Homeಕರೋನಾ ತಲ್ಲಣರಾಜ್ಯದಲ್ಲಿ 2 ತಿಂಗಳಲ್ಲೇ ಅತ್ಯಂತ ಕನಿಷ್ಟಕ್ಕಿಳಿದ ಕೊರೋನಾ ಸೋಂಕಿನ ಸಂಖ್ಯೆ

ರಾಜ್ಯದಲ್ಲಿ 2 ತಿಂಗಳಲ್ಲೇ ಅತ್ಯಂತ ಕನಿಷ್ಟಕ್ಕಿಳಿದ ಕೊರೋನಾ ಸೋಂಕಿನ ಸಂಖ್ಯೆ

- Advertisement -
- Advertisement -

ಬೆಂಗಳೂರಿನಲ್ಲಿ ಕೊರೋನಾ ಸಾಕ್ರಾಮಿಕದ ತೀವ್ರತೆ ಗಣನೀಯವಾಗಿ ಇಳಿಮುಖವಾಗುತ್ತ ಸಾಗಿದೆ. ಕೊರೋನಾ ಎರಡನೆಯ ಅಲೆಯು ತೀವ್ರವಾಗಿದ್ದ ಕಳೆದ ಎರಡು ತಿಂಗಳಲ್ಲಿ ಪ್ರತಿನಿತ್ಯ 5000 ಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿದ್ದವು. ಜೂನ್ 2 ನೇಯ ವಾರದಲ್ಲಿ ಹೊಸ ಕೋವಿಡ್‌ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 1000 ಕ್ಕಿಂತಲೂ ಕಡಿಮೆ ಆಗಿದೆ. ಲಾಕ್ ಡೌನ್‌ ಸಡಿಲಿಸಿದ ನಂತರ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚುವ ಸಾಧ್ಯತೆಯನ್ನು ನಿರೀಕ್ಷಿಸಲಾಗಿತ್ತು.

2 ತಿಂಗಳಲ್ಲೇ ಮೊದಲ ಬಾರಿಗೆ ಮಂಗಳವಾರ ಜೂನ್ 15 ರಂದು ಕೋವಿಡ್ ಸೋಂಕಿನ ಸಂಖ್ಯೆ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿದಿದೆ. ಬೆಂಗಳೂರು ನಗರದಲ್ಲಿ ಮಂಗಳವಾರ 1000 ಕ್ಕಿಂತ ಕಡಿಮೆ ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ ಮಂಗಳವಾರ 5041 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 115 ಕೋವಿಡ್ ಸಂಬಂಧಿ ಸಾವುಗಳು ದಾಖಲಾಗಿವೆ. ಇದೇ ಸಂದರ್ಭದಲ್ಲಿ ಮಂಗಳವಾರ 14,785 ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕರ್ನಾಟಕದಲ್ಲಿ ಮಂಗಳವಾರ ದಾಖಲಾದ 5,041 ಕೋವಿಡ್ ಪ್ರಕರಣಗಳಲ್ಲಿ 985 ಪ್ರಕರಣಗಳು  ಬೆಂಗಳೂರು ನಗರದಲ್ಲಿ ದಾಖಲಾಗಿವೆ. ಸದ್ಯ ಕರ್ನಾಟಕದಲ್ಲಿ 1,62,282 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಪಾಸಿಟಿವಿಟಿಯ ಪ್ರಮಾಣ 3.80% ದಷ್ಟಿದೆ. ಹಾಗೇ ಕೋವಿಡ್‌ನಿಂದ ಮೃತಪಡುತ್ತಿರವ ಪ್ರಮಾಣ 2.28% ದಷ್ಟು ಇದೆ.

ಕರ್ನಾಟಕದಲ್ಲಿ ಮೈಸೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಹೆಚ್ಚಿನ ಸುಧಾರಣೆಗಳಾಗಿಲ್ಲ. ನಿನ್ನೆ ಕೂಡ ಮೈಸೂರು ಮತ್ತು ಬೆಂಗಳೂರಿನಲ್ಲಿ 16 ಜನರು ಕೊರೋನಾ ಸಾಂಕ್ರಾಮಿಕಕ್ಕೆ ಬಲಿಯಾಗಿದ್ದಾರೆ.


ಇದನ್ನೂ ಓದಿ : ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...