Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...