ವಾಷಿಂಗ್ಟನ್‌ನ ಅಮೆರಿಕ ಸಂಸತ್ (ಕ್ಯಾಪಿಟಲ್) ಮೇಲೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅನಿರೀಕ್ಷಿತ ದಾಳಿ ನಡೆಸಿದ್ದು ಗಲಭೆ ಏರ್ಪಟ್ಟಿದೆ. ಗುಂಡಿನ ದಾಳಿಯಲ್ಲಿ ಒಬ್ಬ ಮೃತಮಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ ಒಬ್ಬ ಮಹಿಳೆಯ ಭುಜಕ್ಕೆ ಗುಂಡು ತಗುಲಿದ್ದು, ರಕ್ತಸಿಕ್ತ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.
ನವೆಂಬರ್ 03 ರಂದು ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮ ಇಂದು ನಿಗಧಿಯಾಗಿತ್ತು. ಅದಕ್ಕಾಗಿ ಹಲವಾರು ಶಾಸಕರು ಸೇರಿದ್ದರು. ಈ ವೇಳೆ ಸಂಸತ್ ಹೊರಗಿದ್ದ ಟ್ರಂಪ್ ಬೆಂಬಲಿಗರು ಬಲವಂತವಾಗಿ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.
ಇದರಿಂದ ಟ್ರಂಪ್ ಪರ ರಿಪಬ್ಲಿಕನ್ ಶಾಸಕರ ತಂಡವು ತಂದಿದ್ದ ಬಿಡೆನ್ ಅವರ ವಿಜಯದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸುತ್ತಿದ್ದ ಸೆನೆಟ್ ಮತ್ತು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನಿರೀಕ್ಷಿತವಾಗಿ ಹಿಮ್ಮೆಟ್ಟಿತು.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಡೊನಾಲ್ಡ್ ಟ್ರಂಪ್ ವಿರುದ್ಧ 306-232ರಿಂದ ಅಂತರದಿಂದ ಜಯಗಳಿಸಿದ್ದಾರೆ. ಆದರೆ ಇದನ್ನು ಟ್ರಂಪ್ ಒಪ್ಪುತ್ತಿಲ್ಲ. ಹಾಗಾಗಿ ಟ್ರಂಪ್ ಬೆಂಬಲಿಗರು ಇಂದು ಸಂಸತ್ ಮೇಲೆ ದಾಳಿ ನಡೆಸಿದ್ದಾರೆ.
ಅಲ್ಲದೆ ಟ್ರಂಪ್ ಉಪಾಧ್ಯಕ್ಷ ಮೈಕ್ ಪೆನ್ಸ್ ಫಲಿತಾಂಶಗಳನ್ನು ಬದಲಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಯುಎಸ್ ಸಂವಿಧಾನವು ಚುನಾವಣೆಯ ಫಲಿತಾಂಶಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸುವ ಅಧಿಕಾರವನ್ನು ಪೆನ್ಸ್‌ಗೆ ನೀಡುವುದಿಲ್ಲ, ಆದರೆ ಟ್ರಂಪ್‌ನಿಂದ ಅದನ್ನು ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.
ಇದನ್ನೂ ಓದಿ : ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್, ಭಗತ್‌ಸಿಂಗ್!


