Homeಕರ್ನಾಟಕತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

ತುಮಕೂರು: ಕುಡಿಯುವ ನೀರಿನ ಸಂಪರ್ಕ ವಿಚಾರಕ್ಕೆ ಜಗಳ; ದಲಿತ ವ್ಯಕ್ತಿಯ ಭೀಕರ ಕೊಲೆ

- Advertisement -
- Advertisement -

ಕುಡಿಯುವ ನೀರಿನ ಸಂಪರ್ಕ ವಿಚಾರವಾಗಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಜಗಳವು ವಿಕೋಪಕ್ಕೆ ತಲುಪಿದ್ದು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಬಿಲ್ ಕಲೆಕ್ಟರ್ ಸೇರಿ ದಲಿತ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾ ಎಂಬ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲೆಯ ಮುಧುಗಿರಿ ತಾಲೂಕಿನ ಪೋಲೆನಹಳ್ಳಿಯಲ್ಲಿ ಈ ಭೀಕರ ಘಟನೆ ನಡೆದಿದೆ. ನೀರು ಕೇಳಿದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ರಾಮಾಂಜಿನಪ್ಪ ಎಂಬುವವರ ಪುತ್ರ ಆನಂದ್ ಎಂಬುವವರನ್ನು ಘನಘೋರವಾಗಿ ಕೊಲೆ ಮಾಡಲಾಗಿದೆ.

ಪೋಲೆನಹಳ್ಳಿ ಗ್ರಾಮದ ನಿವಾಸಿಯಾದ ಆನಂದ್ ಅವರ ಮನೆಯ ಬಳಿ ಅಳವಡಿಸಿದ್ದ ನಲ್ಲಿಯಲ್ಲಿ ನೀರು ಬರುತ್ತಿಲ್ಲ, ಇದೇ ವಿಚಾರವಾಗಿ ಅವರು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ರಾಮಕೃಷ್ಣಯ್ಯ ಹಾಗೂ ಅವರ ಮಗ ಗ್ರಾಮ ಪಂಚಾಯತಿ ಸದಸ್ಯ ನಾಗೇಶ್ ಅವರನ್ನ ಅವರ ಮನೆಯ ಬಳಿ ಹೋಗಿ ಏರು ಧ್ವನಿಯಲ್ಲಿ ಪ್ರಶ್ನೆ ಮಾಡಿದ್ದರು. ಇದರಿಂದ ಸಿಟ್ಟಾದ ಇಬ್ಬರೂ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕುಡಿಯುವ ನೀರಿನ ವಿಚಾರವಾಗಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಮಕೃಷ್ಣಪ್ಪ ಹಾಗೂ ಮಗ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ, ನಾಗಮಣಿ ಇತರರು ಸೇರಿ ಮಚ್ಚು ದೊಣ್ಣೆ ಗಳಿಂದ ಹಲ್ಲೆ ಮಾಡಿ, ಜೈ ಶ್ರೀರಾಮ್ ಎಂದು ಹೆಸರು ಇರುವ ಜೀಪ್‌ನಿಂದ ಗುದ್ದಿಸಿ ಕೊಲೆ ಮಾಡಿದ್ದು, ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೃಹ ಸಚಿವರ ತವರು ಜಿಲ್ಲೆ; ದಲಿತ ಶಾಸಕ ಪ್ರತಿನಿಧಿಸುವ ಕ್ಷೇತ್ರ

ದಲಿತ ಯುವಕನ ಕೊಲೆ ಮಾಡಿರುವ ಗ್ರಾಮವು ಗೃಹ ಸಚಿವ ಜಿ.ಪರಮೇಶ್ವರ ಅವರ ತವರು ಜಿಲ್ಲೆ ತುಮಕೂರಿಗೆ ಸೇರಿದೆ. ದಲಿತ (ಪರಿಶಿಷ್ಟ ಪಂಗಡ) ಶಾಸಕ ಕೆ.ಎನ್.ರಾಜಣ್ಣ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ದಲಿತರೇ ಬಹುಸಂಖ್ಯಾತರಾಗಿರುವ ಮತಕ್ಷೇತ್ರಗಳಲ್ಲಿ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಘಟನೆ ಬಗ್ಗೆ ಜನರು ಆಕ್ರೋಶ ಹೊರಹಾಕಿದ್ದಾರೆ.

ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಹೆಸರನ್ನು ದುರುಪಯೋಗ ಮಾಡಿಕೊಂಡು, ಅವರದ್ದೇ ಸಮುದಾಯದ ಕೆಲವು ಜಾತಿವಾದಿಗಳು ಅಸ್ಪೃಶ್ಯ ಸಮುದಾಯವಾದ ಆದಿ ಕರ್ನಾಟಕ (ಎಸ್‌ಸಿ) ಸಮುದಾಯದ ಮೇಲೆ ಗುಂಡಾವರ್ತನೆ ತೋರುತ್ತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ.

ಕೊಡಿಗೇನಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ನಾಗೇಶ್ ಎಂಬಾತನನ್ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಶಾಸಕರಾದ ಕೆ.ಎನ್. ರಾಜಣ್ಣನವರು ಘಟನೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶ: ಕಾರಿಗೆ ಬೈಕ್‌ ತಾಕಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...