Homeಮುಖಪುಟಯುಸಿಸಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ: ವಿವಾದಾತ್ಮಕ ಕಾಯ್ದೆ ಜಾರಿಗೆ ಉತ್ತರಾಖಂಡದ ಹಾದಿ ಸುಗಮ

ಯುಸಿಸಿ ಕಾಯ್ದೆಗೆ ರಾಷ್ಟ್ರಪತಿ ಅಂಕಿತ: ವಿವಾದಾತ್ಮಕ ಕಾಯ್ದೆ ಜಾರಿಗೆ ಉತ್ತರಾಖಂಡದ ಹಾದಿ ಸುಗಮ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡ ಮಸೂದೆ-2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತವನ್ನು ಹಾಕಿದ್ದಾರೆ. ಉತ್ತರಾಖಂಡ ಸರ್ಕಾರವು ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಶೀಘ್ರ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದ್ದು, ಅಸಂವಿಧಾನಿಕ ಯುಸಿಸಿ ಕಾಯ್ದೆಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯವಾಗಲಿದೆ.

ಈ ಕುರಿತು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿಯ ಕಾರ್ಯದರ್ಶಿ ಶೈಲೇಶ್ ಬಗೌಲಿ ಮಾಹಿತಿಯನ್ನು ನೀಡಿದ್ದು, ರಾಷ್ಟ್ರಪತಿ ಮಸೂದೆಗೆ ಅನುಮೋದನೆ ನೀಡಿದ್ದಾರೆ ಮತ್ತು ಕಾಯ್ದೆಯನ್ನು ಶೀಘ್ರವಾಗಿ  ಉತ್ತರಾಖಂಡದಲ್ಲಿ ಜಾರಿಗೆ ತರಲಾಗುವುದು, ರಾಜ್ಯ ಸರ್ಕಾರವು ಈ ಬಗ್ಗೆ ಅಧಿಸೂಚನೆಯನ್ನು ಹೊರಡಿಸಿದ ನಂತರ ಇದು ಕಾನೂನು ಆಗುತ್ತದೆ ಎಂದು ಹೇಳಿದ್ದಾರೆ.

740 ಪುಟಗಳ ಕರಡನ್ನು ಫೆಬ್ರವರಿ 2 ರಂದು 5 ಸದಸ್ಯರ ಕರಡು ಸಮಿತಿಯು ಸಿಎಂಗೆ ಸಲ್ಲಿಸಿತು ಮತ್ತು ನಂತರ ಫೆಬ್ರವರಿ 4 ರಂದು ಮಸೂದೆಯನ್ನು ಕ್ಯಾಬಿನೆಟ್ ಅಂಗೀಕರಿಸಿದೆ. ಮಸೂದೆಯನ್ನು ಫೆ.6ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ಮಂಡಿಸಲಾಯಿತು ಮತ್ತು ಫೆ.7ರಂದು ಅನುಮೋದನೆ ನೀಡಲಾಗಿದೆ. ಉತ್ತರಾಖಂಡ ರಾಜ್ಯಪಾಲರಾದ ಗುರ್ಮಿತ್ ಸಿಂಗ್  ಅವರು ಈ ವರ್ಷ ಫೆಬ್ರವರಿ 28ರಂದು ಮಸೂದೆಯನ್ನು ಅನುಮೋದನೆ ನೀಡಿದ್ದಾರೆ ಮತ್ತು ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದರು.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇತ್ತೀಚೆಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತ್ವತ್ವದ ಐವರು ಸದಸ್ಯರ ಸಮಿತಿ ಸಲ್ಲಿಸಿದ ಯುಸಿಸಿ ಕುರಿತ ಕರಡು ಸಮಿತಿ ವರದಿಯನ್ನು ಉತ್ತರಖಂಡ ಸರಕಾರ ಸಂಪುಟ ಸಭೆಯಲ್ಲಿ ಅನುಮೋದನೆ  ಪಡೆದುಕೊಂಡಿತ್ತು.

ಮಸೂದೆಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ ಮತ್ತು ಅದು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಮದುವೆ ಮತ್ತು ವಿಚ್ಛೇದನ, ಉತ್ತರಾಧಿಕಾರ, ಲಿವ್-ಇನ್ ಸಂಬಂಧಗಳು, ವಿವಿಧ ಈ ರೀತಿಯಾಗಿ ವಿಂಗಡಿಸಲಾಗಿದೆ.

ದಂಪತಿಗಳು ತಮ್ಮ ಲೀವ್‌-ಇನ್ ಸಂಬಂಧದ ಬಗ್ಗೆ ನೋಂದಾಯಿಸದಿದ್ದರೆ, ಅವರು ಗರಿಷ್ಠ ಆರು ತಿಂಗಳ ಜೈಲು ಶಿಕ್ಷೆ ಅಥವಾ ರೂ 25,000ರೂ.ದಂಡ ಅಥವಾ ಎರಡನ್ನೂ ಎದುರಿಸಬೇಕಾಗುತ್ತದೆ. ಲಿವ್-ಇನ್ ಸಂಬಂಧದಿಂದ ಜನಿಸಿದ ಮಕ್ಕಳನ್ನು ದಂಪತಿಗಳ ಕಾನೂನುಬದ್ಧ ಮಗು ಎಂದು ಪರಿಗಣಿಸಲಾಗುತ್ತದೆ ಮತ್ತು ಮದುವೆಯಿಂದ ಜನಿಸಿದ ಮಕ್ಕಳಿಗೆ ಅನ್ವಯವಾಗುವ ಎಲ್ಲಾ ಕಾನೂನು ಹಕ್ಕುಗಳನ್ನು ಅಂತಹ ಮಕ್ಕಳಿಗೆ ನೀಡಲಾಗುತ್ತಿದೆ. ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಮಸೂದೆ ಸಲಹೆ ನೀಡಿತ್ತು.

ಇದನ್ನು ನೋಡಿ: ಭಾರತದಲ್ಲಿ ಸಿಎಎ ಜಾರಿ: ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ, ಅಮೆರಿಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...