Homeಕರ್ನಾಟಕತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಸುರೇಶ್‌ಗೌಡ ರಾಜೀನಾಮೆ

ತುಮಕೂರು: ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಆಪ್ತ ಸುರೇಶ್‌ಗೌಡ ರಾಜೀನಾಮೆ

- Advertisement -
- Advertisement -

ಕಳೆದ ಒಂದೂವರೆ ವರ್ಷದಿಂದ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಶಾಸಕ ಸುರೇಶ್‌ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುರೇಶ್‌ಗೌಡ ಅವರನ್ನು ಸ್ಥಾನದಿಂದ ಇಳಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರು, ಬೆಂಬಲಿಗರನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ ಎನ್ನಲಾಗಿದೆ.

ರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಶಾಸಕ ಸುರೇಶ್‌ಗೌಡ, ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗೆ ಇರಲು ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

“ಪಕ್ಷದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾನು ಇಂದು ರಾಜೀನಾಮೆ ನೀಡಿದ್ದು, ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಇದಕ್ಕೆಲ್ಲ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆರ್ಶೀವಾದ, ಕೊಟ್ಟ ಸಹಕಾರ, ಧೈರ್ಯವೇ ಕಾರಣ, ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

“ನಾನು ಎರಡು ಸಲ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಸಲ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷನಾಗಿ. ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು, ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣವಾಗಿತ್ತೇ ಹೊರತು ಬೇರೇನು ಅಲ್ಲ. ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ. ಕೋವಿಡ್ ನಿಂದ ಆರ್ಥಿಕ ಹಿಂಜರಿತ, ನೀರಾವರಿ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ಬವಣೆ, ಶಿಕ್ಷಣದ ಗುಣಮಟ್ಟದ ಕುಸಿತದಿಂದ ಕ್ಷೇತ್ರದ ಮಕ್ಕಳು ಅನುಭವಿಸುತ್ತಿರುವ ಯಾತನೆಯ ಹಿನ್ನೆಲೆಯಲ್ಲಿ ಅವರೊಂದಿಗೆ ಸದಾ ಸಮಯ ಇರಬೇಕೆಂದು ಮನಸ್ಸು ಹೇಳುತ್ತಿತ್ತು. ನನ್ನ ಕ್ಷೇತ್ರದ ಜನರೇ ನನಗೆ ಎಲ್ಲವೂ ಆಗಿರುವುದರಿಂದ ಅವರೊಂದಿಗೆ ಇರಲು ರಾಜೀನಾಮೆ ನಿರ್ಧಾರ ಮಾಡಿದೆ” ಎಂದು ತಮ್ಮ ರಾಜೀನಾಮೆಗೆ ಕಾರಣ ನೀಡಿದ್ದಾರೆ.

“ಜಿಲ್ಲಾ ಘಟಕದ ಅಧ್ಯಕ್ಷನಾಗಿದ್ದಾಗ ಜಿಲ್ಲೆಯ ಮೂಲೆಮೂಲೆಗಳಿಂದ ಎಲ್ಲಾ ಜಾತಿಗಳ, ಧರ್ಮಗಳ ಜನರು ನನಗೆ ತೋರಿಸಿದ ಪ್ರೀತಿ, ಕೊಟ್ಟ ಸಹಕಾರಕ್ಕೆ ಧನ್ಯವಾದವನ್ನು ಈ ಮೂಲಕ ಅರ್ಪಿಸುತ್ತಿದ್ದೇನೆ. ಇದೇ ರೀತಿಯ ಪ್ರೀತಿ, ಹಾರೈಕೆ, ಬೆಂಬಲ ಇನ್ನೂ ಮುಂದೆಯೂ ನೀಡುವಂತೆ ಈ ಮೂಲಕ ಕೇಳಿಕೊಳ್ಳುತ್ತೇನೆ” ಎಂದು ಸುರೇಶ್‌ಗೌಡ ಮನವಿ ಮಾಡಿದ್ದಾರೆ.

ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ಗೌಡ ರಾಜೀನಾಮೆ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಯಡಿಯೂರಪ್ಪ ಆಪ್ತರನ್ನು ನಿಯಂತ್ರಿಸಲು ಅವರ ಆಪ್ತರನ್ನು ಕೆಳಗಿಳಿಸಲಾಗುತ್ತಿದೆ ಎನ್ನುವ ಜೊತೆಗೆ ಸುರೇಶ್‌ಗೌಡ ಅವರು ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿದೆ.


ಇದನ್ನೂ ಓದಿ: ಬಿಜೆಪಿಯವರು ಹಿಂಬಾಗಿಲ ಮೂಲಕ ಮಾತ್ರ ಅಧಿಕಾರಕ್ಕೆ ಬರಬಲ್ಲರು- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...