Homeಕರ್ನಾಟಕತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

ತುಮಕೂರು ದಲಿತನ ಕೊಲೆ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ ಭೂಮಿ, ಪರಿಹಾರ ನೀಡಲು ಹೋರಾಟಗಾರರ ಒತ್ತಾಯ

- Advertisement -
- Advertisement -

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪೋಲೇನಹಳ್ಳಿಯಲ್ಲಿ ಇತ್ತೀಚೆಗೆ ಹತ್ಯೆಗೀಡಾದ ದಲಿತ ವ್ಯಕ್ತಿ ಆನಂದ ಅವರ ಕುಟುಂಬಕ್ಕೆ ಸರ್ಕಾರ ಐದು ಎಕರೆ ಜಮೀನು ಮಂಜೂರು ಮಾಡಬೇಕು ಮತ್ತು 25 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಒಳ ಮೀಸಲಾತಿ ಹೋರಾಟದ ಒಕ್ಕೂಟಗಳ ಸಮಿತಿಯ ರಾಜ್ಯ ಮುಖಂಡ ಬಸವರಾಜ ಕೌತಾಳ್ ಒತ್ತಾಯಿಸಿದರು.

ಆನಂದ ಅವರ ಕುಟುಂಬಸ್ಥರ ಮನೆಗೆ ವಿವಿಧ ದಲಿತ, ಪ್ರಗತಿಪರ ಹೋರಾಟಗಾರರು ಸೋಮವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಘಟನೆಯ ನೈಜತೆಯ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಪಡೆದು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೌತಾಳ್, “ಕೊಲೆಯಾಗಿರುವ ಆನಂದ ಅವರ ಹೆಂಡತಿಗೆ ಸರ್ಕಾರ ಉದ್ಯೋಗ ನೀಡಬೇಕು ಮತ್ತು ಅವರ ಮಗುವಿನ ಶಿಕ್ಷಣದ ವೆಚ್ಚವನ್ನು ಭರಿಸಬೇಕು” ಎಂದು ಆಗ್ರಹಿಸಿದರು.

ಆರೋಪಿ ನಾಗೇಶ ಅವರ ತಂದೆ-ತಾಯಿಯನ್ನೂ ಆರೋಪಿಗಳನ್ನಾಗಿಸಿ ಬಂಧಿಸಬೇಕು. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್, ಶಾಸಕ ಕೆ.ಎನ್ ರಾಜಣ್ಣ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.

ಪ್ರಗತಿಪರ ಚಿಂತಕ ಪ್ರೊ. ನರಸಿಂಹಪ್ಪ ಕಾಳೇನಹಳ್ಳಿ ಮಾತನಾಡಿ, “ಸೌಹಾರ್ದಯುತವಾಗಿ ಬಾಳಿ ಬದುಕಬೇಕಾದ ಎಸ್‌ಸಿ- ಎಸ್ಟಿ ಸಮುದಾಯಗಳು, ಈ ರೀತಿ ಸಣ್ಣ ವಿಷಯಕ್ಕೆ ಜಗಳವಾಡಿ ಕೊಲೆಯಲ್ಲಿ ಅಂತ್ಯವಾಗಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ದಲಿತರಾಗಿದ್ದು, ರಾಜಕೀಯ ಜನ್ಮ ನೀಡಿದ ಮಧುಗಿರಿ ತಾಲೂಕಿನಲ್ಲಿ ಆಗಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಶೋಷಿತರ ಪರ ನಿಲ್ಲಬೇಕಾಗಿದೆ. ಅವರು ಇದುವರೆಗೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ಇರುವುದು ದಲಿತರ ಮೇಲೆ ಇರುವ ಕಾಳಜಿ ಎಂತದ್ದು ಎಂಬುವುದನ್ನು ತಿಳಿಸುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಮತ್ತು ಶಾಸಕ ಕೆ.ಎನ್ ರಾಜಣ್ಣ ಕೂಡ ಸ್ಥಳಕ್ಕೆ ಆಗಮಿಸಿ ನೊಂದ ಕುಟುಂಬಕ್ಕೆ ನೆರವು ಒದಗಿಸಲು ಮುಂದಾಗಬೇಕೆಂದು ಮನವಿ ಮಾಡಿದರು.

ದಲಿತ ಮುಖಂಡ ಡಿ.ಟಿ ವೆಂಕಟೇಶ್ ಮಾತನಾಡಿ, “ಕೊಲೆಯಾದ ಆನಂದ ಅವರ ಕುಟುಂಬಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು. ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕು. ಆನಂದ ಅವರ ಕುಟುಂಬಕ್ಕೆ ಅಗತ್ಯ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ಹಿರಿಯ ಹೋರಾಟಗಾರ ಪ್ರೊ. ದೊರೆರಾಜು ಮಾತನಾಡಿ, “ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಗ್ರಾಮದಲ್ಲಿ ಜನತೆ ಧೈರ್ಯದಿಂದ ಬದುಕುವ ವಾತಾವರಣ ನಿರ್ಮಾಣ ಮಾಡಬೇಕಾಗಿದೆ” ಎಂದು ಹೇಳಿದರು.

ರೇಷ್ಮೆ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಬಾಲಕೃಷ್ಣಪ್ಪ, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರವಿಕುಮಾರ್ ನೀಹ, ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹರಾಜು, ಜಾಗೃತ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ತೊಂಡೋಟಿ ರಾಮಾಂಜಿನಪ್ಪ, ವಕೀಲ ನರಸಿಂಹಮೂರ್ತಿ, ಜೀವಿಕ ಮಂಜು, ಚಿಕ್ಕಮ್ಮ, ನಿವೃತ್ತ ಪ್ರಾಂಶುಪಾಲ ಮುನೀಂದ್ರ ಕುಮಾರ್, ಉಪನ್ಯಾಸಕ ರಾಮಚಂದ್ರಪ್ಪ, ನವೀನ್ ಪೂಜಾರಹಳ್ಳಿ, ನರಸಿಯಪ್ಪ,ನರಸಿಂಹಣ್ಣ, ವಿ.ಎಲ್ ನರಸಿಂಹಮೂರ್ತಿ, ನಾಗಭೂಷಣ್ ಬಗ್ಗನಾಡು, ವಕೀಲ ಕಿಶೋರ್, ಅಶ್ವಿನಿ ಬೋದ್ , ಪೂರ್ಣ ರವಿಶಂಕರ್, ಶಶಾಂಕ್, ವೇಣುಗೋಪಾಲ ಮೌರ್ಯ, ಮಂಜು ಪಿಟಿಸಿಎಲ್, ಮಂಜನಾಥ್, ಮನೋಜ್, ಅಶ್ವಥ್ ನಾರಾಯಣ ಗುಟ್ಟೆ, ಹಾಗೂ ಎಸ್‌ಸಿ, ಎಸ್ಟಿ ಸಮುದಾಯಗಳ ಹೋರಾಟಗಾರರು ಆನಂದ ಅವರ ಮನೆಗೆ ಭೇಟಿ ನೀಡಿದ ತಂಡದಲ್ಲಿದ್ದರು.

ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...