Homeಅಂತರಾಷ್ಟ್ರೀಯಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

- Advertisement -
- Advertisement -

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ‘ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ’ ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು ‘ಸಂಪೂರ್ಣವಾಗಿ ಧ್ವಂಸಗೊಳಿಸಿವೆ’ ಎಂದು ಟ್ರಂಪ್ ಹೇಳಿದ್ದಾರೆ. ಇದು ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ದಾಳಿಗಳಲ್ಲಿ ಒಂದು ಎಂದಿದ್ದಾರೆ.

ಇರಾನ್‌ನ ತೈಲ ರಫ್ತಿನ ಬಹುಪಾಲು ಭಾಗವು ಪರ್ಷಿಯನ್ ಕೊಲ್ಲಿಯಲ್ಲಿರುವ ಈ ಖಾರ್ಗ್ ದ್ವೀಪದ ಟರ್ಮಿನಲ್ ಮೂಲಕವೇ ಹಾದುಹೋಗುತ್ತದೆ. ಹೀಗಾಗಿ, ಇದು ಇರಾನ್‌ನ ಇಂಧನ ವಲಯದ ಅತ್ಯಂತ ಪ್ರಮುಖ ಮತ್ತು ಆಯಕಟ್ಟಿನ ಕೇಂದ್ರವಾಗಿದೆ.

ದಾಳಿಯ ಕುರಿತು ಸಾಮಾಜಿಕ ಜಾಲತಾಣ ಟ್ರುತ್ ಸೋಶಿಯಲ್‌ನಲ್ಲಿ ಬರೆದುಕೊಂಡಿರುವ ಟ್ರಂಪ್, “ಸ್ವಲ್ಪ ಸಮಯದ ಹಿಂದೆ, ನನ್ನ ನಿರ್ದೇಶನದಂತೆ ಅಮೆರಿಕದ ಸೆಂಟ್ರಲ್ ಕಮಾಂಡ್ ಮಧ್ಯಪ್ರಾಚ್ಯದ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿಗಳಲ್ಲಿ ಒಂದನ್ನು ನಡೆಸಿದೆ. ಇರಾನ್‌ನ ಅಮೂಲ್ಯ ಆಸ್ತಿಯಾದ ಖಾರ್ಗ್ ದ್ವೀಪದಲ್ಲಿರುವ ಪ್ರತಿಯೊಂದು ಮಿಲಿಟರಿ ಗುರಿಗಳನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ದ್ವೀಪದಲ್ಲಿರುವ ತೈಲ ಕೇಂದ್ರಗಳ ಮೇಲೆ ದಾಳಿ ನಡೆಸುವುದನ್ನು  ಅಮೆರಿಕ ಉದ್ದೇಶಪೂರ್ವಕವಾಗಿಯೇ ತಪ್ಪಿಸಿದೆ. ನಮ್ಮ ಆಯುಧಗಳು ಪ್ರಪಂಚವು ಇದುವರೆಗೆ ಕಂಡಿರುವ ಅತ್ಯಂತ ಶಕ್ತಿಶಾಲಿ ಮತ್ತು ಅತ್ಯಾಧುನಿಕವಾಗಿದೆ. ಆದರೆ, ನೈತಿಕತೆಯ ಕಾರಣಗಳಿಗಾಗಿ ನಾನು ಆ ದ್ವೀಪದ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದಿರಲು ನಿರ್ಧರಿಸಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.

