Homeಮುಖಪುಟತುಮಕೂರು ನಗರ: ಬಿಜೆಪಿಯಲ್ಲಿ ಬಂಡಾಯ - ಕಾಂಗ್ರೆಸ್, ಜೆಡಿಎಸ್‌ಗೆ ಜಯದ ಅವಕಾಶ

ತುಮಕೂರು ನಗರ: ಬಿಜೆಪಿಯಲ್ಲಿ ಬಂಡಾಯ – ಕಾಂಗ್ರೆಸ್, ಜೆಡಿಎಸ್‌ಗೆ ಜಯದ ಅವಕಾಶ

- Advertisement -
- Advertisement -

ತುಮಕೂರು ನಗರ ಬಿಜೆಪಿ ಟಿಕೆಟ್ ಹಾಲಿ ಶಾಸಕ ಜ್ಯೋತಿ ಗಣೇಶ್ ಪಾಲಾಗಿದೆ. ಟಿಕೆಟ್‌ ವಂಚಿತರಾದ ಮಾಜಿ ಸಚಿವ ಸೊಗಡು ಶಿವಣ್ಣನವರು ಬಂಡಾಯದ ಬಾವುಟ ಹಾರಿಸಿದ್ದು ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ತುಮಕೂರು ನಗರದಲ್ಲಿ ಹೊಸ ಮುಖಕ್ಕೆ ಮನ್ನಣೆ ನೀಡಲಾಗಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ತನ್ನ ಮನೆಯನ್ನೇ ಕೋವಿಡ್ ಸೆಂಟರ್ ಆಗಿ ಪರಿವರ್ತಿಸಿ ಸೇವೆ ನೀಡುವ ಮೂಲಕ ಗಮನ ಸೆಳೆದಿದ್ದ ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಪ್ರಚಾರ ಸಮಿತಿ ರಾಜ್ಯ ಸಂಯೋಜಕ ಇಕ್ಬಾಲ್ ಅಹಮದ್ ಅವರಿಗೆ ಟಿಕೆಟ್ ದೊರೆತಿದೆ.

ತುಮಕೂರು
ಇಕ್ಬಾಲ್ ಅಹಮದ್

ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷವು ಕಳೆದ 11 ಚುನಾವಣೆಗಳಲ್ಲಿ ಸತತವಾಗಿ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಾ ಬಂದಿದೆ. ನಾಲ್ಕು ಬಾರಿ ಗೆದ್ದು, ಏಳು ಬಾರಿ ಸೋತರೂ ಮುಸ್ಲಿಮರಿಗೆ ಟಿಕೆಟ್ ನೀಡುವ ಪರಿಪಾಠ ಮುಂದುವರಿಸಿದೆ. ಈ ಬಾರಿಯೂ ಅದನ್ನೆ ಪುನಾರಾವರ್ತಿಸಿದೆ. ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚಿತ್ರಣ ಈ ರೀತಿ ಇದೆ.

ಅತಿ ಹೆಚ್ಚು ಜನಸಂಖ್ಯೆ ಇರುವ ಕಾರಣದಿಂದ ತುಮಕೂರು ನಗರ ಕ್ಷೇತ್ರದ ಜೊತೆಗೆ ಈ ಹಿಂದೆ ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳು ಇದ್ದವು. 1952ರಲ್ಲಿ ಇದ್ದ ಕೋರ ಕ್ಷೇತ್ರವನ್ನು ಕೈಬಿಟ್ಟು 1957ರಲ್ಲಿ ಹೆಬ್ಬೂರು ಕ್ಷೇತ್ರವನ್ನು ಅಸ್ತಿತ್ವಕ್ಕೆ ತರಲಾಯಿತು. 1967ರ ಹೊತ್ತಿಗೆ ಹೆಬ್ಬೂರು ಬದಲಿಗೆ ಗೂಳೂರು ಕ್ಷೇತ್ರ (ಪರಿಶಿಷ್ಟ ಜಾತಿ ಮೀಸಲು) ಅಸ್ತಿತ್ವಕ್ಕೆ ಬಂದಿತು. ಆನಂತರ ಅದನ್ನು ಕೈಬಿಟ್ಟು 1978ರ ವೇಳೆಗೆ ಬೆಳ್ಳಾವಿ ಕ್ಷೇತ್ರ ಅಸ್ತಿತ್ವಕ್ಕೆ ಬಂತು. 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಬೆಳ್ಳಾವಿ ಬದಲಿಗೆ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು ಸೃಷ್ಟಿಸಲಾಯಿತು. ಈಗ ತುಮಕೂರು ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳು ಅಸ್ತಿತ್ವ ಉಳಿಸಿಕೊಂಡಿವೆ.

