Homeಮುಖಪುಟಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ಲೆಕ್ಕಪರಿಶೋಧನೆ ಜವಾಬ್ದಾರಿ ಸಿಎಜಿಗೆ: ಕೆಲಸ ಮುಗಿಯಿತು ಎಂದ ಸುಬ್ರಮಣಿಯನ್ ಸ್ವಾಮಿ

ಟಿಟಿಡಿ ನಿರ್ಧಾರದ ನಂತರ  ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದ ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದ ಲೆಕ್ಕಪರಿಶೋಧನೆಯನ್ನು ಇನ್ನು ಮುಂದೆ ಸಿಎಜಿ ಮಾಡಲಿದ್ದಾರೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿ ತಿಳಿಸಿದೆ. ಇಷ್ಟು ದಿನ ಆಂಧ್ರಪ್ರದೇಶ ರಾಜ್ಯ ಲೆಕ್ಕಪರಿಶೋಧನಾ ವಿಭಾಗವು ಲೆಕ್ಕಪರಿಶೋಧನಾ ವರದಿಗಳನ್ನು ನೋಡಿಕೊಳ್ಳುತ್ತಿತ್ತು.

ದೇಶದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ತಿರುಮಲ ದೇವಸ್ಥಾನದ ಲೆಕ್ಕಪರಿಶೋಧನಾ ವರದಿಗಳನ್ನು ಈಗ ಭಾರತದ ಕಂಟ್ರೋಲರ್ ಮತ್ತು ಲೆಕ್ಕಪರಿಶೋಧಕ ಜನರಲ್ (ಸಿಎಜಿ) ಮಾಡಲಿದ್ದಾರೆ ಎಂದು ಟಿಟಿಡಿ ಮಂಡಳಿ ಬುಧವಾರ ತಿಳಿಸಿದೆ.

ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸಲು ಮತ್ತು ಕಳೆದ ಐದು ವರ್ಷಗಳಿಂದ ಟಿಟಿಡಿ ಖಾತೆಗಳ ಲೆಕ್ಕಪರಿಶೋಧನಾ ವರದಿಯನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಎಂದು ಆಂಧ್ರಪ್ರದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯು ಇನ್ನು ಬಾಕಿ ಇರುವ ಸಮಯದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯವರ ವೆಬ್ ಸೈಟ್ ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್!; ತನಿಖೆ ನಡೆಸುತ್ತಿದ್ದೇವೆ.

ಟಿಟಿಡಿ ನಿರ್ಧಾರ ಬಗ್ಗೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ನಾನು ಮತ್ತು ನನ್ನ ಸಹವರ್ತಿ ಸತ್ಯಪಾಲ್ ಸಭರ್ವಾಲ್ ಕಳೆದ 5 ವರ್ಷಗಳಿಂದ ತಿರುಪತಿ ದೇವಾಲಯದ ನಿಧಿಯ ಸಿಎಜಿ ಲೆಕ್ಕಪರಿಶೋಧನೆಗೆ ಕೋರಿ ಆಂಧ್ರ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದೆವು. ಆಂಧ್ರ ಪ್ರದೇಶ ಸಿಎಂ ಜಗನ್ ಇದಕ್ಕೆ ಒಪ್ಪಿಗೆ ಸೂಚಿಸಿದ್ದರು. ಟಿಟಿಡಿ ಅಧ್ಯಕ್ಷರಾದ ಸುಬ್ಬಾ ರೆಡ್ಡಿ ಮತ್ತು ಸದಸ್ಯ ಮತ್ತು ವಿಎಚ್‌ಎಸ್‌ ಎಪಿ ನಾಯಕ ಗೋವಿಂದ್ ಹರಿ ಇದನ್ನು ಟಿಟಿಡಿ ಮಂಡಳಿಯ ಮೂಲಕ ಪ್ರಾಯೋಗಿಕವಾಗಿ ನಡೆಸಿದರು. ನನ್ನ ಕಾರ್ಯ ಪೂರ್ಣಗೊಂಡಿದೆ ಎಂದಿದ್ದಾರೆ.