ಒಂದು ವೇಳೆ ಇರಾನ್ ಅಥವಾ ಬೇರೆ ಯಾರಾದರೂ ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಮುಕ್ತ ಮತ್ತು ಸುರಕ್ಷಿತ ಸಂಚಾರಕ್ಕೆ ಅಡ್ಡಿಪಡಿಸಿದರೆ, ನಾನು ತಕ್ಷಣವೇ ಈ ನಿರ್ಧಾರವನ್ನು ಮರುಪರಿಶೀಲಿಸುತ್ತೇನೆ. ನಾವು ದಾಳಿ ಮಾಡಲು ಬಯಸುವ ಯಾವುದೇ ಗುರಿಯನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಇರಾನ್‌ಗೆ ಇಲ್ಲ. ಈ ಬಗ್ಗೆ ಅವರು ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, ಇಡೀ ಮಧ್ಯಪ್ರಾಚ್ಯ ಪ್ರದೇಶವನ್ನು ತನ್ನ ಹತೋಟಿಗೆ ತೆಗೆದುಕೊಳ್ಳುವ ಮತ್ತು ಇಸ್ರೇಲ್ ಅನ್ನು ಸಂಪೂರ್ಣವಾಗಿ ನಾಶಪಡಿಸುವ ಯೋಜನೆಗಳನ್ನು ಇರಾನ್ ಹೊಂದಿತ್ತು. ಆದರೆ ಈಗ ಇರಾನ್‌ನಂತೆಯೇ ಆ ಯೋಜನೆಗಳೂ ಸಹ ಅಂತ್ಯಗೊಂಡಿವೆ ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕ ಸೇನೆಯು ಸುಮಾರು 2,500 ಮರೀನ್ ಪಡೆಯನ್ನು ಮತ್ತು ಒಂದು ಉಭಯಚರ ದಾಳಿ ನೌಕೆಯನ್ನು ಮಧ್ಯಪ್ರಾಚ್ಯಕ್ಕೆ ರವಾನಿಸಲು ಆದೇಶಿಸಿದೆ. ಇರಾನ್ ವಿರುದ್ಧ ಸುಮಾರು ಎರಡು ವಾರಗಳಿಂದ ನಡೆಯುತ್ತಿರುವ ಸಂಘರ್ಷದ ನಡುವೆ, ಈ ಪ್ರದೇಶದಲ್ಲಿ ಅಮೆರಿಕದ ಸೇನಾ ಬಲವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾಗಿ ವರದಿಗಳು ಹೇಳಿವೆ.

ಟೆಹ್ರಾನ್‌ನ ಕೇಂದ್ರಭಾಗದಲ್ಲಿರುವ ಫಿರ್ದೌಸಿ ಸ್ಕ್ವೇರ್‌ನಲ್ಲಿ ಶುಕ್ರವಾರ (ಮಾ. 13) ಭಾರಿ ಸ್ಫೋಟ ಸಂಭವಿಸಿದೆ. ಆ ಸಮಯದಲ್ಲಿ ಅಲ್ಲಿ ಸಾವಿರಾರು ಜನರು ಪ್ಯಾಲೇಸ್ಟಿನಿಯನ್ನರನ್ನು ಬೆಂಬಲಿಸುವ ಮತ್ತು ಇಸ್ರೇಲ್ ನಾಶಕ್ಕೆ ಕರೆ ನೀಡುವ ವಾರ್ಷಿಕ ಅಲ್-ಕುದ್ಸ್ ದಿನದ ರ‍್ಯಾಲಿಯಲ್ಲಿ ಭಾಗವಹಿಸಲು ಸೇರಿದ್ದರು ಎಂದು ವರದಿಯಾಗಿದೆ.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆದರಿಕೆಯ ಹೊರತಾಗಿಯೂ ಇರಾನ್ ಸರ್ಕಾರದ ಹಿರಿಯ ಅಧಿಕಾರಿಗಳು ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಇರಾನ್ ಇಸ್ರೇಲ್ ಮತ್ತು ನೆರೆಯ ಗಲ್ಫ್ ರಾಷ್ಟ್ರಗಳ ಮೇಲೆ ವ್ಯಾಪಕವಾದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಮುಂದುವರಿಸಿದೆ. ಅಷ್ಟೇ ಅಲ್ಲದೆ, ವಿಶ್ವದ ಒಟ್ಟು ತೈಲ ವ್ಯಾಪಾರದ ಸುಮಾರು ಐದನೇ ಒಂದು ಭಾಗದಷ್ಟು ಪೂರೈಕೆಯಾಗುವ ಅತ್ಯಂತ ನಿರ್ಣಾಯಕ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಪರಿಣಾಮಕಾರಿಯಾಗಿ ಮುಚ್ಚಿದೆ.

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಳ್ಳುತ್ತಿರುವ ಈ ಸಂಘರ್ಷವು ಗಲ್ಫ್ ಪ್ರದೇಶದಲ್ಲಿ ಅಸ್ಥಿರತೆಯನ್ನು ಉಂಟುಮಾಡಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...