Homeಅಂತರಾಷ್ಟ್ರೀಯರೂಪರ್ಟ್ ಮುರ್ಡೋಕ್, ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಂಪ್

ರೂಪರ್ಟ್ ಮುರ್ಡೋಕ್, ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಟ್ರಂಪ್

- Advertisement -
- Advertisement -

ಮಾಧ್ಯಮ ದಿಗ್ಗಜ ರೂಪರ್ಟ್ ಮುರ್ಡೋಕ್, ಅವರ ಮೂಲ ಸಂಸ್ಥೆ ನ್ಯೂಸ್ ಕಾರ್ಪ್, ಅದರ ಅಂಗಸಂಸ್ಥೆ ಡೌ ಜೋನ್ಸ್ ಹಾಗೂ ಇವುಗಳ ಪ್ರಮುಖ ಪತ್ರಿಕೆ ‘ದಿ ವಾಲ್ ಸ್ಟ್ರೀಟ್ ಜರ್ನಲ್‌’ನ ವರದಿಗಾರರಾದ ಖದೀಜಾ ಸಫ್ದಾರ್ ಮತ್ತು ಜೋ ಪಲಾಝೋಲೋ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ಫ್ಲೋರಿಡಾದ ದಕ್ಷಿಣ ಜಿಲ್ಲೆ ಮಿಯಾಯ ಜಿಲ್ಲಾ ನ್ಯಾಯಾಲಯದಲ್ಲಿ ಕನಿಷ್ಠ 10 ಬಿಲಿಯನ್ ಡಾಲರ್ ಮೊತ್ತದ ಪರಿಹಾರ ಕೋರಿ ಮಾನನಷ್ಟದ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಗಳು ಹೇಳಿವೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಟ್ರಂಪ್, 2003ರಲ್ಲಿ ಲೈಂಗಿಕ ಅಪರಾಧದಲ್ಲಿ ಶಿಕ್ಷೆಗೆ ಒಳಗಾಗಿದ್ದ ಜೆಫ್ರಿ ಎಪ್ಸ್ಟೀನ್‌ಗೆ ಜನ್ಮದಿನದ ಶುಭಾಷಯ ಪತ್ರವನ್ನು ಕಳುಹಿಸಿದ್ದರು. ಅದರಲ್ಲಿ ಸಂಪೂರ್ಣ ನಗ್ನ ರೇಖಾಚಿತ್ರಗಳು, ಟ್ರಂಪ್ ಅವರ ಸಹಿ ಇತ್ತು. ಪರಸ್ಪರರ ರಹಸ್ಯದ ಬಗ್ಗೆ ಉಲ್ಲೇಖವೂ ಒಳಗೊಂಡಿತ್ತು ಎಂಬ ವರದಿಯನ್ನು ಜುಲೈ 17,2025ರಂದು ವಾಲ್‌ಸ್ಟ್ರೀಟ್ ಜರ್ನಲ್ ಪ್ರಕಟಿಸಿತ್ತು.

ಈ ಸಂಬಂಧ ಪತ್ರಿಕೆ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿ ಟ್ರಂಪ್ ಎಚ್ಚರಿಕೆ ನೀಡಿದ ಮರುದಿನವೇ ಕಾನೂನು ಕ್ರಮ ಕೈಗೊಂಡಿದ್ದಾರೆ. ಪತ್ರಿಕೆ ವಿರುದ್ಧ ‘ಪವರ್ ಹೌಸ್ ಲಾಸೂಟ್’ ಸಲ್ಲಿಸಿರುವುದಾಗಿ ಟ್ರಂಪ್ ಟ್ರುಥ್ ಸೋಶಿಯಲ್‌ನಲ್ಲಿ ಪ್ರಕಟಿಸಿದ್ದಾರೆ.

ಈ ತಪ್ಪು, ಅವಮಾನಕರ, ಮಾನಹಾನಿಕರ, ಸುಳ್ಳು ಸುದ್ದಿಯ ಲೇಖನವನ್ನು ವಾಲ್‌ಸ್ಟ್ರೀಟ್ ಜರ್ನಲ್ ನಲ್ಲಿ ಪ್ರಕಟಿಸಿದ್ದಕ್ಕಾಗಿ, ಇದರಲ್ಲಿ ಶಾಮೀಲಾದ ಎಲ್ಲರ ವಿರುದ್ಧವೂ ಪವರ್ ಹೌಸ್ ಲಾಸೂಟ್ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...