Homeಕರ್ನಾಟಕತುಂಬಾಡಿ ರಾಮಯ್ಯ, ರಾಜೇಂದ್ರ ಚೆನ್ನಿ, ಎಚ್.ಎಲ್. ಪುಷ್ಪ, ರಹಮತ್ ತರೀಕೆರೆ, ಪ್ರಕಾಶ್ ರಾಜ್ ಸೇರಿದಂತೆ 70...

ತುಂಬಾಡಿ ರಾಮಯ್ಯ, ರಾಜೇಂದ್ರ ಚೆನ್ನಿ, ಎಚ್.ಎಲ್. ಪುಷ್ಪ, ರಹಮತ್ ತರೀಕೆರೆ, ಪ್ರಕಾಶ್ ರಾಜ್ ಸೇರಿದಂತೆ 70 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

- Advertisement -
- Advertisement -

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವಂತ ಗಣ್ಯರಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ. 70ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ 70 ಮಂದಿಗೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಈ ಪೈಕಿ‌ ಕೆಲವರು ಸ್ವಯಂ ಮನವಿ ನೀಡಿದ್ರು, ಅಂತಹವರು ಪ್ರಶಸ್ತಿಗೆ ಅರ್ಹರಿದ್ದ ಕಾರಣ‌‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದಿದೆ.

ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.‌ ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ‌‌ ಆಯ್ಕೆ ಮಾಡಲಾಗಿದ್ದು,‌ ನಾಲ್ಕೈದು‌ ಬಾರಿ‌ ಸಭೆ ನಡೆಸಿದ ಸದಸ್ಯರು ಅರ್ಹರನ್ನು ‌ಆಯ್ಕೆ ಮಾಡಲು ಸಹಕರಿಸಿದ್ದಕ್ಕೆ‌ ಧನ್ಯವಾದಗಳನ್ನು ಸಚಿವ ಶಿವರಾಜ ತಂಡರಗಿ ತಿಳಿಸಿದ್ದಾರೆ.

ಪ್ರಶಸ್ತಿ ನೀಡಿಕೆ‌ ಇತಿಹಾಸದಲ್ಲೇ ಮೊದಲ ಬಾರಿಗೆ ಸಮಗಾರ ಹರಳಯ್ಯ ಸಮುದಾಯಕ್ಕೆ ಸೇರಿದ ಇಬ್ಬರು ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೊದಲೇ ನಿರ್ಧರಿಸಿದಂತೆ‌ ಈ ಬಾರಿ‌ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. 12 ಮಂದಿ‌ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ‌‌ ಮಾಡಲಾಗಿದೆ ಎಂದಿದ್ದಾರೆ.

ಹೀಗಿದೆ 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಸಾಹಿತ್ಯ

ಪ್ರೊ. ರಾಜೇಂದ್ರ ಚೆನ್ನಿ, ಶಿವಮೊಗ್ಗ
ತುಂಬಾಡಿ ರಾಮಯ್ಯ, ತುಮಕೂರು
ಪ್ರೊ ಅರ್ ಸುನಂದಮ್ಮ, ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ, ತುಮಕೂರು
ರಹಮತ್ ತರೀಕೆರೆ, ಚಿಕ್ಕಮಗಳೂರು
ಹ.ಮ. ಪೂಜಾರ, ವಿಜಯಪುರ

ಜಾನಪದ

ಬಸಪ್ಪ ಭರಮಪ್ಪ ಚೌಡ್ಕಿ, ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು, ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ, ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ, ಚಿತ್ರದುರ್ಗ
ಎಂ. ತೋಪಣ್ಣ, ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ, ವಿಜಯಪುರ
ಸಿಂಧು ಗುಜರನ್, ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ, ಮೈಸೂರು

ಸಂಗೀತ

ದೇವೆಂದ್ರಕುಮಾರ ಪತ್ತಾರ್, ಕೊಪ್ಪಳ
ಮಡಿವಾಳಯ್ಯ ಸಾಲಿ, ಬೀದರ್

ನೃತ್ಯ

ಪ್ರೊ. ಕೆ. ರಾಮಮೂರ್ತಿ ರಾವ್, ಮೈಸೂರು

ಚಲನಚಿತ್ರ /ಕಿರುತೆರೆ

ಪ್ರಕಾಶ್ ರಾಜ್, ದಕ್ಷಿಣ ಕನ್ನಡ
ವಿಜಯಲಕ್ಷ್ಮೀ ಸಿಂಗ್, ಕೊಡಗು

ಆಡಳಿತ

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ), ಬೆಂಗಳೂರು ದಕ್ಷಿಣ (ರಾಮನಗರ)

ವೈದ್ಯಕೀಯ

ಡಾ. ಆಲಮ್ಮ ಮಾರಣ್ಣ, ತುಮಕೂರು
ಡಾ. ಜಯರಂಗನಾಥ್, ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

ಸೂಲಗಿತ್ತಿ ಈರಮ್ಮ, ವಿಜಯನಗರ
ಫಕ್ಕೀರಿ, ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ, ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ, ಉಡುಪಿ
ಕೋಣಂದೂರು ಲಿಂಗಪ್ಪ, ಶಿವಮೊಗ್ಗ

ಉಮೇಶ ಪಂಬದ, ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್, ಧಾರವಾಡ
ಕೆ.ದಿನೇಶ್, ಬೆಂಗಳೂರು
ಶಾಂತರಾಜು, ತುಮಕೂರು
ಜಾಫರ್ ಮೊಹಿಯುದ್ದೀನ್, ರಾಯಚೂರು
ಪೆನ್ನ ಓಬಳಯ್ಯ, ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ, ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ), ಬೆಳಗಾವಿ

ಹೊರನಾಡು/ ಹೊರದೇಶ

ಜಕರಿಯ ಬಜಪೆ (ಸೌದಿ), ಹೊರನಾಡು/ ಹೊರದೇಶ
ಪಿ ವಿ ಶೆಟ್ಟಿ (ಮುಂಬೈ), ಹೊರನಾಡು/ ಹೊರದೇಶ

ಪರಿಸರ

ರಾಮೇಗೌಡ, ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ, ಯಾದಗಿರಿ

ಕೃಷಿ

ಡಾ.ಎಸ್.ವಿ.ಹಿತ್ತಲಮನಿ, ಹಾವೇರಿ
ಎಂ ಸಿ ರಂಗಸ್ವಾಮಿ, ಹಾಸನ

ಮಾಧ್ಯಮ

ಕೆ.ಸುಬ್ರಮಣ್ಯ, ಬೆಂಗಳೂರು
ಅಂಶಿ ಪ್ರಸನ್ನಕುಮಾರ್, ಮೈಸೂರು
ಬಿ.ಎಂ ಹನೀಫ್, ದಕ್ಷಿಣ ಕನ್ನಡ
ಎಂ ಸಿದ್ಧರಾಜು, ಮಂಡ್ಯ

ವಿಜ್ಞಾನ ಮತ್ತು ತಂತ್ರಜ್ಞಾನ

ರಾಮಯ್ಯ, ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್, ದಾವಣಗೆರೆ
ಡಾ. ಆರ್. ವಿ ನಾಡಗೌಡ, ಗದಗ

ರಾಜ್ಯೋತ್ಸವ ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನು ಒಳಗೊಂಡಿದೆ. ನವೆಂಬರ್.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಗ್ಗೆ 8.30ಗಂಟೆಗೆ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...