Homeಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ.

- Advertisement -
- Advertisement -

ಕೋರ, ಗೂಳೂರು, ಹೆಬ್ಬೂರು, ಬೆಳ್ಳಾವಿ ಕ್ಷೇತ್ರಗಳ ಹೆಸರಿನಲ್ಲಿದ್ದ ಹಲವು ಹೋಬಳಿಗಳನ್ನು ಒಳಗೊಂಡ ತುಮಕೂರು ಗ್ರಾಮಾಂತರ ಕ್ಷೇತ್ರವನ್ನು 2008ರಲ್ಲಿ ನಡೆದ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ಸೃಷ್ಟಿಸಲಾಯಿತು. ತುಮಕೂರು ನಗರದ ಸುತ್ತಲೂ ಹಬ್ಬಿಕೊಂಡಿರುವ ಸಾಮಾನ್ಯ ವಿಧಾನಸಭಾ ಕ್ಷೇತ್ರ ಇದಾಗಿದೆ.

ರಾಜಕೀಯ ಇತಿಹಾಸ

2008ರಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ಸುರೇಶ್‌ ಗೌಡರವರು ಸ್ಪರ್ಧಿಸಿದರು. ಜೆಡಿಎಸ್ ಪಕ್ಷದಿಂದ ಎಚ್.ನಿಂಗಪ್ಪ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಅರೆಕೆರೆ ರುದ್ರೇಶ್ ಅಭ್ಯರ್ಥಿಯಾಗಿದ್ದರು. ಆಗ ಬಿ.ಸುರೇಶ್‌ಗೌಡರವರು 60,904 ಮತಗಳನ್ನು ಪಡೆದು ಸಮೀಪದ ಅಭ್ಯರ್ಥಿ ಜೆಡಿಎಸ್‌ನ ನಿಂಗಪ್ಪರವರ ಎದುರು 28,392 ಮತಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದರು. ನಿಂಗಪ್ಪನವರು 32,512 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಅರೆಕೆರೆ ರುದ್ರೇಶ್‌ರವರು 21,642 ಮತಗಳಿಗೆ ಸೀಮಿತಗೊಂಡರು.

ಕೊರಟಗೆರೆಯಿಂದ ಮೂರು ಬಾರಿ ಆರಿಸಿ ಬಂದಿದ್ದ ಚೆನ್ನಿಗಪ್ಪನವರ ಪುತ್ರ ಡಿ.ಸಿ ಗೌರಿಶಂಕರ್‌ರವರು 2008ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆನಂತರ ಆಪರೇಷನ್ ಕಮಲಕ್ಕೆ ಒಳಗಾಗಿದ್ದ ಮತ್ತೆ 2013ರ ಚುನಾವಣೆ ವೇಳೆಗೆ ಜೆಡಿಎಸ್‌ ಸೇರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾದರು. ಆಗ ಹಾಲಿ ಶಾಸಕ ಬಿ. ಸುರೇಶ್‌ ಗೌಡರವರು ಮರು ಆಯ್ಕೆ ಬಯಸಿ ಬಿಜೆಪಿಯಿಂದ ಕಣಕ್ಕಿಳಿದರು. ಇವರಿಬ್ಬರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತು; 1,572 ಮತಗಳ ಅಂತರದಲ್ಲಿ ಬಿಜೆಪಿಯ ಸುರೇಶ್‌ ಗೌಡರವರು ಮರು ಆಯ್ಕೆಯಾದರು. ಅವರು 55,029 ಮತಗಳನ್ನು ಪಡೆದರೆ ಗೌರಿಶಂಕರ್‌ರವರು 53,457 ಮತಗಳನ್ನು ಪಡೆದರು. ಆ ಚುನಾವಣೆಯಲ್ಲಿ ಕೆಜೆಪಿ ಸೇರಿದ್ದ ಎಚ್.ನಿಂಗಪ್ಪನವರು 22,709 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಆಡಿಟರ್ ನಾಗರಾಜುರವರು ಕೇವಲ 8,599 ಮತಗಳಿಗೆ ಕುಸಿದರು.

