Homeಮುಖಪುಟವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

ವಾರಣಾಸಿ: ಕೋಮುದ್ವೇಷ ಹರಡಲು ಪೋಸ್ಟರ್‌ ಅಂಟಿಸಿದ ಐವರು ದುಷ್ಕರ್ಮಿಗಳ ಮೇಲೆ ಎಫ್‌ಐಆರ್‌‌

- Advertisement -
- Advertisement -

ಹಿಂದೂಯೇತರರನ್ನು ದೂರವಿಡಿ ಎಂದು ಪೋಸ್ಟರ್‌ ಹಾಕುವ ಮೂಲಕ ಕೋಮುದ್ವೇಷ ಹರಡಲು ಯತ್ನಿಸಿದ ಐವರ ವಿರುದ್ಧ ವಾರಣಾಸಿ ಪೊಲೀಸರು ಜನವರಿ 9ರಂದು ಎಫ್‌ಐಆರ್‌‌ ದಾಖಲಿಸಿದ್ದಾರೆ.

ವಾರಣಾಸಿಯ ವಿವಿಧ ಘಾಟ್‌ಗಳಲ್ಲಿ ಹಿಂದೂಯೇತರರನ್ನು ದೂರವಿಡುವಂತೆ ಎಚ್ಚರಿಕೆ ನೀಡುವ ಪೋಸ್ಟರ್‌ಗಳನ್ನು ಹಾಕಲಾಗಿತ್ತು. ಈ ಕುರಿತು ಇಲ್ಲಿನ ಭೇಲುಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆದರೆ, ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳದ ಸದಸ್ಯರು ವಾರಣಾಸಿಯ ಘಾಟ್‌ಗಳ ಸುತ್ತಲೂ ಪೋಸ್ಟರ್‌ಗಳನ್ನು ಅಂಟಿಸಿದ್ದರು. ಅದರಲ್ಲಿ ಹಿಂದೂಯೇತರರು ವಾರಣಾಸಿಯಲ್ಲಿ ಗಂಗಾನದಿಯ ದಂಡೆಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು. ಈ ಪೋಸ್ಟರ್‌ಗಳನ್ನು ಹಾಕುತ್ತಿರುವ ಫೋಟೋಗಳು, ವೀಡಿಯೊಗಳನ್ನೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಐವರು ಆರೋಪಿಗಳಲ್ಲಿ ಇಬ್ಬರು ವಿಎಚ್‌ಪಿ ಮತ್ತು ಬಜರಂಗದಳಕ್ಕೆ ಸೇರಿದವರು. ಅವರೇ ಈ ಕುರಿತು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬಿಬ್ಬರನ್ನು ರಾಜನ್ ಗುಪ್ತಾ, ನಿಖಿಲ್ ತ್ರಿಪಾಠಿ “ರುದ್ರ” ಎಂದು ಪೊಲೀಸರು ಗುರುತಿಸಿದ್ದಾರೆ.

ವಿಎಚ್‌ಪಿಯ ವಾರಣಾಸಿ ವಿಭಾಗದ ಕಾರ್ಯದರ್ಶಿ ರಾಜನ್ ಗುಪ್ತಾ ಅವರು ವೀಡಿಯೊವೊಂದರಲ್ಲಿ, “ಈ ಪೋಸ್ಟರ್‌ಗಳು ಮನವಿಯಲ್ಲ, ಆದರೆ ಸನಾತನ ಧರ್ಮವನ್ನು ಅನುಸರಿಸದವರಿಗೆ ಎಚ್ಚರಿಕೆ” ಎಂದು ಹೇಳಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇಲ್ಲಿನ ಘಾಟ್‌ಗಳು, ಕಾಶಿಯ ದೇವಾಲಯಗಳನ್ನು ಹಿಂದೂ ಧರ್ಮ ಮತ್ತು ಸಂಸ್ಕೃತಿಯ ಸಂಕೇತಗಳೆಂದು ಕರೆದಿರುವ ಗುಪ್ತಾ, ಇತರರು ಇಲ್ಲಿಂದ ದೂರವಿರಬೇಕು ಎಂದು ಹೇಳುತ್ತಾರೆ. “ಈ ಸ್ಥಳಗಳಿಗೆ ಭೇಟಿ ನೀಡುವವರು ಹಿಂದೂ ಧರ್ಮದಲ್ಲಿ ನಂಬಿಕೆ ಹೊಂದಿದ್ದರೆ, ಅವರಿಗೆ ಸ್ವಾಗತವಿದೆ. ಇಲ್ಲದಿದ್ದರೆ ನಾವು ಅವರನ್ನು ನಮ್ಮ ಪವಿತ್ರ ಸ್ಥಳಗಳಿಂದ ವಾಪಸ್‌ ಕಳುಹಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಬಜರಂಗದಳದ ವಾರಣಾಸಿ ಸಂಯೋಜಕ, ನಿಖಿಲ್ ತ್ರಿಪಾಠಿ ‘ರುದ್ರ’ ಮಾತನಾಡಿ, “ಗಂಗಾ ನದಿ ನಮ್ಮ ತಾಯಿ, ಇದು ಪಿಕ್ನಿಕ್ ಸ್ಪಾಟ್ ಅಲ್ಲ. ಗಂಗೆಯನ್ನು ಪಿಕ್ನಿಕ್ ಸ್ಪಾಟ್ ಎಂದು ಪರಿಗಣಿಸುವವರು ಅದರಿಂದ ದೂರವಿರಬೇಕು. ಅವರಾಗಿಯೇ ಇದನ್ನು ಪಾಲಿಸದಿದ್ದರೆ ಬಜರಂಗದಳ ಈ ಕೆಲಸವನ್ನು ಮಾಡಿಸುತ್ತದೆ” ಎಂದಿದ್ದಾರೆ.

