Homeಮುಖಪುಟತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

ತುಮಕೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಯ ಬಂಧನ

ವಿದ್ಯಾರ್ಥಿನಿಯು ಆರೋಗ್ಯ ಸಂಬಂಧಿತ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ತೆರಳಿದ್ದಾಗ ಆಕೆ ಗರ್ಭಿಣಿಯಾಗಿರುವುದು ಕಂಡುಬಂದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ನೀರಿನಲ್ಲಿ ಪ್ರಜ್ಞೆ ತಪ್ಪುವ ಔಷಧ ನೀಡಿ ಅತ್ಯಾಚಾರವೆಸಗಿದ ಆರೋಪದಲ್ಲಿ ಅಸ್ಲಂ ಎಂಬ ಆರೋಪಿಯನ್ನು ತುಮಕೂರು ಜಿಲ್ಲೆಯ ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ನೋಟ್ಸ್ ನೀಡುವುದಕ್ಕಾಗಿ ಗೆಳತಿಯ ಮನಗೆ ಹೋಗಿದ್ದಳು. ಆಗ ಆರೋಪಿಯು ವಿದ್ಯಾರ್ಥಿನಿಯ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಯು ಆರೋಗ್ಯ ಸಂಬಂಧಿತ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ತೆರಳಿದ್ದಾಗ ಆಕೆ ಗರ್ಭಿಣಿಯಾಗಿರುವುದು ಕಂಡುಬಂದ ನಂತರ ವಿಚಾರಿಸಲಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಯ ವಿರುದ್ಧ ಪೋಕ್ಸೊ ಸೇರಿದಂತೆ ಇತರ ಪ್ರಕರಣಗಳನ್ನು ದಾಖಲಿಸಿರುವ ಕೊರಟಗೆರೆ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಎನ್ನುವುದು ಅತಿ ಕ್ರೂರ ಅಪರಾಧವಾಗಿದೆ. ಅದಕ್ಕೆ ತೀವ್ರತೆರನಾದ ಶಿಕ್ಷೆ ವಿಧಿಸಲಾಗುತ್ತದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಪೊಕ್ಸೊ ಕಾಯ್ದೆಯಡಿ ಬರಲಿದ್ದು, ಆರೋಪಿಯೇ ತಾನು ತಪ್ಪಿತಸ್ಥನಲ್ಲ ಎಂದು ಸಾಬೀತುಪಡಿಸಬೇಕಾಗುತ್ತದೆ. ಈ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜೊತೆಗೆ ಅತ್ಯಾಚಾರಕ್ಕೆ ತೀವ್ರ ಶಿಕ್ಷೆಯಿದೆಯೆಂದು ಸರ್ಕಾರ ಎಲ್ಲೆಡೆ ಪ್ರಚಾರ ಮಾಡಬೇಕಿದೆ. ಜೊತೆಗೆ ಮಹಿಳಾ ಸಮಾನತೆ, ರಕ್ಷಣೆ ಮತ್ತು ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ಮೂಲಕ ಅತ್ಯಾಚಾರಗಳೆಂಬ ಹೀನ ಕೃತ್ಯಗಳನ್ನು ತಡೆಯಲು ಸಾಧ್ಯ.


ಇದನ್ನೂ ಓದಿ: ಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...