Homeಮುಖಪುಟಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಮಹಿಳಾ ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಆದೇಶಕ್ಕೆ ಟ್ರಂಪ್ ಸಹಿ

ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಮಹಿಳಾ ಕ್ರೀಡೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಮಹಿಳಾ ಕ್ರೀಡೆಗಳಲ್ಲಿ ಟ್ರಾನ್ಸ್‌ಜೆಂಡರ್‌ ಕ್ರೀಡಾಪಟುಗಳು ಸ್ಪರ್ಧಿಸುವುದನ್ನು ನಿಷೇಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಫೆ.5) ಸಹಿ ಹಾಕಿದ್ದಾರೆ.

ಕ್ರೀಡೆಗಳನ್ನು ನ್ಯಾಯಯುತವಾಗಿ ನಡೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟ್ರಂಪ್ ಆಡಳಿತ ಸಮರ್ಥಿಸಿಕೊಂಡಿದೆ. ಮಹಿಳಾ ಕ್ರೀಡೆಗಳ ಸಮಗ್ರತೆಯನ್ನು ಎತ್ತಿ ಹಿಡಿಯಲು ಇದು ಅಗತ್ಯವಾದ ಹೆಜ್ಜೆ ಎಂದು ಟ್ರಂಪ್ ಬೆಂಬಲಿಗರು ಶ್ಲಾಘಿಸಿದ್ದಾರೆ. ಆದರೆ, ಜಾಗತಿಕ ಸಮುದಾಯ ಟ್ರಂಪ್ ನಡೆ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ ವಿರುದ್ದದ ತಾರತಮ್ಯ ಮತ್ತು ಅವರ ಹಕ್ಕುಗಳನ್ನು ಕಸಿದುಕೊಳ್ಳುವ ಕ್ರಮ ಎಂದು ವಿರೋಧ ವ್ಯಕ್ತಪಡಿಸಿದೆ.

ಜನವರಿ 20, 2025ರಂದು ಅಮೆರಿಕದ ನೂತನ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ನಂತರ ಟ್ರಂಪ್ ಮಾಡಿದ್ದ ಉದ್ಘಾಟನಾ ಭಾಷಣದಲ್ಲಿ “ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ” ಎಂದಿದ್ದರು.

ರಾಷ್ಟ್ರೀಯ ಬಾಲಕಿಯರು ಮತ್ತು ಮಹಿಳಾ ಕ್ರೀಡಾ ದಿನದಂದು “ಮಹಿಳಾ ಕ್ರೀಡೆಗಳಿಂದ ಪುರುಷರನ್ನು ದೂರವಿಡುವುದು” (Keeping Men Out of Women’s Sports) ಎಂಬ ವಿವಾದಾತ್ಮಕ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ.

ಶ್ವೇತಭವನದ ಪೂರ್ವ ಕೋಣೆಯಲ್ಲಿ ಭಾಷಣ ಮಾಡಿದ ಟ್ರಂಪ್, “ಮಹಿಳಾ ಕ್ರೀಡಾಪಟುಗಳನ್ನು ರಕ್ಷಿಸುವತ್ತ ನಮ್ಮ ಆಡಳಿತ ಗಮನ ಹರಿಸುತ್ತಿದೆ. “ಮಹಿಳಾ ಕ್ರೀಡೆಗಳು ಮಹಿಳೆಯರಿಗೆ ಮಾತ್ರ” ಎಂದು ಎಂದಿದ್ದಾರೆ.

ಹೊಸ ಆದೇಶವನ್ನು ಜಾರಿಗೆ ತರಲು ಟ್ರಂಪ್ ಆಡಳಿತವು ಶಿಕ್ಷಣ ಇಲಾಖೆಯನ್ನು ಬಳಸಿಕೊಂಡಿದೆ. ಫೆಡರಲ್ ನಿಧಿಯನ್ನು ಪಡೆಯುವ ಶಾಲೆಗಳಲ್ಲಿ ಲಿಂಗ ಆಧಾರಿತ ತಾರತಮ್ಯವನ್ನು ನಿಷೇಧಿಸುವ 1972ರ ಕಾನೂನಾದ ಟೈಟಲ್ IX ಅನ್ನು ಮರು ವ್ಯಾಖ್ಯಾನಿಸಿದೆ. ಟ್ರಂಪ್ ಅವರ ನಿರ್ದೇಶನದ ಅಡಿಯಲ್ಲಿ, ಟೈಟಲ್ IX ಅನ್ನು ಲಿಂಗ ಗುರುತಿನ ಮೇಲೆ ಅಲ್ಲ, ಜೈವಿಕ ಲೈಂಗಿಕತೆಯ ಮೇಲೆ ಕೇಂದ್ರೀಕರಿಸಿ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.

ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಿಗೂ ಇದೇ ರೀತಿಯ ನೀತಿಗಳನ್ನು ಅಳವಡಿಸಿಕೊಳ್ಳಲು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ)ಯನ್ನು ಒತ್ತಾಯಿಸಲು ವಿದೇಶಾಂಗ ಇಲಾಖೆಗೆ ಆದೇಶವು ನಿರ್ದೇಶಿಸಿದೆ. ಲಿಂಗ ಗುರುತಿಸುವಿಕೆ ಅಥವಾ ಟೆಸ್ಟೋಸ್ಟೆರಾನ್ ಮಟ್ಟಗಳಿಗಿಂತ ಬದಲಾಗಿ ಅರ್ಹತೆಯನ್ನು ಲಿಂಗದಿಂದ ನಿರ್ಧರಿಸಬೇಕು ಎಂದು ಟ್ರಂಪ್ ಆದೇಶ ಹೇಳಿದೆ. ಜಾಗತಿಕ ಮಟ್ಟದಲ್ಲಿ ಕಠಿಣ ನಿಯಮಗಳಿಗೆ ಒತ್ತಾಯಿಸಿದೆ.

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...