Homeಮುಖಪುಟಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

- Advertisement -
- Advertisement -

ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಕುಂಟುತ್ತಾ ತೆವಳುತ್ತಾ ಸಾಗಿದೆ. ಕಾಮಗಾರಿಗಳಿಗಾಗಿ ತೆಗೆದಿರುವ ದೊಡ್ಡದೊಡ್ಡ ಕಂದಕಗಳು ವಾರಾನುಗಟ್ಟಲೆ ಮುಚ್ಚದೆ ಹಾಗೇ ಉಳಿದಿವೆ. ರಸ್ತೆಗಳ ವಿಸ್ತರಣೆ, ಚರಂಡಿಗಳ ನಿರ್ಮಾಣ, ಪೈಪ್ ಅಳವಡಿಸಿಕೆ ಹೀಗೆ ನಗರದೆ ಎಲ್ಲಾ ಭಾಗದಲ್ಲೂ ಏಕಕಾಲಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಎಲ್ಲಿಯೂ ಪೂರ್ಣಗೊಂಡಿಲ್ಲ. ಇದರಿಂದ ನಗರ ಅವ್ಯವಸ್ಥೆಯ ಗೂಡಾಗಿದೆ.

ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡಂತೆ ತೋರಿಸಿರುವ ಕಾಮಗಾರಿಗಳು ವಾಸ್ತವದಲ್ಲಿ ಜಾರಿಯೇ ಆಗಿಲ್ಲ. ಹಳೆಯ ಕಾಮಗಾರಿಗಳಗೆ ಹೊಸ ಸ್ಮಾರ್ಟ್ ಫಲಕ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.  ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಎರಡು ಸ್ಮಾರ್ಟ್ ಆಟೋ ನಿಲ್ದಾಣ ಕಾಮಗಾರಿ ಪೂರ್ಣಗೊಂಡ ಬಗ್ಗೆ ದಾಖಲಿಸಲಾಗಿದೆ. ಅಂತಹ ಸ್ಮಾರ್ಟ್ ಆಟೋ ಸ್ಟ್ಯಾಂಡ್‌ಗಳು ಎಲ್ಲಿವೇ ಎಂಬುದೇ ಜನರಿಗಿರಲಿ ಆಟೋ ಚಾಲಕರಿಗೂ ತಿಳಿದಿಲ್ಲ. ಇದು ಅಚ್ಚರಿಯ ಸಂಗತಿ. ಆದರೆ ಈ ಕಾಮಗಾರಿ ಪೂರ್ಣಗೊಂಡಿದೆ. ಇದಕ್ಕೆ ಬಿಲ್ ಕೂಡ ಪಡೆಯಲಾಗಿದೆ.

ಬಿ.ಎಚ್ ರಸ್ತೆಯ ಸಿದ್ದಗಂಗಾ ಪ್ರೌಢಶಾಲೆಯ ಮುಂಭಾಗ ಮತ್ತು ತುಮಕೂರು ವಿಶ್ವವಿದ್ಯಾಲಯದ ಮುಂದೆ ಸ್ಮಾರ್ಟ್ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸ್ಮಾರ್ಟ್ ಸಿಟಿ ವೆಬ್‌ಸೈಟ್‌ನಲ್ಲಿ ಫೋಟೊ ಪ್ರಕಟಿಸಿದೆ. ಆ ಎರಡೂ ಸ್ಥಳಗಳಿಗೆ ಹೋಗಿ ನೋಡಿದರೆ ಆ ನಿಲ್ದಾಣಗಳು ಧೂಳಿಡಿದು ನಿಂತಿವೆ. ಹಿಂದೆ ರಫೀಕ್ ಅಹಮದ್ ಶಾಸಕರಾಗಿದ್ದ ಕಾಲದಲ್ಲಿ ನಿರ್ಮಿಸಿದ್ದ ಬಸ್ ಶೆಲ್ಟರ್ ಗೆ ಬಣ್ಣ ಬಳಿದು ಡಿಸ್ ಪ್ಲೇ ಬೋರ್ಡ್ ಅಳವಡಿಸಿರುವುದು ಬಿಟ್ಟರೆ ಬೇರೇನೂ ಆಗಿಲ್ಲ.

ಈಗ ಬೇಸಿಗೆ ಆರಂಭವಾಗಿದೆ. ಸುಡುಬಿಸಿಲಲ್ಲಿ ಆ ಸ್ಮಾರ್ಟ್ ನಿಲ್ದಾಣಗಳ ನೆರಳಿನಲ್ಲಿ ಜನರು ಕುಳಿತುಕೊಳ್ಳ ಬೇಕಲ್ಲವೇ? ಒಬ್ಬರೂ ಇಲ್ಲ. ಅದ್ಯಾವ ಕಾರಣಕ್ಕೆ ಸ್ಮಾರ್ಟ್ ಬಸ್ ನಿಲ್ದಾಣಗಳೆಂದು ಕರೆದರೋ ತಿಳಿಯುತ್ತಿಲ್ಲ.

