Homeಮುಖಪುಟನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ 'ಪಾಕಿಸ್ತಾನ್‌ ಝಿಂದಾಬಾದ್‌' ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್‌’ ಕೂಗಿಲ್ಲ: ಸತ್ಯ ಬಿಚ್ಚಿಟ್ಟ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್‌ ಹುಸೇನ್‌ ಗೆದ್ದ ಬಳಿಕ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ಕೂಗಿದ್ದು ಸಾಸೀರ್‌ ಸಾಬ್‌ ಝಿಂದಾಬಾದ್ ಹೊರತು, ಪಾಕಿಸ್ತಾನ್‌ ಝಿಂದಾಬಾದ್‌ ಅಲ್ಲ, ಆದರೆ ಕನ್ನಡದ ಮಾಧ್ಯಮಗಳು ಇದನ್ನು ತಿರುಚಿವೆ ಎಂದು ಘೋಷಣೆಯ ವೇಳೆ ಸ್ಥಳದಲ್ಲಿದ್ದ ಎಎನ್‌ಐ  ಪತ್ರಕರ್ತ ಎಂ.ಮಧು ತಿಳಿಸಿದ್ದಾರೆ.

ಎಎನ್‌ಐ ಕರ್ನಾಟಕ ಮುಖ್ಯಸ್ಥರೂ ಆಗಿರುವ ಮಧು ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
‘ಇವರು ಕಾಂಗ್ರೆಸ್ ಪಕ್ಷದ ಸಂಸದ ನಾಸೀರ್‌ ಹುಸೇನ್. ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಇವರ ಬೆಂಬಲಿಗರು ನಾಸೀರ್ ಸಾಬ್ ಝಿಂದಾಬಾದ್, ನಾಸೀರ್‌ ಸಾಬ್ ಝಿಂದಾಬಾದ್, ಸೈಯದ್ ಸಾಬ್  ಝಿಂದಾಬಾದ್ ಎಂದು ಕೂಗಿದರು. ಆದರೆ ಕನ್ನಡದ ಸುದ್ದಿವಾಹಿನಿಗಳು ಇದನ್ನು ಪಾಕಿಸ್ತಾನ್ ಝಿಂದಾಬಾದ್ ಎಂದು ತಪ್ಪಾಗಿ ಸುದ್ದಿ ಮಾಡಿದೆ. ಇದು ಉದ್ದೇಶಪೂರ್ವಕ ಕರುಣಾಜನಕ ಪ್ರಮಾದ ಎಂದು ವಿಷಾದವನ್ನು ವ್ಯಕ್ತಪಡಿಸಿದ್ದಾರೆ.

 

