Homeಕರ್ನಾಟಕತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ...

ತುಮಕೂರು ಜಿಲ್ಲಾ ಆಸ್ಪತ್ರೆ ನಿರ್ಲಕ್ಷ್ಯ; ಅವಳಿ ಮಕ್ಕಳು ಸೇರಿ ಗರ್ಭಿಣಿ ಸಾವು- ಆರೋಗ್ಯ ಸಚಿವರ ರಾಜೀನಾಮೆಗೆ ಆಗ್ರಹ

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

- Advertisement -
- Advertisement -

ಆಧಾರ್‌ ಕಾರ್ಡ್, ತಾಯಿ ಕಾರ್ಡ್ ಇಲ್ಲವೆಂಬ ನೆಪವೊಡ್ಡಿ ಇಬ್ಬರು ಅವಳಿ ಮಕ್ಕಳು ಹಾಗೂ ತಾಯಿ ಸಾವಿಗೆ ತುಮಕೂರು ಜಿಲ್ಲಾ ಆಸ್ಪತ್ರೆ ಕಾರಣವಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಅಮಾನವೀಯ ಧೋರಣೆಯಿಂದಾಗಿ ಮೂರು ಜೀವಗಳು ಕೊನೆಯುಸಿರೆಳೆದಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಯು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ತುರ್ತಾಗಿ ಚಿಕಿತ್ಸೆ ಸಿಗದೆ ಅವಳಿ ಮಕ್ಕಳೂ ಕೊನೆಯುಸಿರೆಳೆದಿವೆ.

ಮೃತ ಮಹಿಳೆಗೆ ಆರು ವರ್ಷದ ಮಗಳಿದ್ದಾಳೆ. ಭಾರತಿನಗರದಲ್ಲಿ ವಾಸವಿದ್ದ ಕಸ್ತೂರಿ (30) ಅವರಿಗೆ ಬುಧವಾರ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಒಬ್ಬಂಟಿಯಾಗಿದ್ದ ಅವರನ್ನು ನೆರೆಹೊರೆಯ ಮಹಿಳೆಯರು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಕಸ್ತೂರಿಯವರ ಬಳಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಇಲ್ಲ ಎಂಬ ನೆಪವೊಡ್ಡಿದ ಜಿಲ್ಲಾಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅನಾಥ ಮಹಿಳೆಯ ನೆರೆಹೊರೆಯವರು ಎಷ್ಟೇ ಬೇಡಿಕೊಂಡರೂ ಚಿಕಿತ್ಸೆಗೆ ಒಪ್ಪಲೇ ಇಲ್ಲ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಹೇಳಿ ಆಸ್ಪತ್ರೆಯಿಂದ ಹೊರಗೆ ಕಳುಹಿಸಿದ್ದರು. ಬೆಂಗಳೂರಿಗೆ ಆಂಬುಲೆನ್ಸ್‌ನಲ್ಲಿ ತೆರಳಲು ಹಣ ಹೊಂದಿಸಲಾಗದ ಕಾರಣ ರಾತ್ರಿ ಮನೆಗೆ ವಾಪಸ್ಸಾಗಿದ್ದರು. ಗುರುವಾರ ಬೆಳಗಿನ ಜಾವ ಮತ್ತೆ ಹೆರಿಗೆ ನೋವು ಕಾಣಿಸಿಕೊಂಡು, ಮನೆಯಲ್ಲಿಯೇ ಹೆರಿಗೆಯಾಗಿದೆ. ಮೊದಲ ಗಂಡು ಮಗು ಜನಿಸುವ ಹೊತ್ತಿಗೆ ತೀವ್ರ ರಕ್ತ ಸ್ರಾವವಾಗಿದ್ದು, ಆ ವೇಳೆಗೆ ಮಗುವೂ ಸಾವನ್ನಪ್ಪಿದೆ. ಮತ್ತೊಂದು ಗಂಡು ಮಗು ಜನಿಸುವ ಮುನ್ನವೇ ಮಹಿಳೆಯೂ ಮೃತಪಟ್ಟಿದ್ದಾರೆ.