ಇಬ್ಬರನ್ನು ಸಂಘಟನೆಗಳಿಂದ ತೆಗೆದುಹಾಕಲಾಗಿದೆ ಎಂದು ವಿಎಚ್‌ಪಿ ಭಾನುವಾರ ಹೇಳಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌‌ ವರದಿ ಮಾಡಿದೆ.

ಸಹಾಯಕ ಪೊಲೀಸ್ ಕಮಿಷನರ್ (ಭೇಲುಪುರ್) ಪ್ರವೀಣ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು, “ಭಾಗಿಯಾಗಿರುವ ಇತರರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ತನಿಖಾಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ” ಎಂದಿದ್ದಾರೆ.

ಗುಪ್ತಾ ಮತ್ತು ತ್ರಿಪಾಠಿ ಅವರನ್ನು ಸಂಘಟನೆಗಳಿಂದ ಹೊರಹಾಕಲಾಗಿದೆ. ಅವರನ್ನು ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ವಿಎಚ್‌ಪಿಯ ಕಾಶಿ (ವಾರಣಾಸಿ) ಪ್ರಾಂತ ಮಂತ್ರಿ ಆನಂದ್ ಸಿಂಗ್ ತಿಳಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ನಾಯಕ ರಾಘವೇಂದ್ರ ಚೌಬೆ ಅವರು ‘ದಿ ವೈರ್‌’ನೊಂದಿಗೆ ಮಾತನಾಡಿ, “ಕಾಂಗ್ರೆಸ್‌ ಪಕ್ಷವು ಬಲಪಂಥೀಯರ ದುಷ್ಕೃತ್ಯಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದೆ. ಪಟ್ಟಣದಲ್ಲಿ ಕೇಸರಿ ವಸ್ತ್ರಧಾರಿ ಯುವಕರು ಆರಂಭಿಸಿರುವ ದ್ವೇಷ ಅಭಿಯಾನದ ಕುರಿತು ಇಲ್ಲಿನ ಡಿಸಿಪಿ ಅವರಿಗೆ ಮಾಹಿತಿ ನೀಡಿದ್ದೇನೆ” ಎಂದು ಹೇಳಿದ್ದಾರೆ.

“ಗಂಗಾ ಮತ್ತು ಅದರ ಘಾಟ್‌ಗಳು ಎಂದಿಗೂ ಒಂದು ಧರ್ಮದ ಅನುಯಾಯಿಗಳಿಗೆ ಸೇರಿಲ್ಲ” ಎಂದು ಹಿರಿಯ ಪತ್ರಕರ್ತ ವಿಜಯ್ ವಿನೀತ್ ದೂರವಾಣಿಯಲ್ಲಿ ದಿ ವೈರ್‌ಗೆ ತಿಳಿಸಿದ್ದಾರೆ.

ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರು ಗಂಗಾ ಸ್ನಾನದ ನಂತರ ಹೇಗೆ ನಮಾಜ್ ಮಾಡುತ್ತಿದ್ದರು ಎಂಬುದರ ಕುರಿತು ಹಿರಿಯ ಪತ್ರರ್ಕರು ವಿವರಿಸಿದ್ದಾರೆ. ರಾಜಕೀಯಕ್ಕಾಗಿ ಜನರನ್ನು ವಿಭಜಿಸಲು ಯತ್ನಿಸುತ್ತಿರುವ ಶಕ್ತಿಗಳ ಕುರಿತು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರವಾಗಿದೆ. ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತಗಳಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಮುನ್ನ ಈ ಘಟನೆ ನಡೆದಿದೆ.


ಇದನ್ನೂ ಓದಿರಿ: ‘ಪ್ರಧಾನಿಯ ಭದ್ರತಾ ಲೋಪದ ಬಗ್ಗೆ ಎಲ್ಲವನ್ನೂ ನೀವೇ ತೀರ್ಮಾನಿಸಿದರೆ ನಮಗೇನು ಕೆಲಸ?: ಒಕ್ಕೂಟ ಸರ್ಕಾರಕ್ಕೆ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...