ಈ ಕುರಿತು ವಕೀಲ ಸತ್ಯಪಾಲ್ ಸಭರ್ವಾಲ್ ಕೂಡ ಟ್ವೀಟ್ ಮಾಡಿದ್ದು, 5 ವರ್ಷಗಳಿಂದ ಸಿಎಜಿಯಿಂದ ಬಾಹ್ಯ ಲೆಕ್ಕಪರಿಶೋಧನೆಗೆ ನಾನು ಪ್ರಾರ್ಥಿಸುತ್ತಿದ್ದೇನೆ. ಇದೊಂದು ಬೃಹತ್ ಗೆಲುವು ಎಂದಿದ್ದಾರೆ.

ಟಿಟಿಡಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅಂಗೀಕರಿಸಿದ 202 ಪುಟಗಳ ನಿರ್ಣಯದಲ್ಲಿ 2020-2021 ರಿಂದ ಟಿಟಿಡಿಯ ಲೆಕ್ಕಪರಿಶೋಧನೆಯನ್ನು ಸಿಎಜಿಗೆ ವಹಿಸಲು ಮಂಡಳಿ ನಿರ್ಧರಿಸಿದೆ.

ಜೊತೆಗೆ 2014-2015 ರಿಂದ 2019-2020 ರವರೆಗಿನ ಲೆಕ್ಕಪರಿಶೋಧನಾ ವರದಿಯನ್ನು ಈಗಾಗಲೇ ರಾಜ್ಯ ಲೆಕ್ಕಪರಿಶೋಧನಾ ಇಲಾಖೆ ಪೂರ್ಣಗೊಳಿಸಿರುವುದರಿಂದ, ಅದೇ ಅವಧಿಯ ವಿಶೇಷ ಲೆಕ್ಕಪರಿಶೋಧನೆಯನ್ನು ಕೈಗೆತ್ತಿಕೊಳ್ಳಲು ಮತ್ತು ಆರು ತಿಂಗಳೊಳಗೆ ತನ್ನ ವರದಿಯನ್ನು ನೀಡುವಂತೆ ಸಿಎಜಿಗೆ ಮನವಿ ಮಾಡಲು ಮಂಡಳಿ ರಾಜ್ಯ ಸರ್ಕಾರವನ್ನು ಕೋರಿದೆ.

ಟಿಟಿಡಿ ದೇವಸ್ಥಾನದಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಷಯದಲ್ಲಿ ಏನೂ ಮಾಡಿಲ್ಲ. ಈಗ ನಮಗೆ ಹೊಸ ಮುಖ್ಯಮಂತ್ರಿ ಇದ್ದಾರೆ. ಕಳೆದ ಐದು ವರ್ಷಗಳಿಂದ ತಿರುಮಲ ದೇವಸ್ಥಾನದ ಖಾತೆಗಳನ್ನು ಲೆಕ್ಕಪರಿಶೋಧಿಸಲು ಸಿಎಜಿ ಅಥವಾ ಇನ್ನಿತರ ಸ್ವತಂತ್ರ ಸಂಸ್ಥೆಗೆ ಅವಕಾಶ ನೀಡುವಂತೆ ನಾನು ಕೇಳುತ್ತಿದ್ದೇನೆ ಮತ್ತು ಭಕ್ತರು ಠೇವಣಿ ಇಟ್ಟ ಹಣಕ್ಕೆ ಏನಾಯಿತು ಎಂದು ನಮಗೆ ತಿಳಿಯಬೇಕಿದೆ ಎಂದಿದ್ದಾರೆ ಸುಬ್ಬಾ ರೆಡ್ಡಿ.

ಸದ್ಯ ಟಿಟಿಡಿ ಮಂಡಳಿಯು ತನ್ನ ನಿರ್ಧಾರವನ್ನು ತಿಳಿಸಿ ಹೈಕೋರ್ಟ್‌ಗೆ ಅಫಿಡವಿಟ್ ಕಳುಹಿಸುತ್ತದೆ. ಲೆಕ್ಕಪರಿಶೋಧನಾ ವರದಿಯಲ್ಲಿ ಸಾಮಾನ್ಯವಾಗಿ ದೇವಾಲಯದ ಎಲ್ಲಾ ಖಾತೆಗಳು, ಹಣದ ಬಳಕೆ ಮತ್ತು ಆಭರಣಗಳು ಸೇರಿದಂತೆ ಸಮಗ್ರ ವಿವರಗಳಿರುತ್ತವೆ.


ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...