2018ರಲ್ಲಿ ಮತ್ತೆ ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವೆ ಜಿದ್ದಾಜಿದ್ದಿ ನಡೆಯಿತು. ಬಿಜೆಪಿಯ ಸುರೇಶ್‌ಗೌಡರವರ ಹ್ಯಾಟ್ರಿಕ್ ಗೆಲುವಿಗೆ ತಡೆಯೊಡ್ಡಿದ ಜೆಡಿಎಸ್‌ನ ಗೌರಿಶಂಕರ್‌ರವರು 5,640 ಮತಗಳ ಅಂತರದಲ್ಲಿ ಗೆದ್ದುಬಂದರು. ಗೌರಿಶಂಕರ್ 82,740 ಮತಗಳನ್ನು ಪಡೆದರೆ, ಸುರೇಶ್‌ಗೌಡರು 77,100 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಾಯಸಂದ್ರ ರವಿಕುಮಾರ್ ಕೇವಲ 7,633 ಮತಗಳಿಗೆ ಕುಸಿದರು. ಈ ಚುನಾವಣೆಯಲ್ಲಿ ಅಕ್ರಮ ನಡೆಸಿ, ಬಾಂಡ್ ವಿತರಿಸಿ ಗೌರಿಶಂಕರ್ ಗೆಲುವು ಸಾಧಿಸಿದ್ದಾರೆ ಎಂದು ಸುರೇಶ್‌ಗೌಡರು ಆರೋಪಿಸಿದ್ದರು. ಅಲ್ಲದೆ ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಳಿಸಬೇಕೆಂದು ದೂರು ನೀಡಿದ್ದು, ಕರ್ನಾಟಕ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

‘ಆರ್‌ಎಸ್‌ಎಸ್‌ನಂಥ ಭ್ರಷ್ಟರು ಮತ್ಯಾರು ಇಲ್ಲ. ಸುಮ್ಮನೇ ದೇಶಪ್ರೇಮ ಅನ್ನುತ್ತಾರೆ. ಆದರೆ ಅವರು ಭಾರೀ ಭ್ರಷ್ಟರು. ನಮ್ಮ ಕರ್ನಾಟಕದ ಆರ್‌ಎಸ್‌ಎಸ್‌ ಮುಖಂಡರನ್ನು ನೋಡಿ ಎಷ್ಟು ಹಣ ಮಾಡಿದ್ದಾರೆ’ ಎಂದಿದ್ದ ಸುರೇಶ್‌ಗೌಡರ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಯಡಿಯೂರಪ್ಪನವರನ್ನು ಹೊಗಳಿದ್ದ ಅವರು 2018ರಲ್ಲಿ ಸೋತ ನಂತರ ಕ್ಷೇತ್ರದಲ್ಲಿದ್ದು ಮುಂದಿನ ಚುನಾವಣೆಗೆ ತಯಾರಿ ನಡೆಸಿದ್ದಾರೆ.

ಅಂದಾಜು ಜಾತಿವಾರು ಮತಗಳು

ಒಟ್ಟು ಮತಗಳು: 2,10,000; ಒಕ್ಕಲಿಗರು: 60,000; ಲಿಂಗಾಯಿತ: 40,000; ಪ.ಜಾ: 37,000; ಮುಸ್ಲಿಂ: 21,000; ಪ.ಪಂ: 15,000; ಕುರುಬ: 10,000; ಇತರೆ: 27,000

ಹಾಲಿ ಪರಿಸ್ಥಿತಿ

ಎರಡನೇ ಬಾರಿಗೆ ಶಾಸಕರಾಗಿರುವ ಗೌರಿಶಂಕರ್‌ರವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಂಎಸ್‌ಐಎಲ್ ನಿಗಮದ ಅಧ್ಯಕ್ಷರಾಗಿದ್ದರು. ಆನಂತರ ಸುರೇಶ್‌ಗೌಡರೊಂದಿಗಿನ ಜಗಳದಲ್ಲಿಯೇ ಹೆಚ್ಚು ಚರ್ಚೆಯಲ್ಲಿದ್ದಾರೆ.

ತುಮಕೂರಿನ ರಾಜಕೀಯ ರೌಡಿಸಂ ಇದ್ದ ಹಾಗೆ ಇರುತ್ತದೆ. ಇಲ್ಲಿ ಬಿ.ಸುರೇಶ್ ಗೌಡ ಮತ್ತು ಗೌರಿಶಂಕರ್‌ ಒಬ್ಬರಿಗೊಬ್ಬರು ಕುಸ್ತಿ ಆಡುವ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ತನ್ನ ಕೊಲೆಗೆ ಶಾಸಕ ಗೌರಿ ಶಂಕರ್ ಸುಪಾರಿ ಕೊಟ್ಟಿದ್ದಾರೆ ಎಂದು ಇತ್ತೀಚೆಗೆ ಸುರೇಶ್‌ಗೌಡರು ಆರೋಪಿಸಿ ಪೊಲೀಸ್ ದೂರು ನೀಡಿದ್ದು ಹಾಲಿ ಶಾಸಕರ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

