Homeಕರ್ನಾಟಕತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

- Advertisement -
- Advertisement -

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆಯಾದ ತುಮಕೂರು ನಗರದ ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲಿ ನಾಲ್ವರು ದಲಿತ ಕಾರ್ಮಿಕರನ್ನು ಬರಿಗೈ ಹಾಗೂ ಬರಿಮೈಯಲ್ಲೇ ಶೌಚಗುಂಡಿಯ ಮಲವನ್ನು ಬಾಚಿಸಿ ಟ್ರಾಕ್ಟರ್‌ಗೆ ತುಂಬಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನ ನಂದೀಶ್, ಅರುಣ್, ಮಧುಗಿರಿ ಮೂಲದ ಮೂರ್ತಿ ನಾಯ್ಕ ಹಾಗೂ ನವೀನ್ ಎಂಬ ಕಾರ್ಮಿಕರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಶೌಚಗುಂಡಿಯಲ್ಲಿದ್ದ ಮಲವನ್ನು ಕೈಯಿಂದಲೇ ಹೊರತೆಗೆದು ಸಾಗಿಸುವ ಕೆಲಸ ಮಾಡುತ್ತಿರುವುದಾಗಿ ತಿಳಿದು ಬಂದಿದೆ.

ಕಾರ್ಮಿಕರ ಪ್ರಕಾರ, ಆರಂಭದಲ್ಲಿ ಮಣ್ಣು ತುಂಬುವ ಕೆಲಸವಿದೆ ಎಂದು ಕರೆತಂದಿದ್ದು, ಸ್ಥಳಕ್ಕೆ ಬಂದ ನಂತರ ಅದು ಶೌಚಗುಂಡಿ ಎಂಬುದು ತಿಳಿಯಿತು. ಹೊಟ್ಟೆಪಾಡಿನ ಕಾರಣದಿಂದ ಕೆಲಸ ಒಪ್ಪಿಕೊಳ್ಳಬೇಕಾಯಿತು. ಇಂತಹ ಕೆಲಸ ಮಾಡಿಸುವುದು ಕಾನೂನುಬಾಹಿರ ಎಂಬ ಮಾಹಿತಿ ನಮಗೆ ಇರಲಿಲ್ಲ. ಇನ್ನು ಮುಂದೆ ಇಂತಹ ಕೆಲಸಕ್ಕೆ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿ ಮಲಹೊರುವ ಪದ್ಧತಿಯನ್ನು ನಿಷೇಧಿಸಿ ಕಠಿಣ ಕಾನೂನು ಜಾರಿಯಲ್ಲಿದ್ದರೂ, ತುಮಕೂರಿನ ಮಧ್ಯಭಾಗದಲ್ಲಿಯೇ ಈ ಅಮಾನವೀಯ ಪದ್ಧತಿ ಮುಂದುವರಿದಿರುವುದು ಆತಂಕ ಮೂಡಿಸಿದೆ. ವಿಶೇಷವಾಗಿ ಈ ಕಾರ್ಯವನ್ನು ಕೆಇಬಿ ಇಂಜಿನಿಯರ್ಸ್ ಸಂಘದ ವತಿಯಿಂದ ಮಾಡಿಸಿರುವ ಆರೋಪ ಕೇಳಿಬಂದಿರುವುದು ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ನೀಡಿದೆ.

ಇದಕ್ಕೂ ಮುನ್ನ ಕೊರಟಗೆರೆ ಬಸ್ ನಿಲ್ದಾಣದಲ್ಲಿ ದಲಿತ ಬಾಲ ಕಾರ್ಮಿಕನಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಘಟನೆ ವರದಿಯಾಗಿತ್ತು. ಇದೀಗ ತುಮಕೂರು ನಗರದಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿರುವುದು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯವನ್ನು ಪ್ರಶ್ನಿಸುವಂತಾಗಿದೆ.

ಘಟನೆಯ ಮಾಹಿತಿ ದೊರೆತರೂ ಸ್ಥಳಕ್ಕೆ ಭೇಟಿ ನೀಡದಿರುವುದು ತುಮಕೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಯಲಿಗೆಳೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ದಲಿತ ಮುಖಂಡ ಜಟ್ಟಿ ಅಗ್ರಹಾರ ನಾಗರಾಜು, ಮಲಹೊರುವ ಪದ್ಧತಿ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿರುವ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮಲಹೊರುವ ಅನಿಷ್ಟ ಪದ್ಧತಿ ಸಂಪೂರ್ಣ ನಿರ್ಮೂಲನೆಯಾಗಿದೆ ಎಂಬ ಸರ್ಕಾರದ ಹೇಳಿಕೆಗಳ ನಡುವೆಯೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು, ಕಾನೂನು ಜಾರಿಯ ಪರಿಣಾಮಕಾರಿತ್ವದ ಕುರಿತು ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಅಧಿಕಾರಿಗಳು ಈ ಪ್ರಕರಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸುತ್ತಾರೆ ಮತ್ತು ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...