Homeಮುಖಪುಟಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ

ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಭಾರತ-ಪಾಕಿಸ್ತಾನ ಸಂಘರ್ಷದ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ. ಹಾಗಾಗಿ, ಕಳೆದ 70 ದಿನಗಳಲ್ಲಿ ಅಮೆರಿಕದ ನಾಯಕರು ನೀಡಿರುವ ಹೇಳಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಸ್ಪಷ್ಟ ಪ್ರತಿಕ್ರಿಯೆ ನೀಡಬೇಕು ಎಂದು ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ.

ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷದ ಸಮಯದಲ್ಲಿ “ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ. ನಮ್ಮ ಮಧ್ಯಪ್ರವೇಶದ ಬಳಿಕ ಸಂಘರ್ಷ ಅಂತ್ಯವಾಯಿತು ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ. ಈ ಹಿನ್ನೆಲೆ, ಕಾಂಗ್ರೆಸ್ ಮೋದಿ ಮೌನ ಮುರಿಯಲು ಒತ್ತಾಯಿಸಿದೆ.

ಎರಡೂ ದೇಶಗಳು ಜೆಟ್‌ಗಳನ್ನು ಕಳೆದುಕೊಂಡಿವೆಯೇ ಅಥವಾ ಎರಡೂ ಕಡೆಯವರ ಒಟ್ಟಾರೆ ನಷ್ಟವನ್ನು ಅವರು ಉಲ್ಲೇಖಿಸಿದ್ದಾರೆಯೇ ಎಂಬುದನ್ನು ಟ್ರಂಪ್ ಸ್ಪಷ್ಟಪಡಿಸಿಲ್ಲ.

ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲು ಕೇವಲ ಎರಡು ದಿನಗಳು ಬಾಕಿಯಿರುವಾಗ ‘ಅಮೆರಿಕ ಮಧ್ಯಸ್ಥಿಕೆ ವಹಿಸಿ ಭಾರತ-ಪಾಕಿಸ್ತಾನ ಯುದ್ದ ನಿಲ್ಲಿಸಿತು. ಕದನ ವಿರಾಮಕ್ಕೆ ಒಪ್ಪದಿದ್ದರೆ ವ್ಯಾಪರ ನಿರ್ಬಂಧ ಹೇರುವ ಎಚ್ಚರಿಕೆಯನ್ನು ನಾವು ನೀಡಿದ್ದೆವು’ ಈ ಎರಡು ವಿಷಯಗಳನ್ನು ಉಲ್ಲೇಖಸಿ ಟ್ರಂಪ್ 24ನೇ ಬಾರಿಗೆ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಈ ಬಾರಿ ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಟ್ರಂಪ್ ಹೊಸ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್‌ 2019ರಲ್ಲಿ ‘ಹೌಡಿ ಮೋದಿ’, 2020ರಲ್ಲಿ ನಮಸ್ತೆ ಟ್ರಂಪ್‌ಗಳಂತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಟ್ರಂಪ್ ಅವರೊಂದಿಗೆ ಮೋದಿ ಹಲವು ವರ್ಷಗಳಿಂದ ಗೆಳೆತನ ಹೊಂದಿದ್ದಾರೆ. ಆದ್ದರಿಂದ ಟ್ರಂಪ್ ಕಳೆದ 70 ದಿನಗಳಲ್ಲಿ ನೀಡಿರುವ ಹೇಳಿಕೆಗಳ ಕುರಿತು ಮೋದಿ ಸಂಸತ್ತಿಗೆ ಸ್ಪಷ್ಟನೆ ನೀಡಬೇಕು ಎಂದು ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.

ಶುಕ್ರವಾರ ಶ್ವೇತಭವನದಲ್ಲಿ ರಿಪಬ್ಲಿಕನ್ ಸೆನೆಟರ್‌ಗಳಿಗೆ ಆಯೋಜಿಸಿದ್ದ ಭೋಜನ ಕೂಟದಲ್ಲಿ ಮಾತನಾಡಿದ್ದ ಟ್ರಂಪ್, ನೀವು ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ನಡೆದಿದೆ ಎಂದು ಭಾವಿಸಿದ್ದೀರಿ. ವಾಸ್ತವವಾಗಿ ಎರಡು ದೇಶಗಳು ಆಕಾಶದಲ್ಲಿ ಕಾದಾಡಿಕೊಂಡಿವೆ. ಈ ವೇಳೆ ನಾಲ್ಕರಿಂದ ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ನಾನು ಭಾವಿಸುತ್ತೇನೆ, ವಾಸ್ತವವಾಗಿ, ಪರಿಸ್ಥಿತಿ ಕೆಟ್ಟದಾಗುತ್ತಾ ಹೋಗುತ್ತಿತ್ತು. ಎರಡೂ ದೇಶಗಳು ತೀವ್ರ ಸಂಘರ್ಷಕ್ಕೆ ಮುಂದಾಗಿದ್ದವು” ಎಂದಿದ್ದರು.

ಭಾರತ-ಪಾಕಿಸ್ತಾನ ಸಂಘರ್ಷದಲ್ಲಿ ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಅಮೆರಿಕ ಅಧ್ಯಕ್ಷ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....