ಮೂಲತಃ ತಮಿಳುನಾಡಿನವರಾದ ಕಸ್ತೂರಿ ಮತ್ತು ಆಕೆಯ ಗಂಡ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಾಲ್ಕು ತಿಂಗಳ ಹಿಂದೆ ಕಸ್ತೂರಿಯವರ ಗಂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತದಲ್ಲಿ ತನ್ನ ಆರು ವರ್ಷದ ಮಗುವಿನೊಂದಿಗೆ ಕಸ್ತೂರಿಯವರು ತುಮಕೂರಿಗೆ ವಲಸೆ ಬಂದು ನೆಲೆಸಿದ್ದರು. ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಭಾರತೀನಗರದಲ್ಲಿ ಸರೋಜಮ್ಮ ಎಂಬುವರು ನೀಡಿದ್ದ ಒಂದು ಸಣ್ಣ ಮನೆಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

ಜಿಲ್ಲಾ ಆಸ್ಪತ್ರೆಯ ವರ್ತನೆಗೆ ಬೇಸತ್ತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎನ್.ಮಂಜುನಾಥ್, ಜಿಲ್ಲಾ ಸರ್ಜನ್ ಡಾ.ವೀಣಾ ಅವರು ಜನರಿಂದ ಮಾಹಿತಿ ಪಡೆದರು.

‘ತುಂಬು ಗರ್ಭಿಣಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡದೆ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ. ಕರ್ತವ್ಯ ಲೋಪ ಎದ್ದು ಕಾಣುತ್ತದೆ. ವೈದ್ಯೆ ಮತ್ತು ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕರ್ತವ್ಯ ಲೋಪ ಆರೋಪದ ಮೇಲೆ ಡಾ.ಉಷಾ ಅವರನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ಕರ್ತವ್ಯದ ಮೇಲಿದ್ದ ನರ್ಸ್‌ಗಳಾದ ಯಶೋದ, ಸವಿತಾ, ವಿದ್ಯಾಭಾರತಿ ಅವರನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಸರ್ಜನ್ ಡಾ.ವೀಣಾ ಆದೇಶಿಸಿದ್ದಾರೆ. ಡಾ.ವೀಣಾ ಅವರಿಗೆ ಕಾರಣ ಕೇಳಿ ಡಿಎಚ್‌ಒ ಡಾ.ಬಿ.ಎನ್.ಮಂಜುನಾಥ್ ನೋಟಿಸ್ ನೀಡಿದ್ದಾರೆ.

ಸುಧಾಕರ್‌ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ತುಮಕೂರು ಜಿಲ್ಲೆಯ ವೈದ್ಯರ ನಿರ್ಲಕ್ಷದಿಂದಾಗಿ ನಡೆದ ಬಾಣಂತಿ ಮತ್ತು ಎರಡು ಹಸುಗೂಸುಗಳ ಸಾವಿಗೆ ಕಾರಣಕರ್ತರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಕ್ಷಣ ರಾಜೀನಾಮೆ ನೀಡಬೇಕು. ಆರೋಪಿ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಇಡೀ ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

“ಕೊರೊನಾ ಕಾಲದಿಂದ ಆರೋಗ್ಯ ಇಲಾಖೆಯ ಬೇಜವಾಬ್ದಾರಿ ನಡವಳಿಕೆಗಳಿಂದಾಗಿ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಡಾ.ಸುಧಾಕರ್ ಅವರೇ ಆರೋಗ್ಯ ಸಚಿವರಾಗಿ ಮುಂದುವರಿದರೆ ಸರಣಿ ವೈದ್ಯಕೀಯ ಹತ್ಯೆಗಳು ಮುಂದುವರಿಯುವ ಸಾಧ್ಯತೆಗಳಿವೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ನೇಮಕಾತಿಯಿಂದ ಹಿಡಿದು ವರ್ಗಾವಣೆ ವರೆಗೆ ಎಲ್ಲವೂ ದುಡ್ಡಿನ ಬಲದಿಂದಲೇ ನಡೆಯುತ್ತಿರುವ ಕಾರಣ ಯಾವ ಅಧಿಕಾರಿಯೂ ಯಾವ ಸಚಿವರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಕರ್ತವ್ಯಭ್ರಷ್ಟ ಅಧಿಕಾರಿಗಳನ್ನು ಪ್ರಶ್ನಿಸುವ-ಶಿಕ್ಷಿಸುವ ನೈತಿಕತೆ ಭ್ರಷ್ಟ ಸಚಿವರಿಗೂ ಇಲ್ಲದಂತಾಗಿದೆ” ಎಂದು ಟೀಕಿಸಿದ್ದಾರೆ.