ತುಮಕೂರು ಅಮಾನಿಕೆರೆಯ ನಡುವೆ ಸ್ಮಾರ್ಟ್ ಡಿಸ್ ಪ್ಲೇ ಅಳವಡಿಸಿದೆ. ಅದರಲ್ಲಿ ಯಾವ ಕಾಮಗಾರಿಗಳು ಪೂರ್ಣಗೊಂಡಿವೆ. ಯಾವ ಕಾಮಗಾರಿಗಳು ನಡೆಯುತ್ತಿವೆ ಎಂಬ ಮಾಹಿತಿ ಪ್ರದರ್ಶನಗೊಳ್ಳಬೇಕು. ಆದರೆ ಪ್ರಧಾನಿ ಮೋದಿ ಅವರ ಜಾಹಿರಾತು ಬಿಟ್ಟರೆ ಬೇರೆ ಯಾವುದೇ ಕಾಮಗಾರಿಯ ವಿವರ ಅಲ್ಲಿ ಪ್ರದರ್ಶನಗೊಳ್ಳುವುದಿಲ್ಲ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ದುಂದುವೆಚ್ಚ ಮಾಡಿರುವುದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸ್ಲಂ ಜನಾಂದೋಲನದ ರಾಜ್ಯ ಸಂಚಾಲಕ ಎ.ನರಸಿಂಹ ಮೂರ್ತಿ ಹೇಳುವುದು ಹೀಗೆ. “ಸ್ಮಾರ್ಟ್ ಸಿಟಿಯಿಂದ ಕೆಲವೇ ಜನರಿಗೆ ಮಾತ್ರ ಅನುಕೂಲ. ನಗರ ವಂಚಿತರಿಗೆ ಮತ್ತು ಸ್ಲಂ ಜನರಿಗೆ ಯಾವುದೇ ಅನುಕೂಲಗಳು ಇಲ್ಲ. ಐದಾರು ವಾರ್ಡ್‌ಗಳಲ್ಲಿ ಮಹಿಳೆಯರಿಗಾಗಿ 25 ಸ್ಮಾರ್ಟ್ ಟಾಯ್ಲೆಟ್ ಕಟ್ಟಿಸಲು ಉದ್ದೇಶಿಸಲಾಗಿದೆ.. ಮೇಲ್ವರ್ಗದ ಜನರೇ ಹೆಚ್ಚು ವಾಸಿಸುವ ಪ್ರದೇಶಗಳಲ್ಲಿ ಟಾಯ್ಲೆಟ್ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ಮೇಲ್ವರ್ಗದ ಜನರು ಅದಕ್ಕೆ ಹೋಗುತ್ತಾರೆಯೇ? ಇಲ್ಲ. ಬದಲಿಗೆ ಸ್ಲಂಗಳಲ್ಲಿ ಟಾಯ್ಲೆಟ್ ನಿರ್ಮಿಸಿದರೆ ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಟ್ಟಂತೆ ಆಗುತ್ತದೆ. ದಮನಿತರು, ಬೀದಿಬದಿ ವ್ಯಾಪಾರಿಗಳು ಸ್ಮಾರ್ಟಿ ಸಿಟಿ ಯೋಜನೆಯಲ್ಲಿ ಒಳಗೊಂಡಿಲ್ಲ. ಹೀಗಾಗಿ ‘ಲೆಕ್ಕಕೊಡಿ’ ಚಳವಳಿ ಆರಂಭಿಸಲು ಸಿದ್ದತೆ ನಡೆಸಿದ್ದೇವೆ ಎಂದು ನಾನುಗೌರಿ.ಕಾಮ್ ಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಳ್ಳಲು 1936 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾಲು 1176 ಕೋಟಿ ರೂ. ನೀರು ಪೂರೈಕೆ, ಪಿಡಬ್ಲ್ಯೂಡಿ, ಹೌಸಿಂಗ್ ಮೊದಲಾದ ಇಳಾಖೆಗಳು 549 ಕೋಟಿ ಮತ್ತು ಸಾರ್ವಜನಿಕ, ಖಾಸಗಿ ಸಹಭಾಗಿತ್ವದ ಕಂಪನಿಗಳಾದ ಜಿಯೋ, ಗ್ಯಾಸ್, ವೇದಾಂತ ಕಂಪನಿಗಳು 208 ಕೋಟಿ ವೆಚ್ಚ ಮಾಡುತ್ತಿವೆ. ಈ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ನೆಲದಲ್ಲಿ ಕೇಬಲ್ ಅಳವಡಿಸುವ ಕೆಲಸ ಇನ್ನೂ ನಡೆಯುತ್ತಲೇ ಇದೆ.

ಬಿ.ಎಚ್.ರಸ್ತೆಯ ಒಂದು ಬದಿ ಎರಡು ವರ್ಷದ ಹಿಂದೆ ಚರಂಡಿ ನಿರ್ಮಾಣ ಮಾಡಲಾಗಿತ್ತು. ಈಗ ಅದೇ ಚರಂಡಿ ಕಿತ್ತು ಹಾಕಿ ಮತ್ತೊಮ್ಮೆ ಹೊಸದಾಗಿ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಅಂದರೆ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಯ ಅವಾಂತರಗಳನ್ನು ಯಾರೂ ಪ್ರಶ್ನಿಸುತ್ತಿಲ್ಲ. ಪ್ರಶ್ನಿಸುವವರ ಮಾತನ್ನು ಯಾರೂ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಸ್ಮಾರ್ಟ್ ಸಿಟಿ ಅವ್ಯವಸ್ಥೆ ಮತ್ತು ಅವ್ಯಹಾರದ ಕುರಿತು ದನಿ ಎತ್ತಿದ ಮಾಜಿ ಸಚಿವ ಸೊಗಡು ಶಿವಣ್ಣ ಈಗ ಮೌನ ವಹಿಸಿದ್ದಾರೆ. ಇದರ ಹಿಂದಿರುವ ಮರ್ಮವೇನು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...