Homeಅಂತರಾಷ್ಟ್ರೀಯಉದ್ವಿಗ್ನತೆ ಹೆಚ್ಚಾದರೆ ಟ್ರಂಪ್ ಭಾರತದ ಪರವಾಗಿ ನಿಲ್ಲತಾರೆಂದು ಖಾತರಿಯಿಲ್ಲ: ಅಮೆರಿಕಾದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ

ಉದ್ವಿಗ್ನತೆ ಹೆಚ್ಚಾದರೆ ಟ್ರಂಪ್ ಭಾರತದ ಪರವಾಗಿ ನಿಲ್ಲತಾರೆಂದು ಖಾತರಿಯಿಲ್ಲ: ಅಮೆರಿಕಾದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ

- Advertisement -
- Advertisement -

ಚೀನಾ-ಭಾರತದ ಗಡಿ ಉದ್ವಿಗ್ನತೆ ಹೆಚ್ಚಾದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ ವಿರುದ್ಧ ಭಾರತವನ್ನು ಬೆಂಬಲಿಸುತ್ತಾರೆ ಎಂಬ ಖಾತರಿಯಿಲ್ಲ ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ.

ಚೀನಾ ತನ್ನ ಗಡಿಯ ಸುತ್ತಲೂ ಯುದ್ಧದ ಹಪಾಹಪಿಯಲ್ಲಿ ವರ್ತಿಸುತ್ತಿದೆ, ಖಂಡಿತವಾಗಿಯೂ ಪೂರ್ವ ಮತ್ತು ದಕ್ಷಿಣ ಚೀನಾ ಸಮುದ್ರದಲ್ಲಿ, ಜಪಾನ್, ಭಾರತ ಮತ್ತು ಇತರರೊಂದಿಗಿನ ಸಂಬಂಧಗಳು ಕ್ಷೀಣಿಸಿವೆ ಎಂದು ಬೋಲ್ಟನ್ WION TV ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಚೀನಾ ವಿರುದ್ಧ ಭಾರತದ ಪರವಾಗಿ ಟ್ರಂಪ್ ಎಷ್ಟು ದೂರ ಬರಲು ಸಿದ್ಧರಿದ್ದಾರೆ? ಅವರು ಯಾವ ಮಾರ್ಗದಲ್ಲಿ ಹೋಗುತ್ತಾರೆಂದು ನನಗೆ ಮಾತ್ರವಲ್ಲ ಅವರಿಗೂ ತಿಳಿದಿಲ್ಲ. ಏಕೆಂದರೆ ಅವರು ಚೀನಾದೊಂದಿಗಿನ ವ್ಯಾಪಾರದ ಮೂಲಕ ಭೂ ಕಾರ್ಯತಂತ್ರದ ಸಂಬಂಧವನ್ನು ಎದುರು ನೋಡುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದು ಜಾನ್ ಬೋಲ್ಟನ್ ಹೇಳಿದ್ದಾರೆ.

“ನವೆಂಬರ್ ಚುನಾವಣೆಯ ನಂತರ ಟ್ರಂಪ್ ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ… ಅವರು ಚೀನಾದೊಂದಿಗೆ ದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳುತ್ತಾರೆ. ಭಾರತ-ಚೀನಾ ನಡುವೆ ನಿರ್ಣಾಯಕ ವಿಷಯಗಳು ನಡೆಯುತ್ತಿರಬೇಕಾದರೆ, ಅವರು ಎಲ್ಲಿರುತ್ತಾರೆ ಎಂದು ನನಗೆ ಖಚಿತವಿಲ್ಲ” ಎಂದು ಅವರು ಹೇಳಿದ್ದಾರೆ.

ಭಾರತ-ಚೀನಾ ನಡುವೆ ನಡೆಯುತ್ತಿರುವ ದಶಕಗಳ ಘರ್ಷಣೆಗಳ ಇತಿಹಾಸದ ಬಗ್ಗೆ ಟ್ರಂಪ್‌ಗೆ ಏನೂ ತಿಳಿದಿಲ್ಲ ಎಂದು ಬೋಲ್ಟನ್ ಹೇಳಿದ್ದಾರೆ.

ಟ್ರಂಪ್‌ಗೆ ಇದರ ಬಗ್ಗೆ ಅಲ್ಪ ಮಾಹಿತಿ ಇರಬಹುದಾದರು ಇತಿಹಾಸದ ಬಗ್ಗೆ ನಿಜವಾಗಿಯೂ ಅವರಿಗೆ ತಿಳಿದಿಲ್ಲ ಎಂದು ಟ್ರಂಪ್ ಆಡಳಿತದಲ್ಲಿ ಏಪ್ರಿಲ್ 2018 ರಿಂದ ಸೆಪ್ಟೆಂಬರ್ 2019 ರವರೆಗೆ ಅಮೆರಿಕಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಆಗಿದ್ದ ಬೋಲ್ಟನ್ ಹೇಳಿದ್ದಾರೆ.

ಕಳೆದ ಎಂಟು ವಾರಗಳಿಂದ ಪೂರ್ವ ಲಡಾಖ್‌ನ ಅನೇಕ ಸ್ಥಳಗಳಲ್ಲಿ ಭಾರತ-ಚೀನಾದ ಸೈನ್ಯ ಮುಖಾಮುಖಯಾಗಿದ್ದವು. ಅಲ್ಲದೆ ಗಾಲ್ವನ್‌ನಲ್ಲಿ ನಡೆದ ಘರ್ಷಣೆಯಿಂದ  20 ಭಾರತೀಯ ಸೇನಾ ಸಿಬ್ಬಂದಿ ಕೊಲ್ಲಲ್ಪಟ್ಟಿದ್ದರು.

ಈ ಪ್ರದೇಶದಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಉಭಯ ದೇಶ ಕಳೆದ ಕೆಲವು ವಾರಗಳಲ್ಲಿ ಹಲವಾರು ಸುತ್ತಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳನ್ನು ನಡೆಸಿದೆ.


ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...