“ಗುಂಡಿಬಿದ್ದ ರಸ್ತೆಗಳಲ್ಲಿ ಜನ ಬಿದ್ದು ಸಾಯುತ್ತಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದವರೂ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 40% ಕಮಿಷನ್ ನೀಡಲಿಕ್ಕಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ಜನರನ್ನು ಸಾಯಿಸುವ ಸರ್ಕಾರವೇ ಹೊರತು ಬದುಕಿಸುವ ಸರ್ಕಾರ ಅಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದು ಸರ್ಕಾರಿ ಕೊಲೆ: ಕುಮಾರಸ್ವಾಮಿ

ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, “ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ. ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು” ಎಂದಿದ್ದಾರೆ.

“ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ” ಎಂದಿದ್ದಾರೆ.

ಇದನ್ನೂ ಓದಿರಿ: ತುಮಕೂರು: ಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?

ಆರೋಪ ಸಾಬೀತಾದರೆ ವೈದ್ಯರ ವಜಾಕ್ಕೆ ಕ್ರಮ: ಸುಧಾಕರ್‌

ತುಮಕೂರಿನ ಘಟನೆ  ಸಂಬಂಧ ಪ್ರಕ್ರಿಯಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, “ದುರ್ದೈವವಶಾತ್ ನಡೆದಿರುವ ಈ ಘಟನೆ ನನಗೆ ಅತೀವ ನೋವು ತಂದಿದ್ದು ನನ್ನಲ್ಲಿ ದಿಗ್ಭ್ರಮೆ ಮೂಡಿಸಿದೆ. ಮೇಲ್ನೋಟಕ್ಕೆ ಹೆರಿಗೆ ವಾರ್ಡ್‌ನ ಮೂವರು ದಾದಿಯರು ಹಾಗೂ ಕರ್ತವ್ಯ ನಿರತ ವೈದ್ಯರ ಕರ್ತವ್ಯಲೋಪ ಕಂಡುಬಂದಿದ್ದು, ತನಿಖೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಲ್ವರನ್ನೂ ಅಮಾನತು ಮಾಡಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು, ಸಂಕಟವನ್ನು ನಿವಾರಿಸುವುದು ವೈದ್ಯರ, ಶುಶ್ರೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿದೆ ಹಾಗೂ ತುರ್ತು ಪರಿಸ್ಥಿತಿಯಲ್ಲಿ ರೋಗಿಯ ಯಾವುದೇ ದಾಖಲಾತಿಗಳನ್ನು ನೀಡಲು ಒತ್ತಾಯಿಸಬಾರದು ಎಂದು ಈಗಾಗಲೇ ಸರ್ಕಾರದ ಆದೇಶವಿದ್ದು, ಮತ್ತೊಮ್ಮೆ ಆದೇಶವನ್ನು ಪ್ರಕಟಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಈ ಘಟನೆಯನ್ನು ನಮ್ಮ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆಯ ಕುರಿತು ತನಿಖೆ ನಡೆಸಲು ಆರೋಗ್ಯ ಇಲಾಖೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಇನ್ನೆರಡು ವಾರಗಳಲ್ಲಿ ವರದಿ ನೀಡುವಂತೆ ಆದೇಶಿಸಲಾಗಿದೆ. ತನಿಖೆಯ ವರದಿಯಲ್ಲಿ ಆರೋಪ ಸಾಬೀತಾದರೆ ಅಮಾನತುಗೊಂಡಿರುವ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ಮುನ್ನಚ್ಚರಿಕೆ‌ ತೆಗೆದುಕೊಳ್ಳುವಂತೆ ಎಲ್ಲಾ ಆರೋಗ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...