್ದಾರೆ.

ಭಾರತವನ್ನು ಪ್ರತ್ಯೇಕವಾಗಿ ಉಲ್ಲೇಖಿಸಿದ ಟ್ರಂಪ್ “ಭಾರತ ನಮ್ಮ ಮೇಲೆ ಶೇಖಡ 100ರಷ್ಟು ಸುಂಕ ವಿಧಿಸುತ್ತಿದೆ” ಎಂದಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಭಾರತ ಮತ್ತು ಚೀನಾ ವಿರುದ್ದ ಪ್ರತಿ ಸುಂಕ ಹೇರಲಿದೆ ಎಂದು ಟ್ರಂಪ್ ಹೇಳಿದ್ದರು.

“ನಮ್ಮ ಉತ್ಪನ್ನಗಳ ಮೇಲೆ ಚೀನಾದ ಸರಾಸರಿ ಸುಂಕವು ನಾವು ವಿಧಿಸುವುದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ದಕ್ಷಿಣ ಕೊರಿಯಾದ ಸರಾಸರಿ ಸುಂಕವು ನಾಲ್ಕು ಪಟ್ಟು ಹೆಚ್ಚಿದೆ” ಎಂದು ವಿವರಿಸಿದ್ದಾರೆ.

ಏಪ್ರಿಲ್ 2ರಿಂದ ಪ್ರತಿ ಸುಂಕ

“ಏಪ್ರಿಲ್ 1ರ ಬದಲಾಗಿ, ಏಪ್ರಿಲ್ 2ರಂದು ನಾವು ಹಲವು ರಾಷ್ಟ್ರಗಳ ಸರಕುಗಳ ಮೇಲೆ ಪ್ರತಿ ಸುಂಕ ವಿಧಿಸುತ್ತೇವೆ. ಏಪ್ರಿಲ್ 1ನ್ನು ಮೂರ್ಖರ ದಿನ ಎಂದು ಹೇಳಲಾಗುತ್ತದೆ. ಹಾಗಾಗಿ, ನಮ್ಮ ನಿರ್ಧಾರ ಅದರೊಂದಿಗೆ ಹೊಂದಾಣಿಕೆಯಾಗಬಾರದು ಎಂದಿದ್ದಾರೆ.

“ಅವರು (ವಿವಿಧ ರಾಷ್ಟ್ರಗಳು) ನಮ್ಮ ಮೇಲೆ ಏನೆಲ್ಲ ಸುಂಕ ವಿಧಿಸುತ್ತಿದ್ದಾರೋ, ಅದಕ್ಕೆ ಪ್ರತಿಯಾಗಿ ಏಪ್ರಿಲ್ 2ರಿಂದ ನಾವೂ ಸುಂಕ ವಿಧಿಸುತ್ತೇವೆ. ಅವರು ನಮ್ಮನ್ನು ಅವರ ಮಾರುಕಟ್ಟೆಯಿಂದ ಹೊರಗಿಡಲು ವಿತ್ತೀಯವಲ್ಲದ ಸುಂಕಗಳನ್ನು ವಿಧಿಸಿದರೆ, ಅವರನ್ನು ನಮ್ಮ ಮಾರುಕಟ್ಟೆಯಿಂದ ಹೊರಗಿಡಲು ನಾವು ವಿತ್ತೀಯವಲ್ಲದ ಅಡೆತಡೆಗಳನ್ನು ಮಾಡುತ್ತೇವೆ” ಎಂದು ಟ್ರಂಪ್ ಕಠುವಾಗಿ ಹೇಳಿದ್ದಾರೆ.

ಟ್ರಂಪ್ ಅವರ ಪ್ರತಿ ಸುಂಕ ಘೋಷಣೆಗೆ ಸಂಸತ್‌ನಲ್ಲಿದ್ದ ಅವರ ಬೆಂಬಲಿಗರು ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.

ತನ್ನ ನೆರೆಯ ರಾಷ್ಟ್ರಗಳು ಮತ್ತು ಎರಡು ದೊಡ್ಡ ವ್ಯಾಪಾರ ಪಾಲುದಾರರಾದ ಕೆನಡಾ ಮತ್ತು ಮೆಕ್ಸಿಕೊ ಮೇಲೆ ಶೇ.25 ರಷ್ಟು ಮತ್ತು ಚೀನಾ ಮೇಲೆ ಶೇ.20ರಷ್ಟು ಸುಂಕ ವಿಧಿಸಲು ಸೋಮವಾರ ಅಮೆರಿಕ ನಿರ್ಧರಿಸಿದೆ. ಮಂಗಳವಾರದಿಂದಲೇ ಇದು ಜಾರಿಗೆ ಬಂದಿದೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸರಕುಗಳ ಮೇಲೆ ಏಪ್ರಿಲ್ 2ರಿಂದ ಪ್ರತಿಸುಂಕ ವಿಧಿಸುವ ಘೋಷಣೆಯನ್ನು ಟ್ರಂಪ್ ಮಾಡಿದ್ದಾರೆ.

