Homeಕರ್ನಾಟಕತುಮಕೂರು: ಸ್ಥಳೀಯ ಪತ್ರಕರ್ತನ ಮೇಲೆ ಹಲ್ಲೆ, ದೂರು ದಾಖಲು

ತುಮಕೂರು: ಸ್ಥಳೀಯ ಪತ್ರಕರ್ತನ ಮೇಲೆ ಹಲ್ಲೆ, ದೂರು ದಾಖಲು

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಸ್ಥಳೀಯ ದಿನಪತ್ರಿಕೆಯ ವರದಿಗಾರರೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಬ್ಬಿ ಪಟ್ಟಣದಲ್ಲಿ ನೀರು ಪೋಲಾಗುತ್ತಿರುವ ಕುರಿತು ಸಮಗ್ರವಾಗಿ ವರದಿ ಮಾಡಿದ್ದ ಪತ್ರಕರ್ತ ರಮೇಶ್ ಗೌಡ ಅವರ ಮೇಲೆ, ಇಲ್ಲಿನ ಪ್ರವಾಸಿ ಮಂದಿರದ ಬಳಿ ಭಾನುವಾರ ಮಧ್ಯಾಹ್ನ ಸುಮಾರು 7 ರಿಂದ 8 ಜನ ಯುವಕರ ಗುಂಪು ಹಲ್ಲೆ ಮಾಡಿದೆ.

ಗಾಯಾಳು ರಮಶ್ ಗೌಡ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ತುಮಕುರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯೋಗೀಶ್ ಮತ್ತು ಕೌನ್ಸಲರ್‌ಗಳ ಹೆಸರು ಕೇಳಿ ಬಂದಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಬಿಜೆಪಿಯಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದೆ- ಸಿ.ಸಿ ಪಾಟೀಲ್

ಪಟ್ಟಣದ ಸುಭಾಷ್ ನಗರದಲ್ಲಿ ವಿಪರಿತವಾಗಿ ನೀರು ಪೋಲಾಗುತ್ತಿರುವ ಬಗ್ಗೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬರ ಮಾಹಿತಿ ಮೇರೆಗೆ ರಮೇಶ್ ಗೌಡ ಅವು ವಿವರವಾದ ವರದಿ ಮಾಡಿದ್ದರು. ನೀರು ಪೋಲಾಗುತ್ತಿರುವುದಕ್ಕೆ ವಾರ್ಡ್ ಸದಸ್ಯರ ನಿರ್ಲಕ್ಷ್ಯ ಕಾರಣ ಎಂದು ವರದಿ ಮಾಡಿದ್ದರು.

ಈ ವರದಿ ಮಾಡಿದ್ದ ಕಾರಣಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಯೋಗೀಶ್ ಮತ್ತು ಕೌನ್ಸಲರ್‌ಗಳಾದ ಕುಮಾರ್‌, ಲೋಕೇಶ್ ಬಾಬು ತಮ್ಮ ಗೂಂಡಾಗಳನ್ನು ಬಿಟ್ಟು ಹಲ್ಲೆ ಮಾಡಿಸಿದ್ದಾರೆ ಎಂದು ವೆಬ್‌ಸೈಟ್ ಕನ್ನಡ ಇ ನ್ಯೂಸ್ ವರದಿ ಮಾಡಿದೆ.

ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಇದನ್ನೂ ಓದಿ: ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...