Homeಕರ್ನಾಟಕತುಮಕೂರು | 2010ರಲ್ಲಿ ನಡೆದ ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು | 2010ರಲ್ಲಿ ನಡೆದ ದಲಿತ ಮಹಿಳೆಯ ಹತ್ಯೆ ಪ್ರಕರಣ; 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ದಲಿತ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 13,000 ದಂಡ ವಿಧಿಸಿ ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಬುಧವಾರ 21 ಮಂದಿ ಆರೋಪಿಗಳನ್ನು ಅಪರಾಧಿಗಳು ಎಂದು ಘೋಷಿಸಿದ್ದ ಕೋರ್ಟ್‌ ಇದೀಗ ಶಿಕ್ಷೆಯನ್ನು ಪ್ರಕಟಿಸಿದೆ. ಮರಕುಂಬಿ ದಲಿತ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ ಘೋಷಣೆಯಾಗಿ ದೇಶದ ಗಮನಸೆಳೆದಿದ್ದ ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಯಾಗಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು. ಸುದೀರ್ಘ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದಿದ್ದು, ಬುಧವಾರ ವಿಚಾರಣೆ ಮುಗಿದಿದೆ. ಪ್ರಕರಣದ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದಾರೆ. ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯನ್ನು ಪ್ರಟಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2010ರಲ್ಲಿ ನಡೆದಿದ್ದೇನು?

ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.

ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.

ಈ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ- ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ, ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಎಂದು ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಹನುಮಂತಯ್ಯ (ಪರಿಶಿಷ್ಟ ಜಾತಿ), ವೆಂಕಟೇಶ್‌, ರಾಮಯ್ಯ, ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ.

ಇತ್ತೀಚೆಗೆ, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ 2014ರಲ್ಲಿ ನಡೆದಿದ್ದ ದಲಿತ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿಯನ್ನು ಕೊಪ್ಪಳ ಜಿಲ್ಲಾ ನ್ಯಾಯಾಲಯವು ಅಪರಾಧಿಗಳು ಎಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ, ಕೊಪ್ಪಳ ಕೋರ್ಟ್‌ ತೀರ್ಪಿಗೆ ಹೈಕೋರ್ಟ್‌ ತಡೆ ನೀಡಿತ್ತು. ಇದೀಗ, ತುಮಕೂರು ಜಿಲ್ಲಾ ನ್ಯಾಯಾಲಯವು 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: 500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...