Homeಕರ್ನಾಟಕತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು

ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು

- Advertisement -
- Advertisement -

ತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ ಇರುವ ಡೀಸೆಲ್‌ ಅನ್ನು ಕಳ್ಳತನ ಮಾಡಿ, ವಾಹನವನ್ನು ಅಲ್ಲೆ ಬಿಟ್ಟು ಪರಾರಿಯಾಗಿದ್ದಾರೆ.

ಸೋಮವಾರ ಮುಂಜಾನೆ ಗುಬ್ಬಿ ಬಸ್ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಕಳವಾಗಿದೆ. ಬಸ್ ಚಾಲಕ ಹನುಮಂತರಾಯ ಭಾನುವಾರ ರಾತ್ರಿ 9.40 ರ ಸುಮಾರಿಗೆ ವಾಹನ ನಿಲ್ಲಿಸಿ (ಕೆಎ -06 ಎಫ್ -0888) ಕೆಎಸ್‌ಆರ್‌ಟಿಸಿ ವಸತಿ ನಿಲಯದಲ್ಲಿ ಮಲಗಲು ಹೋಗಿದ್ದರು. ಸೋಮವಾರ ಬೆಳಿಗ್ಗೆ 6 ಗಂಟೆಗೆ ಮತ್ತೆ ಗುಬ್ಬಿ ಬಸ್ ನಿಲ್ದಾಣಕ್ಕೆ ಹಿಂತಿರುಗಿದಾಗ, ಡಿಪೋದಿಂದ ಬಸ್ ಕಾಣೆಯಾಗಿದೆ. ಇದರ ನಂತರ ಅವರು ಪೊಲೀಸ್‌ ಠಾಣೆಗೆ ತೆರಳಿ ಘಟನೆ ಬಗ್ಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್‌ಗೆ ಜಾಮೀನು ನಿರಾಕರಣೆ

ಬಸ್ಸಿನಲ್ಲಿ GPRS ವ್ಯವಸ್ಥೆ ಇರುವುದರಿಂದ ಗುಬ್ಬಿ ಬಸ್ ನಿಲ್ದಾಣದಿಂದ ಸುಮಾರು 30 ಕಿಮೀ ದೂರದಲ್ಲಿರುವ ಜನೇನಹಳ್ಳಿ ಬಳಿ ವಾಹನವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಕಳ್ಳರು ಡೀಸೆಲ್ ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಕಳ್ಳತನ ಹೆಚ್ಚಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. “ರಾತ್ರಿ ಸಮಯದಲ್ಲಿ ತಮ್ಮ ಪಾರ್ಕಿಂಗ್ ಪ್ರದೇಶಗಳಲ್ಲಿ ಗಸ್ತು ತಿರುಗಲು ವಸತಿ ಸಂಕೀರ್ಣಗಳಲ್ಲಿರುವ ಜನರು ನಮ್ಮನ್ನು ವಿನಂತಿಸುತ್ತಿದ್ದಾರೆ. ಈ ಹಿಂದೆ, ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿಯಂತಹ ನಗರಗಳಲ್ಲಿ ಇಂಧನ ಕಳ್ಳತನ ಹೆಚ್ಚಾಗಿ ನಡೆಯುತ್ತಿತ್ತು. ಆದರೆ ಈಗ ಇಂತಹ ಪ್ರಕರಣಗಳು ಸಣ್ಣ ಪಟ್ಟಣಗಳಿಂದಲೂ ವರದಿಯಾಗುತ್ತಿವೆ” ಎಂದು ಅವರು ಹೇಳಿದ್ದಾರೆ.

ಈ ವರ್ಷದ ಆಗಸ್ಟ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ನಿಂದ ಡೀಸೆಲ್ ಕದಿಯುವ ಗ್ಯಾಂಗ್ ಅನ್ನು ಬಂಧಿಸಿದ್ದರು. ಈ ಗ್ಯಾಂಗ್‌ ಎಂಆರ್‌ಪಿಎಲ್‌ನ ಮುಖ್ಯ ಪೈಪ್‌ಲೈನ್‌ಗೆ ರಂಧ್ರವನ್ನು ಕೊರೆದು ಅಲ್ಲಿಂದ ಡೀಸೆಲ್ ಕದಿಯುತ್ತಿದ್ದರು. ಈ ಪ್ರಕರಣದಲ್ಲಿ ತಂಡದ ಆರು ಸದಸ್ಯರನ್ನು ಬಂಧಿಸಲಾಗಿದೆ.

ಬುಧವಾರದ ವೇಳೆಗೆ, ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 109.89 ರೂಪಾಯಿ ಆಗಿದ್ದರೆ, ಡೀಸೆಲ್‌ ಬೆಲೆ 100.75 ರೂಪಾಯಿಯಾಗಿದೆ.

ಇದನ್ನೂ ಓದಿ: ಚೀನಾ ಮತ್ತು ತಾಲಿಬಾನ್‌ಗೆ ಹೆದರಿದ್ದಾಯಿತು, ಮುಂದೆ ಮಾಲ್ಡೀವ್‌?: BJP ಸಂಸದ ಸುಬ್ರಮಣಿಯನ್‌ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...