2012-13 ಮತ್ತು 2014-15ರಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್‌ನ ಅಪರಾಧ ತನಿಖಾ ಇಲಾಖೆ (ಸಿಐಡಿ) ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 11 ಶಿಕ್ಷಣ ಅಧಿಕಾರಿಗಳನ್ನು ಬಂಧಿಸಿದೆ.
ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳಿಗೆ ಗ್ರೇಡ್-2 ಸಹಾಯಕ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮಗಳು ನಡೆದಿವೆ ಎಂದು ದೂರಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
2012-13ನೇ ಸಾಲಿನಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಮಹೇಶ್ ಶ್ರೀಮಂತ ಎಂಬುವರು ನೀಡಿದ ಸಾಕ್ಷ್ಯದ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳ ಅಡಿಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 12 ರಂದು ದೂರು ದಾಖಲಿಸಲಾಗಿದೆ ಎಂದು ಸಿಐಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅದೇ ರೀತಿ 2014-15ರಲ್ಲಿ ನಡೆದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಗ್ರೇಡ್-2 ಸಹಾಯಕ ಶಿಕ್ಷಕರು ಮತ್ತು ಗ್ರೇಡ್-1 ಭಾಷಾ ಶಿಕ್ಷಕರ ವರ್ಗದಡಿ 11 ‘ಅನರ್ಹ’ ಶಿಕ್ಷಕರನ್ನು ನೇಮಕ ಮಾಡಿರುವುದು ಕಂಡುಬಂದಿದೆ. ಶಾಲಾ ಶಿಕ್ಷಣ ಇಲಾಖೆ ನೀಡಿದ ದಾಖಲೆಗಳ ಆಧಾರದಲ್ಲಿ ಆಗಸ್ಟ್ 12ರಂದು ದೂರು ದಾಖಲಾಗಿತ್ತು.
ಇದನ್ನೂ ಓದಿ: ‘ಶಿಕ್ಷಣ ಇಲಾಖೆ ಭಾರಿ ಭ್ರಷ್ಟಾಚಾರ ನಡೆಸುತ್ತಿದೆ’: ಪ್ರಧಾನಿಗೆ ಪತ್ರ ಬರೆದ ರಾಜ್ಯದ 13 ಸಾವಿರ ಶಾಲೆಗಳು
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಶಮೀನಾಜ್ ಬಾನು ಮತ್ತು ತುಮಕೂರಿನ ಕುಣಿಗಲ್ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜೇಶ್ವರಿ ಜಗಳಿ ಎಂಬ ಇಬ್ಬರು ಸಹಾಯಕ ಶಿಕ್ಷಕರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪದ ಮೇಲೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.



ಹೊಲಸು ರಾಜಕೀಯದಲ್ಲಿ ಸರ್ಕಾರಿ ನೌಕರರು ಬಲಿಯಾಗುತ್ತಾರೆ