Homeಮುಖಪುಟತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಅನರ್ಹ

ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ ಗೌರಿಶಂಕರ್ ಅನರ್ಹ

- Advertisement -
- Advertisement -

ಮತದಾರರಿಗೆ ನಕಲಿ ಬಾಂಡ್ ಹಂಚಿ ಆಮಿಷವೊಡ್ಡಿದ ಪುಕರಣದದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಶಾಸಕ ಡಿ.ಸಿ ಗೌರಿಶಂಕರ್‌ರವರನ್ನು ಕರ್ನಾಟಕ ಹೈಕೋರ್ಟ್ ಅನರ್ಹಗೊಳಿಸಿದೆ.

2018ರ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ತುಮಕೂರು ಗ್ರಾಮಾಂತರ ಕ್ಷೇತ್ರದ 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂದು ಗೌರಿಶಂಕರ್ ವಿರುದ್ಧ ಬಿಜೆಪಿಯ ಮಾಜಿ ಶಾಸಕ ಸುರೇಶ್‌ಗೌಡರವರು ದೂರು ದಾಖಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕ ಸದಸ್ಯ ಪೀಠ ಅವರ ಆಯ್ಕೆ ಅಸಿಂಧು ಎಂದು ತೀರ್ಪು ನೀಡಿದೆ.

ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಗೌರಿ ಶಂಕರ್‌ರವರ ಶಾಸಕ ಸ್ಥಾನ ಅನರ್ಹಗೊಂಡಿದ್ದಲ್ಲದೆ ಅವರು ಮುಂದಿನ 6 ವರ್ಷಗಳ ಕಾಲ ಚುನಾವಣೆಗಳಲ್ಲಿ ಭಾಗವಹಿಸದಂತೆ ತಡೆಯಲಾಗಿದೆ ಎಂದು ಪ್ರಜಾಪ್ರಗತಿ ವರದಿ ಮಾಡಿದೆ.

2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಗೌರಿ ಶಂಕರ್‌ ಅವರಿಗೇ ಟಿಕೆಟ್ ಘೋಷಿಸಿದೆ. ಅವರೂ ಸಹ ಪಂಚರತ್ನ ಯಾತ್ರೆ ಸೇರಿದಂತೆ ಭರ್ಜರಿ ಚುನಾವಣೆ ತಯಾರಿ ನಡೆಸಿದ್ದರು. ಈಗ ಅನರ್ಹಗೊಂಡಿರುವುದರಿಂದ ಅವರು ಮತ್ತೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ತುಮಕೂರು ಗ್ರಾಮಾಂತರ: ಬಿ.ಸುರೇಶ್‌ಗೌಡ ಮತ್ತು ಡಿ.ಸಿ ಗೌರಿಶಂಕರ್‌ ನಡುವಿನ ಹೊಡಿ ಬಡಿ ಕದನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...