Homeಆರೋಗ್ಯಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು..

ಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು..

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಶಿರಾ ಮೂಲದ ವ್ಯಕ್ತಿಯೊಬ್ಬ (60) ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ. ಈತ ಮಾರ್ಚ್ 23 ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ. ಇಂದು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನ ವೈರಸ್‌ನ ಮೊದಲ ಸಾವು ಇದಾಗಿದೆ.

ಈ ವ್ಯಕ್ತಿಯ ಸಂಪರ್ಕದಲ್ಲಿದ್ದ ಎಲ್ಲ 20 ಮಂದಿಯ ಮೇಲೆ ನಿಗಾ ಇರಿಸಿದ್ದು, ಅವರನ್ನು ಗೃಹಬಂಧನದಲ್ಲಿ ಇಡಲಾಗಿದೆ. ಈ ಮಧ್ಯೆ 33 ಮಂದಿಯ ರಕ್ತ ಮತ್ತು ಕಫಾ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.

ಆತ ಮಾರ್ಚ್‌ 11ರಂದು ದೆಹಲಿಯಿಂದ ತುಮಕೂರಿಗೆ ಪ್ರಯಾಣ ಬೆಳೆಸಿದ್ದ ಎನ್ನಲಾಗಿದ್ದು ಅಲ್ಲಿಂದ ಸೋಂಕು ಹರಡಿರುವ ಸಾಧ್ಯತೆಯಿವೆ ಎನ್ನಲಾಗಿದೆ.

ತುಮಕೂರಿನಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ರಾಕೇಶ್ ಕುಮಾರ್ ಜಿಲ್ಲೆಯಲ್ಲಿ ಕೊರೊನ ವೈರಸ್ ಗೆ ಒಬ್ಬ ಮೃತಪಟ್ಟಿದ್ದಾನೆ ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಶಂಕಿತ ಹತ್ತು ಮಂದಿಯನ್ನು ಪ್ರತ್ಯೇಕ ಕೊಠಡಿಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು..

ಕೊರೊನ ವೈರಸ್‌ಗೆ ತುಮಕೂರು ಜಿಲ್ಲೆಯಲ್ಲಿ ಮೊದಲ ಸಾವು.. ಜಿಲ್ಲಾಧಿಕಾರಿ ಸ್ಪಷ್ಟನೆ

Posted by Naanu Gauri on Friday, March 27, 2020

ಇದೇ ವೇಳೆ ತುಮಕೂರು ನಗರದ 450 ಜನರ ಮೇಲೆ ನಿಗಾ ವಹಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಎಲ್ಲಾ 35 ವಾರ್ಡ್ ಗಳಲ್ಲೂ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...