Homeಮುಖಪುಟ'ಪಾಕಿಸ್ತಾನದೊಂದಿಗಿನ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ...

‘ಪಾಕಿಸ್ತಾನದೊಂದಿಗಿನ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು’: ರಾಹುಲ್ ಗಾಂಧಿ

- Advertisement -
- Advertisement -

“ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ದೇಶನ ನೀಡಿದ ಐದು ಗಂಟೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ  ಪಾಕಿಸ್ತಾನದೊಂದಿಗಿನ ಮಿಲಿಟರಿ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ (ಆ.27) ಹೇಳಿದ್ದಾರೆ.

ಬಿಹಾರದ ಮುಝಪ್ಪರ್‌ಪುರ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು. ‘ವೋಟರ್ ಅಧಿಕಾರ್’ ಯಾತ್ರೆಯ ಭಾಗವಾಗಿ ನಡೆದ ರ‍್ಯಾಲಿಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಾದ ಡಿಎಂಕೆಯ ಎಂ.ಕೆ ಸ್ಟಾಲಿನ್ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗವಹಿಸಿದ್ದರು.

“ಟ್ರಂಪ್ ಇವತ್ತು ಏನು ಹೇಳಿದ್ದಾರೆ ನಿಮಗೆ ಗೊತ್ತಾ? ಭಾರತ-ಪಾಕಿಸ್ತಾನದ ನಡುವಿನ ಸಂಘರ್ಷ ತಾರಕಕ್ಕೇರಿದ್ದಾಗ, ಅವರು ಮೋದಿಯವರಿಗೆ ಕರೆ ಮಾಡಿ 24 ಗಂಟೆಗಳ ಒಳಗೆ ಯುದ್ದ ನಿಲ್ಲಿಸುವಂತೆ ಸ್ಪಷ್ಟವಾಗಿ ಹೇಳಿದ್ದರು ಮತ್ತು ಮೋದಿ ತಕ್ಷಣವೇ ಅದನ್ನು ಪಾಲಿಸಿದ್ದರು ಎಂದಿದ್ದಾರೆ. ಸಂಘರ್ಷ ನಿಲ್ಲಿಸಲು ಮೋದಿಯವರಿಗೆ ಟ್ರಂಪ್ 24 ಗಂಟೆಗಳ ಕಾಲಾವಕಾಶ ನೀಡಿದ್ದರು. ಆದರೆ, ಮೋದಿ ಅದನ್ನು 5 ಗಂಟೆಗಳಲ್ಲಿ ಪಾಲಿಸಿದರು” ಎಂದಿದ್ದಾರೆ.

ಟ್ರಂಪ್ ಶ್ವೇತಭವನದಲ್ಲಿ ನಡೆದ ಕ್ಯಾಬಿನೆಟ್ ಸಭೆಯನ್ನು ಉದ್ದೇಶಿಸಿ ಮಾತನಾಡಿ ವಿಡಿಯೋ ಉಲ್ಲೇಖಿಸಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ದ ನಿಲ್ಲಿಸಿದ್ದು ನಾನೇ ಎಂದು ಟ್ರಂಪ್ ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಇದನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ.

ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಸೇನೆಗಳ ನಡುವೆ ನೇರ ಮಾತುಕತೆ ನಡೆದ ನಂತರ ಮೇ ತಿಂಗಳಲ್ಲಿ ಸೇನಾ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

“ಟ್ರಂಪ್ ಹೇಳಿದ್ದನ್ನು ಮಾಧ್ಯಮಗಳು ನಿಮಗೆ ತೋರಿಸುವುದಿಲ್ಲ. ಏಕೆಂದರೆ, ಅವರು ಮೋದಿ ಮತ್ತು ಅವರ ಸ್ನೇಹಪರ ವ್ಯವಹಾರ ಉದ್ಯಮಿಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ ಹೊರತು, ನನ್ನಂತಹ ಜನರು, ಸ್ಟಾಲಿನ್ ಅಥವಾ ತೇಜಸ್ವಿಯವರ ಬಗ್ಗೆ ಅಲ್ಲ” ಎಂದು ರಾಹುಲ್ ಗಾಂಧಿ ಮಾಧ್ಯಮಗಳ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

“ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ‘ಗುಜರಾತ್ ಮಾದರಿ’ ಎಂದು ಹೇಳುತ್ತಿದ್ದರು. ಮತಗಳ್ಳತನವನ್ನೇ ಅವರು ಗುಜರಾತ್ ಮಾದರಿ ಎಂದಿರುವುದು. ಗುಜರಾತ್‌ನಿಂದಲೇ ಬಿಜೆಪಿ ಮತಗಳನ್ನು ಕದಿಯಲು ಶುರು ಮಾಡಿದೆ. ಮೋದಿ-ಅಮಿತ್‌ ಶಾ ಚುನಾವಣಾ ಆಯೋಗದ ಸಹಾಯದಿಂದ ಮತಗಳನ್ನು ಕದಿಯುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬಿಹಾರದ ಮತದಾರರ ಪಟ್ಟಿಯಿಂದ ‘ಸಾವನ್ನಪ್ಪಿದವರು, ಸ್ಥಳಾಂತರಗೊಂಡವರು ಮತ್ತು ಒಂದಕ್ಕಿಂತ ಹೆಚ್ಚು ಬಾರಿ ನೋಂದಣಿಗೊಂಡವರು’ ಎಂದು ಕಾರಣಗಳನ್ನು ನೀಡಿ 65 ಲಕ್ಷ ಹೆಸರುಗಳನ್ನು ಕೈಬಿಟ್ಟಿದ್ದಕ್ಕೆ ರಾಹುಲ್ ಗಾಂಧಿ ವಿರೋಧ ವ್ಯಕ್ತಪಡಿಸಿದ್ದಾರೆ.

“ಬಿಹಾರದಲ್ಲಿ ಸಾವಿರಾರು ಜನರು ತಮ್ಮ ಹೆಸರುಗಳನ್ನು ತಪ್ಪಾಗಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ನಮಗೆ ದೂರು ನೀಡಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಅನೇಕ ಜೀವಂತ ಜನರನ್ನು ಸತ್ತಂತೆ ತೋರಿಸಲಾಗಿದೆ (ಕರಡು ಪಟ್ಟಿಯಲ್ಲಿ)” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಚುನಾವಣಾ ಆಯೋಗವು ಶ್ರೀಮಂತರಲ್ಲದ ದಲಿತರು, ಒಬಿಸಿಗಳು, ಅತ್ಯಂತ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಹೆಸರುಗಳನ್ನು ಅಳಿಸುತ್ತಿದೆ. ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ಸಾಮಾನ್ಯ ಜನರ ಧ್ವನಿಯನ್ನು ಕೇಳಲು ಇಷ್ಟಪಡುವುದಿಲ್ಲ. ಈ ಕಾರಣಕ್ಕೆ ಹೀಗೆ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತ್ತು ಆಪಾದಿತ ಮತಗಳ್ಳತನದ ವಿರುದ್ಧ ರಾಹುಲ್ ಗಾಂಧಿ 15 ದಿನಗಳ ‘ವೋಟರ್ ಅಧಿಕಾರ್’ ಯಾತ್ರೆ ಕೈಗೊಂಡಿದ್ದಾರೆ. ಯಾತ್ರೆ ಇನ್ನೂ ಮೂರು ದಿನಗಳ ಕಾಲ ಮುಂದುವರಿಯಲಿದೆ.

ಗಾಝಾದಲ್ಲಿ ಪತ್ರಕರ್ತರ ಹತ್ಯೆ ‘ಆಘಾತಕಾರಿ’ ಎಂದ ಭಾರತ: ನಾಗರಿಕರ ನರಮೇಧಕ್ಕೆ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....