Homeಮುಖಪುಟಟ್ರಂಪ್ ಕೈಗೊಂಬೆಯಾಗಬೇಡಿ; ಭಾರತೀಯರಿಗಾಗಿ ಧ್ವನಿಯೆತ್ತಿ - ಮೋದಿಗೆ ಎಎಪಿ

ಟ್ರಂಪ್ ಕೈಗೊಂಬೆಯಾಗಬೇಡಿ; ಭಾರತೀಯರಿಗಾಗಿ ಧ್ವನಿಯೆತ್ತಿ – ಮೋದಿಗೆ ಎಎಪಿ

- Advertisement -
- Advertisement -

ಅಮೆರಿಕದಲ್ಲಿ ಭಾರತೀಯರ ಗಡೀಪಾರು ವಿಚಾರದ ಬಗ್ಗೆ ಗಟ್ಟಿಯಾಗಿ ಧ್ವನಿಯೆತ್ತುವಂತೆ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಕೇಳಿದ್ದು, ಟ್ರಂಪ್ ಅವರ ಕೈಗೊಂಬೆಯಾಗದಂತೆ ಹೇಳಿದ್ದಾರೆ. ಟ್ರಂಪ್ ಕೈಗೊಂಬೆಯಾಗಬೇಡಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಬೆದರಿಕೆಗೆ” ಒಳಗಾಗದಂತೆ ಎಎಪಿ ನಾಯಕ ಸಂಜಯ್ ಸಿಂಗ್ ಅವರು ಹೇಳಿದ್ದು, ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಟ್ರಂಪ್ ಅವರ ಸ್ಫೋಟಕ ಮಾತುಕತೆಯನ್ನು ಉಲ್ಲೇಖಿಸಿದ್ದಾರೆ.

ಟ್ರಂಪ್ ಮತ್ತು ಝೆಲೆನ್ಸ್ಕಿ ನಡುವಿನ ವಿಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಂಜಯ್ ಸಿಂಗ್, ಈ ಸಂಭಾಷಣೆಯಲ್ಲಿ ಟ್ರಂಪ್ ಬೆದರಿಸುತ್ತಿದ್ದಾರೆ ಎಂಬುದು ಸಾಬೀತಾಗಿದೆ. ಆದ್ದರಿಂದ ಮೋದಿ ಅವರು ಟ್ರಂಪ್ ಅವರ ಕೈಗೊಂಬೆಯಾಗುವ ಬದಲು, ಅಪರಾಧಿಗಳಂತೆ ಸಂಕೋಲೆಗಳಲ್ಲಿ ಭಾರತೀಯರನ್ನು ಭಾರತಕ್ಕೆ ಕತೆತರುವ ವಿಷಯದ ಬಗ್ಗೆ ಗಟ್ಟಿಯಾಗಿ ಧ್ವನಿಯೆತ್ತಬೇಕು ಎಂದು ಹೇಳಿದ್ದಾರೆ.

ಮಾಜಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹೆನ್ರಿ ಕಿಸ್ಸಿಂಜರ್ ಅವರ ಪ್ರಸಿದ್ಧ ಹೇಳಿಕೆಯಾದ ”ಅಮೆರಿಕದ ಶತ್ರುವಾಗುವುದು ಅಪಾಯಕಾರಿ, ಆದರೆ ಸ್ನೇಹಿತನಾಗಿರುವುದು ಮಾರಕ” ಎಂಬ ವಾಕ್ಯವನ್ನು ಸಂಜಯ್ ಸಿಂಗ್ ಅವರು ಟ್ವೀಟ್ ಮಾಡಿದ್ದಾರೆ. ಟ್ರಂಪ್ ಕೈಗೊಂಬೆಯಾಗಬೇಡಿ

ಈ ತಿಂಗಳ ಆರಂಭದಲ್ಲಿ ಅಮೆರಿಕವು ಭಾರತದ ಅಕ್ರಮ ವಲಸಿಗರನ್ನು ಕಾಲುಗಳಿಗೆ ಸರಪಳಿ ಮತ್ತು ಕೈಕೋಳ ಹಾಕಿ ಗಡೀಪಾರು ಮಾಡಿತ್ತು. ಈ ವಿಚಾರದ ಬಗ್ಗೆ ಸಂಸತ್ತಿನಲ್ಲಿ ತೀವ್ರ ವಾಗ್ವಾದ ನಡೆದಿತ್ತು. ಟ್ರಂಪ್ ಅಧಿಕಾರಕ್ಕೆ ಏರಿದ ನಂತರ ಅಮೆರಿಕದಲ್ಲಿ ಅಕ್ರಮ ವಲಸೆಯ ವಿರುದ್ಧ ಅಲ್ಲಿನ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಇಲ್ಲಿಯವರೆಗೆ 300 ಕ್ಕೂ ಹೆಚ್ಚು ಭಾರತೀಯರನ್ನು ಮೂರು ಅಮೆರಿಕದ ಮಿಲಿಟರಿ ವಿಮಾನಗಳಲ್ಲಿ ಗಡೀಪಾರು ಮಾಡಲಾಗಿದೆ.

ಇತ್ತಿಚೆಗೆ ಅಮೆರಿಕದ ವೈಟ್‌ಹೌಸ್‌ನಲ್ಲಿ ನಡೆದ ಸಭೆಯಲ್ಲಿ ಝೆಲೆನ್ಸ್ಕಿ, ಟ್ರಂಪ್ ಮತ್ತು ಯುಎಸ್ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನಡುವೆ ತೀವ್ರ ವಾಗ್ವಾದದ ನಡೆದಿದೆ. ಈ ವಿಡಿಯೊ ವೈರಲ್ ಆಗಿದ್ದು, ರಷ್ಯಾದೊಂದಿಗಿನ ಯುದ್ಧದಲ್ಲಿ ಉಕ್ರೇನ್‌ಗೆ ಅಮೆರಿಕ ನೀಡಿದ ಬೆಂಬಲಕ್ಕೆ ಕೃತಜ್ಞತೆ ತೋರಿಸಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ವ್ಯಾನ್ಸ್ ಅವರು ಝೆಲೆನ್ಸ್ಕಿಯನ್ನು ಟೀಕಿಸಿದ್ದಾರೆ. ಆದರೆ ಝೆಲೆನ್ಸ್ಕಿ ಇದನ್ನು ನಿರಾಕರಿಸಿ ಅವರ ಜೊತೆಗೆ ವಾಗ್ವಾದ ನಡೆಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ಎಸ್ಸಿಎಸ್‌ಪಿ/ಟಿಎಸ್‌ಪಿ ಹಣದ ದುರ್ಬಳಕೆ ಯಾವುದೆ ಕಾರಣಕ್ಕೂ ಒಪ್ಪಲ್ಲ – ದಲಿತ ಹಕ್ಕುಗಳ ಹೋರಾಟಗಾರ ಎ. ನರಸಿಂಹ ಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...