Homeಅಂತರಾಷ್ಟ್ರೀಯವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವೀಸಾ ನಿರ್ಬಂಧಗಳನ್ನು ಮಾರ್ಚ್‌ವರೆಗೆ ವಿಸ್ತರಿಸಿದ ಟ್ರಂಪ್: ಜೋ ಬೈಡನ್ ವಿರೋಧ

ವಲಸೆ ಮತ್ತು ಉದ್ಯೋಗ ವೀಸಾಗಳ ನಿಷೇಧವು ಡಿಸೆಂಬರ್ 31ಕ್ಕೆ ಮುಗಿಯಲಿತ್ತು. ಆದರೆ ನಿರ್ಗಮಿಸುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ನಿರ್ಬಂಧಗಳನ್ನು ಮಾರ್ಚ್ 31ರವರೆಗೂ ವಿಸ್ತರಿಸಿದ್ದಾರೆ.

- Advertisement -
- Advertisement -

ಗ್ರೀನ್‌ಕಾರ್ಡ್ ಆಕಾಂಕ್ಷಿಗಳು/ಅರ್ಜಿದಾರರು ಮತ್ತು ತಾತ್ಕಾಲಿಕ ವಿದೇಶಿ ಕೆಲಸಗಾರರು ಅಮೆರಿಕ ಪ್ರವೇಶಿಸುವುದನ್ನು ತಡೆಯುವ ಎರಡು ವಲಸೆ ನಿಷೇಧ ನಿರ್ಬಂಧಗಳನ್ನು ಮಾರ್ಚ್ 31 ರವರೆಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಸ್ತರಿಸಿದ್ದಾರೆ. ಅಮೆರಿಕ ಕೆಲಸಗಾರರು ಮತ್ತು ಸಾಂಕ್ರಾಮಿಕದಿಂದ ಜರ್ಜರಿತವಾಗಿರುವ ಆರ್ಥಿಕತೆ ರಕ್ಷಿಸಲು ಈ ಕ್ರಮಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದ್ದಾರೆ.

2020ರ ಏಪ್ರಿಲ್, ಜೂನ್‌ನಲ್ಲಿ ವಿಧಿಸಲಾಗಿದ್ದ ಈ ನಿಷೇಧಗಳು ಡಿಸೆಂಬರ್ 31ಕ್ಕೆ ಅಂತ್ಯಗೊಳ್ಳಬೇಕಿತ್ತು. ಈಗ ಅವನ್ನು 2021ರ ಮಾರ್ಚ್ 31ರವರೆಗೂ ವಿಸ್ತರಿಸಲಾಗಿದೆ. ನಿರ್ಗಮಿಸುತ್ತಿರುವ ಟ್ರಂಪ್ ಆಡಳಿತವು ಕೊನೆ ಹಂತದಲ್ಲಿ ವಲಸೆಗೆ ಸಂಬಂಧಿಸಿದಂತೆ ಇಂತಹ ಹಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ನಿರ್ದಿಷ್ಟ ವಿದೇಶಿ ಕೆಲಸಗಾರರ ಮೇಲಿನ ನಿಷೇಧವನ್ನು ಅಧಿಕ ಉದ್ದಿಮೆಗಳು ವಿರೋಧಿಸಿವೆ.

ಜನವರಿ 20 ರಂದು ಅಧಿಕಾರಕ್ಕೆ ಏರಲಿರುವ ಚುನಾಯಿತ-ಅಧ್ಯಕ್ಷ ಜೋ ಬೈಡನ್ ಈ ನಿರ್ಬಂಧಗಳನ್ನು ಟೀಕಿಸಿದ್ದಾರೆ. ಆದರೆ ತಾವು ಈ ನಿರ್ಬಂಧಗಳನ್ನು ತೆಗೆದು ಹಾಕುವುದರ ಬಗ್ಗೆ ಏನನ್ನೂ ಹೇಳಿಲ್ಲ.
ಅಧ್ಯಕೀಯ ಘೋಷಣೆಗಳ ರೂಪದಲ್ಲಿ ಟ್ರಂಪ್ ಇವುಗಳನ್ನು ವಿಧಿಸಿದ್ದು, ಇವನ್ನು ಯಾವುದೇ ಕ್ಷಣದಲ್ಲಾದರೂ ರದ್ದುಗೊಳಿಸಬಹುದಾಗಿದೆ.

ದೇಶಾದ್ಯಂತ ಕೊರೊನಾ ಸೋಂಕು ಹರಡುವಿಕೆ ಮುಂದುವರೆದಿದ್ದು, 20 ಮಿಲಿಯನ್ ಜನರು ನಿರುದ್ಯೋಗ ಸವಲತ್ತುಗಳನ್ನು ಆಶ್ರಯಿಸಿ ಬದುಕುತ್ತಿದ್ದಾರೆ.

ಅಕ್ಟೋಬರ್‌ನಲ್ಲಿ ಕ್ಯಾಲಿಫೋರ್ನಿಯಾದ ಫೆಡೆರಲ್ ನ್ಯಾಯಾಧೀಶರು ವಿದೇಶಿ ಅತಿಥಿ ಕೆಲಸಗಾರರ ಮೇಲಿನ ನಿಷೇಧಕ್ಕೆ ತಡೆ ನೀಡಿ, ಇಂತಹ ನಿಷೇಧವು ಸಾವಿರಾರು ವಾಣಿಜ್ಯ ಘಟಕಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗೆ ವಾಣಿಜ್ಯ-ವ್ಯಾಪಾರಗಳ ಕಾರ್ಯಾಚರಣೆಯಲ್ಲಿ ಹಸ್ತಕ್ಷೇಪ ಮಾಡುವುದರಿಂದ ವ್ಯಾಪಾರ-ವಾಣಿಜ್ಯಕ್ಕೆ ‘ರಿಪೇರಿ ಮಾಡಲಾಗದಷ್ಟು’ ಹಾನಿಯಾಗಲಿದ್ದು, ಇದರಿಂದ ಅವು ತಮ್ಮ ಕೆಲಸಗಾರರನ್ನು ತೆಗೆದು ಹಾಕುವ ಪರಿಸ್ಥಿತಿ ಬರಬಹುದು ಎಂದು ಅಭಿಪ್ರಾಯ ಪಟ್ಟಿದ್ದರು.

ಅಮೆರಿಕದ ಜಸ್ಟೀಸ್ ಡಿಪಾರ್ಟಮೆಂಟ್ ಟ್ರಂಪ್ ನಿರ್ಧಾರದ ವಿರುದ್ಧ ಸರ್ಕ್ಯೂಟ್ ಕೋರ್ಟ್ ಮೊರೆ ಹೋಗಿದ್ದು, ಜನವರಿ 20ಕ್ಕೆ ವಿಚಾರಣೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...