ತುಮಕೂರು ನಗರ ವಿಧಾನಸಭಾ ಕ್ಷೇತ್ರ – ರಾಜಕೀಯ ಇತಿಹಾಸ

ಇದುವರೆಗೂ ತುಮಕೂರು ನಗರದಲ್ಲಿ ನಡೆದ 15 ಚುನಾವಣೆಗಳಲ್ಲಿ 6 ಬಾರಿ ಕಾಂಗ್ರೆಸ್, 5 ಬಾರಿ ಬಿಜೆಪಿ, ಎರಡು ಬಾರಿ ಜನತಾಪಕ್ಷ ಮತ್ತು ಎರಡು ಬಾರಿ ಪ್ರಜಾ ಸೋಷಿಯಲಿಸ್ಟ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇಲ್ಲಿ ಜೆಡಿಎಸ್ ಖಾತೆ ತೆರೆಯಲು ವಿಫಲವಾಗಿರುವುದನ್ನು ಗಮನಿಸಬಹುದು.

1989ರಲ್ಲಿ ಜನತಾ ಪಕ್ಷದ ಲಕ್ಷ್ಮಿ ನರಸಿಂಹಯ್ಯನವರು ಕಾಂಗ್ರೆಸ್ ಅಭ್ಯರ್ಥಿ ಎಸ್.ಶಫಿ ಅಹಮದ್ ಎದುರು ಸೋಲುಕಂಡರು. 1994ರ ನಂತರ ತುಮಕೂರು ನಗರ ಕ್ಷೇತ್ರ ಬಿಜೆಪಿ ವಶವಾಯಿತು. ಆ ಚುನಾವಣೆಯಲ್ಲಿ ಸಂಘಪರಿವಾರದ ಹಿನ್ನಲೆಯ ಬಿಜೆಪಿ ಅಭ್ಯರ್ಥಿ ಸೊಗಡು ಶಿವಣ್ಣ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರನ್ನು ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ನಂತರ 1999 ಮತ್ತು 2004ರಲ್ಲಿಯೂ ಸಹ ಸೊಗಡು ಶಿವಣ್ಣ ಕಾಂಗ್ರೆಸ್‌ನ ಎಸ್.ಶಫಿ ಅಹಮದ್‌ರ ಎದುರು ಗೆದ್ದು ಹ್ಯಾಟ್ರಿಕ್ ಸಾಧಿಸಿದರು. 2007ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ತೋಟಗಾರಿಕೆ ಇಲಾಖೆ ಸಚಿವರಾಗಿದ್ದರು. ಅಲ್ಲದೆ 2008ರಲ್ಲಿ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ವಿರುದ್ಧ ಕೇವಲ 1,949 ಮತಗಳ ಅಂತರದಿಂದ ಗೆದ್ದು ಸತತ ನಾಲ್ಕನೇ ಬಾರಿಗೆ ಶಾಸಕರೆನಿಸಿಕೊಂಡರು. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಪರಿಸರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆ ವೇಳೆಗೆ ಬಿಜೆಪಿ ಇಬ್ಭಾಗವಾಗಿತ್ತು. ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧಿಸಿದರೆ, ಯಡಿಯೂರಪ್ಪನವರ ಕೆಜೆಪಿಯಿಂದ ಇಂಜಿನಿಯರ್ ಜಿ.ಬಿ.ಜ್ಯೋತಿ ಗಣೇಶ್ ಕಣಕ್ಕಿಳಿದಿದ್ದರು. ಇವರಿಬ್ಬರ ನಡುವಿನ ಮತ ವಿಭಜನೆಯ ಲಾಭ ಪಡೆದ ಕಾಂಗ್ರೆಸ್‌ನ ಡಾ. ರಫಿಕ್ ಅಹ್ಮದ್ ಕೇವಲ 3,608 ಮತಗಳಿಂದ ಗೆದ್ದು ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದರು. ಡಾ. ರಫಿಕ್ ಅಹ್ಮದ್ 43,681 ಮತಗಳನ್ನು ಪಡೆದರೆ, ಕೆಜೆಪಿಯ ಜಿ.ಬಿ.ಜ್ಯೋತಿಗಣೇಶ್ 40,073 ಮತಗಳನ್ನು ಗಳಿಸಿ ಪೈಪೋಟಿ ನೀಡಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಎನ್. ಗೋವಿಂದರಾಜುರವರು 38,322 ಮತಗಳನ್ನು ಪಡೆದರೆ, ಬಿಜೆಪಿಯ ಸೊಗಡು ಶಿವಣ್ಣ ಕೇವಲ 13,159 ಮತಗಳಿಗೆ ಕುಸಿದು ಮುಖಭಂಗ ಅನುಭವಿಸಿದ್ದರು.