ಇನ್ನೊಂದೆಡೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿರುವ ಗೌರಿಶಂಕರ್ ಸುರೇಶ್‌ಗೌಡರಿಂದ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಪ್ರತಿ ದೂರು ನೀಡಿದ್ದಾರೆ. ಇವರಿಬ್ಬರ ಜಗಳ ಈ ರೀತಿ ಇದ್ದರೆ ಅವರ ಕಾರ್ಯಕರ್ತರೂ ಕಡಿಮೆಯೇನಿಲ್ಲ. ಪ್ರತಿ ಊರಿನಲ್ಲಿ ಗೌರಿಶಂಕರ್ ಮತ್ತು ಸುರೇಶ್‌ಗೌಡರ ಬಣಗಳಿದ್ದು ಪರಸ್ಪರ ಹೊಡೆದಾಡಿರುವ ಘಟನೆಗಳು ವರಿದಿಯಾಗಿವೆ. ಇದು ಅಪಾಯಕಾರಿ ಮಟ್ಟ ತಲುಪಿರುವುದರಿಂದ ಬೇರೆ ಯಾವುದೇ ಅಭ್ಯರ್ಥಿಗಳು ಇಲ್ಲಿ ಬೆಳೆಯಲು ಸಾಧ್ಯವಾಗಿಲ್ಲ ಎಂದು ವಿಶ್ಲೇಷಿಸಲಾಗುತ್ತದೆ.

ಬಿಜೆಪಿಯಿಂದ ಮಾಜಿ ಶಾಸಕ ಬಿ.ಸುರೇಶ್‌ಗೌಡರವರಿಗೆ ಟಿಕೆಟ್ ಖಚಿತವಾಗಿದೆ. ಅವರು ತನ್ನ ಆಡಳಿತಾವಧಿಯಲ್ಲಿ ಆದ ಕೆಲಸಗಳನ್ನು ನೋಡಿ ಮತ ಕೊಡಿ ಎನ್ನುತ್ತಿದ್ದಾರೆ.

ಕಾಂಗ್ರೆಸ್‌ನಿಂದ ಮಾಜಿ ಶಾಸಕರಾದ ಎಚ್.ನಿಂಗಪ್ಪರವರಿಗೆ ಟಿಕೆಟ್ ಪಕ್ಕಾ ಎನ್ನಲಾಗುತ್ತಿದೆ. ಜೆಡಿಎಸ್‌ನಲ್ಲಿ ಟಿಕೆಟ್‌ ಸಿಗುವುದಿಲ್ಲ ಎಂದು ತಿಳಿಯುತ್ತಲೇ ಅವರು ಕಾಂಗ್ರೆಸ್ ಸೇರಿದ್ದಾರೆ. ಹಲವು ಸೋಲುಗಳನ್ನು ಕಂಡಿರುವ ಅವರು ಮತ್ತೊಂದು ಪ್ರಯತ್ನ ನಡೆಸುತ್ತಿದ್ದಾರೆ. ಇನ್ನು ಕೆಪಿಸಿಸಿ ಕಾನೂನು ವಿಭಾಗದ ಸೂರ್ಯ ಮುಕುಂದ್‌ರಾಜ್ ಮತ್ತು ಶ್ರೀನಿವಾಸ್‌ರವರು ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಎಚ್.ನಿಂಗಪ್ಪ

ಜೆಡಿಎಸ್‌ನಿಂದ ಗೌರಿಶಂಕರ್‌ರವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಅವರ ಮೇಲಿರುವ ಚುನಾವಣಾ ಅಕ್ರಮ ಪ್ರಕರಣದ ತೀರ್ಪು ಯಾವಾಗ ಹೊರಬೀಳಲಿದೆ ಎಂಬುದು ಗೊತ್ತಿಲ್ಲ. ಅವರ ಪರವಾಗಿ ತೀರ್ಪು ಬಂದಲ್ಲಿ ನಿರಾಂತರವಾಗಿ ಚುನಾವಣೆ ಎದುರಿಸಬಹುದು. ಒಂದು ಪಕ್ಷ ತೀರ್ಪು ವಿರುದ್ಧವಾಗಿ, ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದಾದರೆ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ. ಆಗ ಅವರು ಮತ್ತೆ ಸುಪ್ರೀಂ ಕೋರ್ಟ್ ಕದ ತಟ್ಟಬೇಕಿರುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ನಡೆಯುತ್ತಿದ್ದ ಫೈಟ್‌ಗೆ ಈ ಬಾರಿ ಕಾಂಗ್ರೆಸ್ ಕೂಡ ಎಂಟ್ರಿ ಕೊಟ್ಟಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆ ಎನಿಸಿದರೂ ಈಗಲೂ ನೇರಾ ನೇರ ಪೈಪೋಟಿ ಇರುವುದು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ. ಯಾರೇ ಗೆದ್ದರೂ ಅಂತರ ಬಹಳ ಕಡಿಮೆ ಇರಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ತುಮಕೂರು ನಗರ ವಿಧಾನಸಭಾ ಕ್ಷೇತ್ರ: ಬಿಜೆಪಿ ಕಚ್ಚಾಟದ ಲಾಭ ಕಾಂಗ್ರೆಸ್‌ಗೊ, ಜೆಡಿಎಸ್‌ಗೊ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...