Homeಅಂತರಾಷ್ಟ್ರೀಯಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

- Advertisement -
- Advertisement -

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ (ಫೆ.21) ಅದನ್ನು ಶೇಕಡ 15ಕ್ಕೆ ಹೆಚ್ಚಳ ಮಾಡಿದ್ದಾರೆ.

“ನ್ಯಾಯಾಲಯವು ನಿನ್ನೆ ಸುಂಕಗಳ ಕುರಿತು ನೀಡಿದ ಹಾಸ್ಯಾಸ್ಪದ, ಕಳಪೆಯಾಗಿ ಬರೆಯಲ್ಪಟ್ಟ ಮತ್ತು ಅತಿಹೆಚ್ಚು ಅಮೆರಿಕನ್ ವಿರೋಧಿ ಎನ್ನಬಹುದಾದ ತೀರ್ಪನ್ನು ಸಂಪೂರ್ಣವಾಗಿ, ವಿವರವಾಗಿ ಮತ್ತು ಸಮಗ್ರವಾಗಿ ಪರಿಶೀಲಿಸಿದ ನಂತರವೇ ನಾನು ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ” ಎಂದು ಟ್ರಂಪ್ ತಮ್ಮ ‘ಟ್ರೂತ್ ಸೋಶಿಯಲ್’ ವೇದಿಕೆಯಲ್ಲಿ ತಿಳಿಸಿದ್ದಾರೆ.

“ಕಾನೂನಿನ ಅಡಿಯಲ್ಲಿ ಸಂಪೂರ್ಣವಾಗಿ ಅವಕಾಶವಿರುವ ಮತ್ತು ಈಗಾಗಲೇ ಕಾನೂನುಬದ್ಧವಾಗಿ ಸಾಬೀತಾಗಿರುವ ಶೇಕಡ 15ರ ಮಟ್ಟಕ್ಕೆ ನಾನು ಈ ಸುಂಕಗಳನ್ನು ಏರಿಸುತ್ತಿದ್ದೇನೆ” ಎಂದು ಘೋಷಿಸಿದ್ದಾರೆ.

“ಮುಂದಿನ ಕೆಲವೇ ತಿಂಗಳುಗಳಲ್ಲಿ, ಟ್ರಂಪ್ ಆಡಳಿತವು ಹೊಸ ಮತ್ತು ಕಾನೂನುಬದ್ಧವಾಗಿ ಅನುಮತಿಸಬಹುದಾದ ಸುಂಕಗಳನ್ನು ನಿರ್ಧರಿಸಿ ಜಾರಿಗೆ ತರಲಿದೆ. ಅದು ಅಮೆರಿಕವನ್ನು ಮತ್ತೆ ಮಹಾನ್ ರಾಷ್ಟ್ರವನ್ನಾಗಿ ಮಾಡುವ ನಮ್ಮ ಅತ್ಯಂತ ಯಶಸ್ವಿ ಪ್ರಕ್ರಿಯೆಯನ್ನು ಮುಂದುವರಿಸಲಿದೆ. ಅಮೆರಿಕ ಹಿಂದೆಂದಿಗಿಂತಲೂ ಶ್ರೇಷ್ಠವಾಗಲಿದೆ” ಎಂದು ಟ್ರಂಪ್ ತನ್ನ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಅಮೆರಿಕ ಸುಪ್ರೀಂ ಕೋರ್ಟ್ ಶುಕ್ರವಾರ (ಫೆ.20) ನೀಡಿದ ಮಹತ್ವದ ತೀರ್ಪಿನಲ್ಲಿ, ಸುಂಕಗಳನ್ನು ವಿಧಿಸಲು 1977ರ ಕಾನೂನೊಂದನ್ನು ಬಳಸುವ ಮೂಲಕ ಡೊನಾಲ್ಡ್ ಟ್ರಂಪ್ ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಅವರು ಬರೆದ 6-3 ಬಹುಮತದ ತೀರ್ಪು, ಈ ಹಿಂದಿನ ಕೆಳಹಂತದ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.

ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರಗಳ ಕಾಯ್ದೆ (ಐಇಇಪಿಎ) ಅಧ್ಯಕ್ಷರಿಗೆ ಸುಂಕಗಳನ್ನು ವಿಧಿಸಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಂವಿಧಾನದ ಪ್ರಕಾರ ಸುಂಕಗಳನ್ನು ನಿರ್ಧರಿಸುವ ಅಧಿಕಾರ ಕೇವಲ ಕಾಂಗ್ರೆಸ್‌ಗೆ (ಅಮೆರಿಕದ ಸಂಸತ್ತು) ಸೇರಿದ್ದಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಈ ತೀರ್ಪನ್ನು ‘ಅವಮಾನಕರ’ ಎಂದು ಕರೆದಿದ್ದ ಟ್ರಂಪ್, ಪರ್ಯಾಯ ಕಾನೂನುಗಳನ್ನು (Section 122 of 1974’s Trade Act)ಬಳಸಿಕೊಂಡು ಶೇಕಡ 10 ಹೊಸ ಜಾಗತಿಕ ಸುಂಕವನ್ನು ಘೋಷಿಸಿದ್ದರು. ಈಗ ಅದನ್ನು ಶೇಕಡ 15ಕ್ಕೆ ಏರಿಸುವುದಾಗಿ ಘೋಷಣೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...