2018ರ ವೇಳೆಗೆ ಬಿಜೆಪಿಯೊಂದಿಗೆ ಕೆಜೆಪಿ ವಿಲೀನಗೊಂಡಿತ್ತು. ಆಗ ಸೊಗಡು ಶಿವಣ್ಣನವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಯಡಿಯೂರಪ್ಪ ಬಣದ ಜಿ.ಬಿ.ಜ್ಯೋತಿಗಣೇಶ್ ಬಿಜೆಪಿ ಅಭ್ಯರ್ಥಿಯಾದರು. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಡಾ. ರಫಿಕ್ ಅಹ್ಮದ್ ಮತ್ತು ಜೆಡಿಎಸ್‌ನಿಂದ ಎನ್. ಗೋವಿಂದರಾಜು ಸ್ಪರ್ಧಿಸಿದ್ದರು. ಮೂರು ಜನರ ತ್ರಿಕೋನ ಹಣಾಹಣಿಯಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ 5,293 ಮತಗಳ ಅಂತರದಿಂದ ಗೆದ್ದು ಬಂದರು. ಅವರು 60,421 ಮತಗಳನ್ನು ಪಡೆದರೆ ಜೆಡಿಎಸ್‌ನ ಗೋವಿಂದರಾಜುರವರು 55,128 ಮತಗಳನ್ನು ಪಡೆದರು. ಕಾಂಗ್ರೆಸ್‌ನ ರಫೀಕ್ ಅಹಮದ್ 51,219 ಮತಗಳನ್ನು ಪಡೆದ ಮೂರನೇ ಸ್ಥಾನಕ್ಕೆ ನೂಕಲ್ಪಟ್ಟರು.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,65,000; ಮುಸ್ಲಿಂ: 60,000; ಲಿಂಗಾಯಿತ: 50,000; ಪರಿಶಿಷ್ಟ ಜಾತಿ: 40,000; ಒಕ್ಕಲಿಗ: 40,000; ಕುರುಬ: 15,000; ಎಸ್‌ಟಿ: 11,000; ಗೊಲ್ಲರು: 8,000; ಇತರೆ: 41,000

ಹಾಲಿ ಪರಿಸ್ಥಿತಿ

ಮೊದಲ ಬಾರಿಗೆ ಶಾಸಕರಾದ ಜ್ಯೋತಿ ಗಣೇಶ್ ತುಮಕೂರಿನಲ್ಲಿ ಮಹಾತ್ಮಗಾಂಧಿ ಕ್ರೀಡಾಂಗಣ, ಡಿಜಿಟಲ್ ಲೈಬ್ರರಿ, ಅಮಾನಿ ಕೆರೆ ಅಭಿವೃದ್ಧಿ, ಕಾಲೇಜು ಕಟ್ಟಡ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳ ಅನುಷ್ಠಾನ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಜನರೊಟ್ಟಿಗೆ ಉತ್ತಮ ಬಾಂಧವ್ಯ ಸಹ ಹೊಂದಿದ್ದಾರೆ ಎನ್ನಲಾಗಿದೆ. ಆದರೆ ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಸಾಕಷ್ಟು ಹಣ ಮಾಡಿದ್ದಾರೆ, ಪ್ರತಿ ಕಾಮಗಾರಿಗಳಲ್ಲಿ ಕಮಿಷನ್ ತೆಗೆದುಕೊಳ್ಳುತ್ತಾರೆ ಎಂಬ ಆರೋಪ ಸಹ ಅವರ ಮೇಲಿದೆ. ಕಾಂಗ್ರೆಸ್ ಕಾರ್ಯಕರ್ತರು ಜ್ಯೋತಿಗಣೇಶ್ ವಿರುದ್ಧ ಪೆಎಂಎಲ್‌ಎ ಪ್ರತಿಭಟನೆ ಸಹ ನಡೆಸಿ ಬಂಧನಕ್ಕೊಳಗಾಗಿದ್ದರು.

