Homeಮುಖಪುಟಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ ಅದನ್ನು ಬಲಪಡಿಸುವ ಅಗತ್ಯವಿದೆ- ಕಪಿಲ್ ಸಿಬಲ್

ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು- ಅಭಿಷೇಕ್ ಮನು ಸಿಂಗ್ವಿ

- Advertisement -
- Advertisement -

ಕಾಂಗ್ರೆಸ್ “ದುರ್ಬಲಗೊಳ್ಳುತ್ತಿದೆ” ಮತ್ತು ಅದನ್ನು ಬಲಪಡಿಸುವ ಅಗತ್ಯವಿದೆ ಎಂದು ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ಶನಿವಾರ (ಫೆ.27) ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಐದು ರಾಜ್ಯಗಳ ಚುನಾವಣೆಗೆ ಕೆಲವೇ ವಾರಗಳಿರುವಾಗ ಈ ಹೇಳಿಕೆ ಹೊರ ಬಂದಿದೆ. ಜಿ -23 ಸದಸ್ಯರಾಗಿ, ಗಾಂಧಿ ನಾಯಕತ್ವವನ್ನು ಬಹಿರಂಗವಾಗಿ ಪ್ರಶ್ನಿಸಿದ ಹಿರಿಯ ನಾಯಕರ ಗುಂಪಿನ ಸದಸ್ಯರಾಗಿ ಕೇಂದ್ರ ನಾಯಕತ್ವಕ್ಕೆ ತೀಕ್ಷವಾದ ಹೇಳಿಕೆ ನೀಡಿದ್ದಾರೆ.

ಕಪಿಲ್ ಸಿಬಲ್ ಅವರಲ್ಲದೆ, ಮಾಜಿ ರಾಜ್ಯಸಭಾ ಸಂಸದ ಗುಲಾಮ್ ನಬಿ ಆಜಾದ್, ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ, ರಾಜ್ಯಸಭಾ ಸಂಸದ ವಿವೇಕ್ ತಂಖಾ, ಲೋಕಸಭಾ ಸಂಸದ ಮನೀಶ್ ತಿವಾರಿ ಮತ್ತು ಹರಿಯಾಣ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಕೂಡಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

“ಸತ್ಯವೆಂದರೆ, ಕಾಂಗ್ರೆಸ್ ದುರ್ಬಲಗೊಳ್ಳುತ್ತಿದೆ. ದುರ್ಬಲಗೊಳ್ಳುವುದನ್ನು ನಾವು ನೋಡುತ್ತಿದ್ದೇವೆ. ಅದಕ್ಕಾಗಿಯೇ ನಾವು ಒಟ್ಟುಗೂಡಿದ್ದೇವೆ. ನಾವು ಒಟ್ಟಾಗಿ ಪಕ್ಷವನ್ನು ಬಲಪಡಿಸಬೇಕು” ಎಂದು ಕಪಿಲ್ ಸಿಬಲ್ ಹೇಳಿದರು.

“ನಮ್ಮ ಧ್ವನಿಯು ಪಕ್ಷದ ಸುಧಾರಣೆಗಾಗಿಯೇ. ಅದನ್ನು ಮತ್ತೊಮ್ಮೆ ದೇಶದ ಎಲ್ಲೆಡೆ ಬಲಪಡಿಸಬೇಕು. ಹೊಸ ತಲೆಮಾರಿನವರು ಪಕ್ಷಕ್ಕೆ ಸೇರ್ಪಡೆ ಹೊಂದಬೇಕು. ಕಾಂಗ್ರೆಸ್ಸಿನ ಒಳ್ಳೆಯ ದಿನಗಳನ್ನು ನಾವು ನೋಡಿದ್ದೇವೆ. ಈಗ ನಮಗೆ ವಯಸ್ಸಾದಂತೆ ಅದು ದುರ್ಬಲಗೊಳ್ಳುವುದನ್ನು ನೋಡಲು ಬಯಸುವುದಿಲ್ಲ” ಎಂದು ಆನಂದ್ ಶರ್ಮಾ ಹೇಳಿದರು.

ಇದನ್ನೂ ಓದಿ: ಆದಿತ್ಯನಾಥ್ ಮತ್ತು ರಾಹುಲ್ ಗಾಂಧಿ ಇಬ್ಬರದೂ ಒಂದೇ ಭಾವನೆ: ಪಿಣರಾಯಿ ವಿಜಯನ್ ವಾಗ್ದಾಳಿ

ಭಿನ್ನಮತೀಯ ಕಾಂಗ್ರೆಸ್ ನಾಯಕರ ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಗ್ವಿ ತಮ್ಮ ಮುಖಂಡರಿಗೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕೆಲಸ ಮಾಡುವತ್ತ ಗಮನಹರಿಸಬೇಕೆಂದು ಒತ್ತಾಯಿಸಿದ್ದಾರೆ.

“ಐದು ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿರುವಾಗ, ಈ ನಾಯಕರು ಕಾಂಗ್ರೆಸ್ ಅನ್ನು ಬಲಪಡಿಸಲು ಈ ರಾಜ್ಯಗಳಲ್ಲಿ ಇರಬಹುದಿತ್ತು. ಚುನಾವಣೆ ನಡೆಯುತ್ತಿರುವ ಈ ರಾಜ್ಯಗಳಲ್ಲಿ ತೊಡಗಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಉದ್ದೇಶಕ್ಕೆ ನೀಡುವ ಉತ್ತಮ ಕೊಡುಗೆ” ಎಂದು ಹೇಳಿದ್ದಾರೆ.

“ಕಾಂಗ್ರೆಸ್ ಪರವಾಗಿ ಅತ್ಯಂತ ಗೌರವದಿಂದ ನಾವು ಅವರ ಬಗ್ಗೆ ಹೆಮ್ಮೆಪಡುತ್ತೇವೆ. ಅವರೂ ಕೂಡ ಹೆಮ್ಮೆ ಪಡುತ್ತಾರೆ. ನಾವು ಎಂದಿಗೂ ಒಂದು ಕುಟುಂಬ. ಜಮ್ಮುವಿನಲ್ಲಿರುವ ಪ್ರತಿಯೊಬ್ಬರೂ ಹಿರಿಯ ನಾಯಕರು” ಎಂದು ಅಭಿಷೇಕ್ ಮನು ಸಿಂಗ್ವಿ ಹೇಳಿದ್ದಾರೆ.

“ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಕಾಂಗ್ರೆಸ್‌ನಲ್ಲಿ ಏನಾಗುತ್ತಿದೆ ಎಂಬ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ. ಯಾವುದೇ ಸುಧಾರಣೆಗಳು ಅಥವಾ ಚುನಾವಣೆಯ ಯಾವುದೇ ಲಕ್ಷಣಗಳಿಲ್ಲ” ಎಂದು ಜಿ -23 ಹಿರಿಯ ಮುಖಂಡರೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಎಎನ್‌ಐ ಉಲ್ಲೇಖಿಸಿದ ಮೂಲಗಳು ಈ ವಿಷಯದ ಬಗ್ಗೆ ಜಿ -23 ನಾಯಕರ ಅಭಿಪ್ರಾಯದ ಬಗ್ಗೆ ಕಾಂಗ್ರೆಸ್ ನಾಯಕತ್ವಕ್ಕೆ ತಿಳಿದಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಆದರೂ “ಯಾವುದೇ ತೀರ್ಮಾನಕ್ಕೆ ಬರುವ ಆತುರದಲ್ಲಿ ಹೈಕಮಾಂಡ್ ಇಲ್ಲ ಎಂದಿದೆ.


ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...