Homeಕರ್ನಾಟಕತುಮಕೂರು: ಸಬ್ ಜೈಲಿನಲ್ಲಿ ಒಂದು ದಿನ ಕಳೆದ ಕೊರೊನಾ ಸೋಂಕಿತ?

ತುಮಕೂರು: ಸಬ್ ಜೈಲಿನಲ್ಲಿ ಒಂದು ದಿನ ಕಳೆದ ಕೊರೊನಾ ಸೋಂಕಿತ?

- Advertisement -
- Advertisement -

ತುಮಕೂರು ಹೊರವಲಯದ ಊರುಕೆರೆ ಸಮೀಪವಿರುವ ಸಬ್ ಜೈಲಿನಲ್ಲಿ ಕೊರೊನಾ ಸೊಂಕಿತ ವ್ಯಕ್ತಿಯನ್ನು ಒಂದು ದಿನದ ಮಟ್ಟಿಗೆ ಬಂಧನದಲ್ಲಿರಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿರುವುದು ಆತಂಕ ಉಂಟುಮಾಡಿದೆ. ಕೊರೊನಾ ಸೋಂಕು ಇರುವ ಆರೋಪಿಯನ್ನು ಸಬ್ ಜೈಲಿನಲ್ಲಿಟ್ಟು ಜುಲೈ 5ರಂದು ಬೆಳಗ್ಗೆ ಸ್ಥಳಾಂತರ ಮಾಡಲಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ವ್ಯಕ್ತಿಗೆ ಕೊರೊನಾ ಸೋಂಕು ಇರುವುದು ಗೊತ್ತಿದ್ದೂ ಪೊಲೀಸರು ಸಬ್ ಜೈಲಲ್ಲಿ ಇಟ್ಟಿರುವುದು ಚರ್ಚೆಗೆ ಕಾರಣವಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದ ಇತರೆ ಆರೋಪಿ – ಅಪರಾಧಿಗಳಿಗೂ ಸೋಂಕು ಹರಡುವ ಆತಂಕ ಎದುರಾಗಿದೆ ಎಂದು ಹೆಸರು ಹೇಳಲು ಇಚ್ಛಿಸಿದ ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ಉತ್ತಮ ವಾತಾವರಣ, ಪ್ರಶಾಂತ ಸ್ಥಳದಲ್ಲಿರುವ ಜೈಲಿನಲ್ಲಿ ನಿಗದಿಗಿಂತ ಹೆಚ್ಚು ಮಂದಿ ಆರೋಪಿ/ಅಪರಾಧಿಗಳನ್ನು ಬಂಧನದಲ್ಲಿರಿಸಲಾಗಿದೆ. ಕೊರೊನ ವಾರಿಯರ್‌ಗಳಲ್ಲೂ ಕೊರೊನಾ ಸೋಂಕು ಹರಡುತ್ತಿರುವ ನಡುವೆಯೇ ಸೋಂಕಿತ ವ್ಯಕ್ತಿಯನ್ನು ಸಬ್ ಜೈಲಲ್ಲಿ ಇಟ್ಟು ಅನಾಹುತವನ್ನು ಪೊಲೀಸರು ಮೇಲೆ ಎಳೆದುಕೊಂಡಂತೆ ಆಗಿದೆ.

ಈ ಹಿಂದೆ ಇದೇ ರೀತಿ ತುಮಕೂರು ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣಕ್ಕೆ ಕೊರೊನಾ ಸೋಂಕಿತನೊಬ್ಬ ಬಂದು ಹೋದ ಶಂಕೆಯ ಹಿನ್ನೆಲೆಯಲ್ಲಿ ಇಡೀ ಕಚೇರಿಯನ್ನು ಸ್ಯಾನಿಟೈಜ್ ಮಾಡಲಾಗಿತ್ತು ಸ್ವತಃ ಸಿಇಓ ಮುಂದೆ ನಿಂತು ಸ್ಯಾನಿಟೈಜ್ ಮಾಡಿಸಿದ್ದರು.

ಆದರೆ ಕೊರೊನಾ ಸೋಂಕಿತ ವ್ಯಕ್ತಿಯನ್ನು ಒಂದು ದಿನದ ಮಟ್ಟಿಗೆ ಸಬ್ ಜೈಲಿನಲ್ಲಿ ಬಂಧನದಲ್ಲಿಟ್ಟಿದ್ದರೂ ಜೈಲನ್ನು ಸ್ಯಾನಿಟೈಜ್ ಮಾಡುವ ಗೋಜಿಗೆ ಹೋಗಿಲ್ಲ. ಸಬ್ ಜೈಲಲ್ಲಿ ಮೂರು ಪ್ಲಾಟ್ ಗಳಿದ್ದು ಕೊರೊನ ಸೋಂಕಿತ ವ್ಯಕ್ತಿ ಯಾವ ಬ್ಲಾಕ್ ನಲ್ಲಿದ್ದನೋ ಆ ಬ್ಲಾಕ್ ನ ಇತರ ಆರೋಪಿ/ಅಪರಾಧಿಗಳಿಗೂ ಸೋಂಕು ಹರಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಬ್ ಜೈಲಿನಲ್ಲಿ ಒಂದೊಂದು ಬ್ಲಾಕ್ ನಲ್ಲಿ 200 ಮಂದಿಯಂತೆ ಒಟ್ಟು 600 ಮಂದಿ ಆರೋಪಿಗಳು ಇರಬಹುದು. ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾಗಿರುವ ಅಪರಾಧಿಗಳು ಈ ಸಬ್ ಜೈಲಲ್ಲಿ ಇದ್ದು ಸೋಂಕು ಹರಡುವ ಆತಂಕದಲ್ಲಿದ್ದಾರೆ.

ಇನ್ನು ಕುಣಿಗಲ್ ವಿಧಾನಭಾ ಕ್ಷೇತ್ರದ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.  ಜುಲೈ 5 ವರದಿ ಬಂದಿದ್ದು ಸೋಂಕು ಇರುವುದು ಪತ್ತೆಯಾಗಿದೆ.
ಶಾಸಕ ಡಾ.ರಂಗನಾಥ್ ಜುಲೈ 4ರಂದು ಅಧಿಕಾರಿಗಳ ಸಭೆ ನಡೆಸಿದ್ದರು. ನಿನ್ನೆ ವರದಿ ಬಂದಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ಭಾಗವಹಿಸಿದ್ದವರು ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಶಾಸಕರು ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಶಾಸಕರ ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಾಸ್ಕ್ ಧರಿಸದಿದ್ದರೆ 10,000 ದಂಡ: ಒಂದು ವರ್ಷದವರೆಗೆ ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಿದ ಕೇರಳ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...