ಜ್ಯೋತಿ ಗಣೇಶ್

ಜ್ಯೋತಿಗಣೇಶ್‌ರವರ ತಂದೆ ಜಿ.ಎಸ್ ಬಸವರಾಜುರವರು ಕಾಂಗ್ರೆಸ್‌ನಿಂದ ಬಂದವರಾಗಿದ್ದು ಬಿಜೆಪಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರನ್ನು ಮಣಿಸಿ ಸಂಸದರಾಗಿದ್ದಾರೆ. ಅಪ್ಪ ಮಗ ಇಬ್ಬರೂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ.

ಟಿಕೆಟ್ ವಂಚಿತ ಸೊಗಡು ಶಿವಣ್ಣ

ಮಾಜಿ ಸಚಿವ ಲಿಂಗಾಯತ ಸಮುದಾಯದ ಸೊಗಡು ಶಿವಣ್ಣ ಬಿಜೆಪಿ ಟಿಕೆಟ್‌ಗಾಗಿ ಕಸರತ್ತು ನಡೆಸಿಯು ವಿಫಲರಾಗಿದ್ದಾರೆ. 2018ರಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಸ್ಪರ್ಧಿಸಲಿಲ್ಲ. ಆದರೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ತೀರುತ್ತೇನೆ ಎಂದು ಪಣ ತೊಟ್ಟಿದ್ದಾರೆ. ಶಿವಣ್ಣನವರ ಹಿಂದೆ ಆರ್‌ಎಸ್‌ಎಸ್ ಇದ್ದು, ಅವರು ಈಗಾಗಲೇ ವೋಟು ಕೊಡಿ, ನೋಟು ಕೊಡಿ ಎಂದು ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ್ದಾರೆ.

ಸೊಗಡು ಶಿವಣ್ಣ

ಜೆಡಿಎಸ್

ಜೆಡಿಎಸ್ ಪಕ್ಷವು ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದ ಒಕ್ಕಲಿಗ ಸಮುದಾಯದ ಎನ್ ಗೋವಿಂದರಾಜುರವರಿಗೆ ಟಿಕೆಟ್ ಘೋಷಿಸಿದೆ. ಅವರು ಈ ಹಿಂದೆಯೆಲ್ಲ ಟ್ಯಾಂಕರ್ ಮೂಲಕ ಕುಡಿಯುವ ನೀರು ಒದಗಿಸುವ ಮೂಲಕ ಜನಮನ್ನಣೆ ಗಳಿಸಿದ್ದರು. ಆದರೆ ಸತತ ಎರಡು ಚುನಾವಣೆಗಳಲ್ಲಿ ಸೋತ ನಂತರ ಬೇಸರಗೊಂಡು ನೀರು ಕೊಡುವುದನ್ನು ನಿಲ್ಲಿಸಿದ್ದರು. ಈಗ ಚುನಾವಣೆ ಸಮಯದಲ್ಲಿ ಅವರು ಸಕ್ರಿಯರಾಗಿದ್ದಾರೆ. ಈ ಬಾರಿ ಎಂಎಲ್‌ಎ ಆಗಲೇಬೇಕೆಂದು ಕೆಲಸ ಮಾಡುತ್ತಿದ್ದಾರೆ.