ಟ್ರಂಪ್‌ಗೆ ತಿರುಗಟು..ಶೇ.15 ಸುಂಕ ಹೆಚ್ಚಿಸಿದ ಚೀನಾ

ಟ್ರಂಪ್ ಪ್ರತಿ ಸುಂಕ ಘೋಷಣೆ ಬೆನ್ನಲ್ಲೇ ಚೀನಾ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುವ ಚಿಕನ್‌, ಹಂದಿ ಮಾಂಸ, ಗೋಮಾಂಸ ಹಾಗೂ ಸೋಯಾ ಉತ್ಪನ್ನಗಳ ಮೇಲೆ ಹೆಚ್ಚುವರಿಯಾಗಿ ಶೇ. 15ರವರೆಗೆ ಸುಂಕ ವಿಧಿಸುವುದಾಗಿ ಚೀನಾ ಮಂಗಳವಾರ ಘೋಷಿಸಿದೆ. ವಾಣಿಜ್ಯ ಸಚಿವಾಲಯ ಘೋಷಿಸಿರುವ ಈ ಸುಂಕ ಹೆಚ್ಚಳವು ಮಾರ್ಚ್ 10ರಿಂದ ಜಾರಿಗೆ ಬರಲಿದೆ.

ಅಮೆರಿಕದ 25 ಸಂಸ್ಥೆಗಳ ಮೇಲೆ ರಫ್ತು ಮತ್ತು ಹೂಡಿಕೆ ನಿರ್ಬಂಧಗಳನ್ನು ಚೀನಾ ವಿಧಿಸಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಶೇ.25 ಸುಂಕ ಘೋಷಿಸಿದ ಕೆನಡಾ

ಅಮೆರಿಕ ತಮ್ಮ ಮೇಲೆ ಸುಂಕ ಹೆಚ್ಚಳ ಮಾಡುತ್ತಿದ್ದಂತೆ, ಅತ್ತ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಕೂಡ ಅಮೆರಿಕದ ಸರಕುಗಳ ಮೇಲೆ ಮಂಗಳವಾರದಿಂದಲೇ ಶೇ. 25 ಸುಂಕವನ್ನು ಘೋಷಿಸಿದ್ದಾರೆ. ಇದು 30 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಸರಕುಗಳಿಗೆ ಅನ್ವಯಿಸುತ್ತದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ 21 ದಿನಗಳಲ್ಲಿ ಕೆನಡಾ ಹೆಚ್ಚುವರಿಯಾಗಿ 125 ಬಿಲಿಯನ್ ಕೆನಡಿಯನ್ ಡಾಲರ್ ಮೌಲ್ಯದ ಅಮೆರಿಕದ ಸರಕುಗಳ ಮೇಲೆ ಸುಂಕ ವಿಧಿಸಲಿದೆ ಎಂದು ಎಚ್ಚರಿಸಿದ್ದಾರೆ.

“ನಮ್ಮ ಬಳಿಯೂ ಅಸ್ತ್ರಗಳಿವೆ”…ಮೆಕ್ಸಿಕೋ ಅಧ್ಯಕ್ಷೆ ಶೀನ್‌ಬಾಮ್

“ಅಮೆರಿಕದ ಸುಂಕಗಳು ಜಾರಿಗೆ ಬಂದರೆ ನಮ್ಮ ದೇಶ ಕೂಡ ಅದಕ್ಕೆ ಪ್ರತಿಕ್ರಿಯಿಸಲು ಸಿದ್ಧವಾಗಿದೆ” ಎಂದು ಮೆಕ್ಸಿಕನ್ ಅಧ್ಯಕ್ಷೆ ಕ್ಲೌಡಿಯಾ ಶೀನ್‌ಬಾಮ್ ಹೇಳಿದ್ದಾರೆ. ಅವರು ನಿರ್ದಿಷ್ಟ ಕ್ರಮಗಳ ಬಗ್ಗೆ ವಿವರಿಸದಿದ್ದರೂ, ಮೆಕ್ಸಿಕೋ ಬ್ಯಾಕಪ್ ಯೋಜನೆಗಳನ್ನು ಹೊಂದಿದೆ ಎಂದು ಹೇಳಿದ್ದಾರೆ.

ಅಮೆರಿಕದ ಆಮದುಗಳ ಮೇಲೆ ಶೇ. 15 ರಷ್ಟು ಪ್ರತೀಕಾರದ ಸುಂಕ ವಿಧಿಸಿದ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...