ಇದಲ್ಲದೆ ಮಧು ಅವರು ಮತ್ತೊಂದು ಪೋಸ್ಟ್‌  ಮಾಡಿದ್ದು, ಇದನ್ನು ಪೊಲೀಸ್, ಸರ್ಕಾರ ಮತ್ತು ಪ್ರತಿಪಕ್ಷಗಳು ಸಾಬೀತುಪಡಿಸಬೇಕು. ನಾನು ನೋಡಿದ್ದನ್ನು ಮತ್ತು ನಾನು ಕೇಳಿದ್ದನ್ನು ಟ್ವೀಟ್ ಮಾಡಿದ್ದೇನೆ. ಆ ಬೆಂಬಲಿಗರ ಗುಂಪಿನಲ್ಲಿ ಯಾರೂ ಕೂಡ ಯಾವುದೇ ದೇಶದ ಪರವಾಗಿ ಯಾವುದೇ ಘೋಷಣೆಯನ್ನು ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪತ್ರಕರ್ತ ಮಧು ಅವರು ಆರಂಭದಿಂದ ಕೊನೆಯವರೆಗೂ ಸ್ಥಳದಲ್ಲಿದ್ದರು ಎಂದು ಹೇಳಲಾಗಿದೆ. ಇದಲ್ಲದೆ ಮಧು ಅವರಿಗೆ ತಮ್ಮ ಪೋಸ್ಟ್ ಅಳಿಸಿ ಹಾಕುವಂತೆ ಒತ್ತಡಗಳನ್ನು ಹೇರಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಮಾಧ್ಯಮಗಳ ವರದಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ, ದೇಶದಲ್ಲಿ ಬಿಜೆಪಿ ಸವಾಲುಗಳನ್ನು ಎದುರಿಸುವ ಸಂದರ್ಭ ಬಂದಾಗಲೆಲ್ಲ  “ಪಾಕಿಸ್ತಾನ್ ಜಿಂದಾಬಾದ್” ಎನ್ನುವ ಶಬ್ದ ಸದ್ದು ಮಾಡುತ್ತದೆ! ಮಾಧ್ಯಮ ಸ್ನೇಹಿತರಲ್ಲಿ ಕೇಳಬೇಕು ಎನಿಸುವ ಒಂದಷ್ಟು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ, ವಿಜಯೋತ್ಸವ ಆಚರಣೆಯ ವೇಳೆ ಅಲ್ಲಿ ಉಪಸ್ಥಿತರಿದ್ದ ಒಂದಷ್ಟು ಮಾಧ್ಯಮ ಸ್ನೇಹಿತರು ಅಲ್ಲಿ “ನಾಸಿರ್ ಸಾಬ್ ಜಿಂದಾಬಾದ್” ಎಂದು ಕೂಗಿರುವುದಾಗಿ ಹೇಳಿದ್ದಾರೆ. ಅಕಸ್ಮಾತ್ ಅಲ್ಲಿ “ಪಾಕಿಸ್ತಾನ್” ಎಂದೇ ಕೂಗಿದ್ದರೆ ಎಲ್ಲರಿಗೂ ಒಂದೇ ರೀತಿ ಕೇಳಿಸಿರಬೇಕಲ್ಲವೇ?  ಅಕಸ್ಮಾತ್ ಆತ ನಿಜಕ್ಕೂ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದರೆ ಸಹಜವಾಗಿ ಪತ್ರಕರ್ತರ ಪ್ರಜ್ಞೆ ಜಾಗೃತವಾಗಿ ಆತನತ್ತ ಗಮನ ಹರಿಸುತ್ತಿದ್ದರು, ಆತನತ್ತ ಕ್ಯಾಮರಾ ತಿರುಗಿಸುತ್ತಿದ್ದರು, ಆತನ ಮೇಲೆ ಮುಗಿಬೀಳುತ್ತಿದ್ದರು, ಆದರೆ ಇಲ್ಲಿ ಪತ್ರಕರ್ತರು ಆತನತ್ತ ಕಿಂಚಿತ್ತೂ ಗಮನಿಸುವುದಿಲ್ಲ, ಆತ ಹಾಗೆ ಕೂಗಿದ್ದೇ ಆಗಿದ್ದರೆ ಅಲ್ಲಿ ನೆರೆದಿದ್ದವರು ಖಂಡಿತಾ ಸುಮ್ಮನಿರುತ್ತಿರಲಿಲ್ಲ, ಕೂಡಲೇ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸುತ್ತಿದ್ದರು, ಪತ್ರಕರ್ತರೂ ಸೇರಿದಂತೆ ಅಲ್ಲಿ ನೆರೆದಿದ್ದವರ ಮ್ಯಾನರಿಸಂನಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ, ಅಕಸ್ಮಾತ್ ಆ ವ್ಯಕ್ತಿ ಹಾಗೆ ಘೋಷಣೆ ಕೂಗಿದ್ದಿದ್ದರೆ ಅಲ್ಲಿನ ಪತ್ರಕರ್ತರ “ದೇಶಭಕ್ತಿ“ ಜಾಗೃತವಾಗದೆ ಸಹಜವಾಗಿದ್ದಿದ್ದೇಕೆ? ಏನೂ ನಡೆದೇ ಇಲ್ಲ ಎನ್ನುವಂತೆ ನಡೆದುಕೊಂಡಿದ್ದೇಕೆ? ಪತ್ರಕರ್ತ ಸ್ನೇಹಿತರೇ ಉತ್ತರಿಸಬೇಕು. ಮಾಧ್ಯಮ ಜಾಗೃತವಾಗಲಿ. ಜಾಗೃತ ಮಾಧ್ಯಮ ಜನಕಲ್ಯಾಣಕ್ಕೆ ಕಾರಣವಾಗಲಿ. ಈ ರೀತಿ ಭಜನೆಗಲ್ಲಾ ಎಂದು ಪ್ರಿಯಾಂಕ ಖರ್ಗೆ ಟ್ವೀಟ್‌ ಮಾಡಿದ್ದಾರೆ.

ರಾಜ್ಯಸಭೆಗೆ ಮಂಗಳವಾರ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು. ರಾಜ್ಯದ ವಿವಿಧೆಡೆ ಬಿಜೆಪಿ ಪ್ರತಿಭಟನೆಯನ್ನು ಮಾಡಿತ್ತು. ಆದರೆ ವಾಸ್ತವವಾಗಿ ಕಾಂಗ್ರೆಸ್‌ ಕಾರ್ಯಕರ್ತರು, ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ವಿಡಿಯೋಗಳ ಪರಿಶೀಲನೆ ವೇಳೆ ಬಯಲಾಗಿತ್ತು.

ಇದನ್ನು ಓದಿ: ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...