ಗೋವಿಂದರಾಜು

ಕಾಂಗ್ರೆಸ್

ಈ ಬಾರಿ ಮೂವರು ಮುಸ್ಲಿಂ ಸಮುದಾಯದ ಟಿಕೆಟ್ ಆಕಾಂಕ್ಷಿಗಳು ಕಾಂಗ್ರೆಸ್ ಟಿಕೆಟ್ ಕಸರತ್ತು ನಡೆಸಿದ್ದರು. ಅದರಲ್ಲಿ ಇಕ್ಬಾಲ್ ಅಹಮದ್ ಯಶಸ್ವಿಯಾಗಿದ್ದಾರೆ. ಕಳೆದ ಬಾರಿ ಸೋತಿರುವ ಡಾ.ರಫೀಕ್ ಅಹ್ಮದ್ ಮತ್ತು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕರಾದ ಅಟ್ಟಿಕಾ ಬಾಬುರವರು ಕಾಂಗ್ರೆಸ್ ಟಿಕೆಟ್ ಬೇಕೆಂದು ಮನವಿ ಮಾಡಿದ್ದರು. ಆದರೆ ಕಾಂಗ್ರೆಸ್ ಇಕ್ಬಾಲ್ ಅಹಮದ್‌ರವರ ಕೈ ಹಿಡಿದಿದೆ.

ಕೋವಿಡ್ ಸಂದರ್ಭದಲ್ಲಿ ತನ್ನ ಮನೆಯನ್ನೆ ಕೋವಿಡ್ ಸೆಂಟರ್ ಆಗಿ ಪರಿವರ್ತಿಸಿ ಗಮನ ಸೆಳೆದಿದ್ದ ಅವರು ತನಗೆ ಮಾಜಿ ಶಾಸಕ ಶಫಿ ಅಹ್ಮದ್ ಬೆಂಬಲ ಇದೆ ಎಂದು ಹೇಳಿಕೊಂಡು ಪ್ರಚಾರ ಆರಂಭಿಸಿದ್ದಾರೆ.

2023ರ ಸಾಧ್ಯಾಸಾಧ್ಯತೆ

ಕಾಂಗ್ರೆಸ್‌ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದೆ. ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂ ಮತಗಳು, ದಲಿತ, ಕುರುಬ ಸಮುದಾಯದ ಮತಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ. ಕಳೆದ ಸಾರಿ ಇದ್ದ ಆಡಳಿತ ವಿರೋಧಿ ಅಲೆ ಕಾಂಗ್ರೆಸ್‌ ಇಲ್ಲಿದಿರುವುದು ಪ್ಲಸ್ ಪಾಯಿಂಟ್ ಆಗಿದೆ. ಹಾಗಾಗಿ ಐದನೇ ಮುಸ್ಲಿಂ ಶಾಸಕರಾಗಲು ಅವರು ಕಾತುರರಾಗಿದ್ದಾರೆ.

ಅದೇ ರೀತಿ ಜೆಡಿಎಸ್‌ನಲ್ಲಿಯೂ ಸಹ ಗೋವಿಂದರಾಜುರವರಿಗೆ ಯಾವುದೇ ಬಂಡಾಯ ಮತ್ತು ಒಳೇಟಿನ ಭೀತಿ ಇಲ್ಲ. ಎರಡು ಬಾರಿ ಸೋತಿರುವ ಅನುಕಂಪ ಅವರಿಗಿದೆ. ಒಮ್ಮೆಯೂ ಜೆಡಿಎಸ್ ಗೆದ್ದಲ್ಲದ ತುಮಕೂರು ನಗರದಲ್ಲಿ ಈ ಬಾರಿ ಖಾತೆ ತೆರೆಯಲು ಉತ್ಸುಕರಾಗಿದ್ದಾರೆ.

ಆದರೆ ಬಿಜೆಪಿಯ ಜ್ಯೋತಿ ಗಣೇಶ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸೊಗಡು ಶಿವಣ್ಣ ಸ್ಪರ್ಧಿಸಿದರೆ ಲಿಂಗಾಯಿತ ಮತಗಳ ವಿಭಜನೆಯಾಗುತ್ತದೆ. ಆಗ 2013ರಂತೆ ಕಾಂಗ್ರೆಸ್‌ ಅಥವಾ ಜೆಡಿಎಸ್ ಅದರ ಲಾಭ ಪಡೆದುಕೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...