Homeಮುಖಪುಟಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್; ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ, ನದಿ ಪಾತ್ರದಲ್ಲಿ ಕಟ್ಟೆಚ್ಚರ

ಕೊಚ್ಚಿಹೋದ ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್; ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ, ನದಿ ಪಾತ್ರದಲ್ಲಿ ಕಟ್ಟೆಚ್ಚರ

- Advertisement -
- Advertisement -

ಆಘಾತಕಾರಿ ಘಟನೆಯೊಂದರಲ್ಲಿ, ರಾಜ್ಯದ ಅತಿದೊಡ್ಡ ಜಲಾಶಯವಾದ ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಭಾನುವಾರ ಮಧ್ಯರಾತ್ರಿ 1 ಗಂಟೆಗೆ ನೀರಿನಲ್ಲಿ ಕೊಚ್ಚಿಹೋಗಿದೆ. ಹಾನಿಗೊಳಗಾದ ಗೇಟ್ ಸಂಖ್ಯೆ 19 ರಿಂದ ಹೆಚ್ಚಿನ ಪ್ರಮಾಣದ ನೀರು ಹೊರಬರಲು ಪ್ರಾರಂಭಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ತುರ್ತು ಸಭೆ ಕರೆದಿದ್ದಾರೆ.

ರಾಜ್ಯದ ಅಣೆಕಟ್ಟುಗಳ ಇತಿಹಾಸದಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲು. ನದಿಯ ಕೆಳಭಾಗದಲ್ಲಿ ವಾಸಿಸುವ ಜನರಿಗೆ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಕಳೆದ ವಾರದಿಂದ ತುಂಗಭದ್ರಾ ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒತ್ತಡದ ಕಾರಣ, ಕ್ರೆಸ್ಟ್ ಗೇಟ್ ನಂ. 19 ಒಡೆದ ನಂತರ ಗೇಟ್ ಹೊರಹರಿವಿನೊಳಗೆ ಕೊಚ್ಚಿಕೊಂಡುಹೋಯಿತು. ಹಾನಿಗೊಳಗಾದ ಗೇಟ್‌ನಿಂದ ಪ್ರಸ್ತುತ 36,000 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ಇತರ 18 ಕ್ರೆಸ್ಟ್ ಗೇಟ್‌ಗಳು ಸೇರಿ 40,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಿಂದ ನೀರಿನ ಹೊರಹರಿವು 1 ಲಕ್ಷ ಕ್ಯೂಸೆಕ್ ದಾಟಿದೆ. 19 ರ ಕ್ರೆಸ್ಟ್ ಗೇಟ್ಸ್ ಪ್ರದೇಶವು ಗರಿಷ್ಠ ಹೊರಹರಿವಿನ ಒತ್ತಡವನ್ನು ಹೊಂದದಂತೆ ಹೊರಬಿಡುವ ಪ್ರಮಾಣವನ್ನು ಹೆಚ್ಚಿಸಲು ಯೋಜಿಸಲಾಗಿದೆ.

ಈ ಅಣೆಕಟ್ಟು ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿದೆ, ಇದನ್ನು 1953 ರಲ್ಲಿ ನಿರ್ಮಿಸಲಾಗಿತ್ತು. ಇದು ಮೂರು ರಾಜ್ಯಗಳ ನೀರು ಮತ್ತು ನೀರಾವರಿ ಅಗತ್ಯಗಳನ್ನು ಪೂರೈಸುತ್ತದೆ. ಅಣೆಕಟ್ಟು 105.788 ಟಿಎಂಸಿ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ. ಕಂಪ್ಲಿ ಪಟ್ಟಣದಲ್ಲಿ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಪ್ರವಾಹ ಪರಿಸ್ಥಿತಿ ಎದುರಾಗುವ ನಿರೀಕ್ಷೆಯನ್ನು ಅಧಿಕಾರಿಗಳು ಹೊಂದಿದ್ದಾರೆ. ಆದರೆ, ಉಳಿದ 31 ಕ್ರೆಸ್ಟ್ ಗೇಟ್‌ಗಳಿಂದ ನೀರು ಹೊರಹರಿವು ತಕ್ಷಣವೇ ನಿಲ್ಲಿಸಲು ಸಾಧ್ಯವಿಲ್ಲ. ಏಕೆಂದರೆ, ಇದು ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಪ್ರವಾಹಕ್ಕೆ ಕಾರಣವಾಗಬಹುದು.

ಹೊಸಪೇಟೆಯಲ್ಲಿ ತುರ್ತು ಸಭೆ ಸೇರಲು ಈಗಾಗಲೇ ಆಂಧ್ರದ ತಜ್ಞ ಎಂಜಿನಿಯರ್‌ಗಳ ತಂಡ ತೆರಳಿದೆ. ಕಳೆದ ತಿಂಗಳು ಕ್ರೆಸ್ಟ್ ಗೇಟ್‌ನಿಂದ ನೀರು ಬಿಟ್ಟ ನಂತರ ಪ್ರಗತಿಯಲ್ಲಿರುವ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ನೀರು ಬಿಡಲಾಗುವುದು. ಅಣೆಕಟ್ಟು 105.788 ಟಿಎಂಸಿ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯ ಹೊಂದಿದೆ.

ಹೊಸಪೇಟೆ ಶಾಸಕ ಎಚ್.ಆರ್.ಗವಿಯಪ್ಪ ಅವರು ಅಧಿಕಾರಿಗಳನ್ನು ಭೇಟಿ ಮಾಡಿದರು. “ನಾವು ಪರಿಸ್ಥಿತಿಯ ಬಗ್ಗೆ ಸರ್ಕಾರಕ್ಕೆ ತಿಳಿಸಿದ್ದು, ಜನರಿಗೆ ಭಯಪಡಬೇಡದಂತೆ ವಿನಂತಿಸುತ್ತೇವೆ. ನಮ್ಮ ಅಧಿಕಾರಿಗಳು ಈಗಾಗಲೇ ಕೆಲಸದಲ್ಲಿದ್ದಾರೆ” ಎಂದು ಅವರು ಹೇಳಿದರು.

ಕೊಪ್ಪಳ ಮತ್ತು ವಿಜಯನಗರದ ಆಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮದ ಕುರಿತು ಚರ್ಚಿಸುತ್ತಿದ್ದಾರೆ. ಇತರ ಕ್ರೆಸ್ಟ್ ಗೇಟ್‌ಗಳಿಗೆ ತೊಂದರೆಯಾಗದಂತೆ ನೀರು ಹರಿಸುವುದನ್ನು ಮುಂದುವರಿಸಲು ತಜ್ಞರು ಸೂಚಿಸಿದ್ದಾರೆ ಎಂದರು.

ಹೊರ ಹರಿವು ನಿಯಂತ್ರಿಸಲು ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಎಂಜಿನಿಯರ್‌ಗಳು ಎಲ್ಲ ಸಾಧ್ಯತೆಗಳನ್ನು ನೋಡುತ್ತಿದ್ದಾರೆ. ಸುರಕ್ಷತಾ ಕಾರಣಗಳಿಂದ ಅಣೆಕಟ್ಟು ಹೊರಹರಿವಿನ ಪ್ರದೇಶ ಮತ್ತು ನದಿಯ ಉದ್ದಕ್ಕೂ ಸಾಹಸ ಮಾಡದಂತೆ ನಾವು ಸಾರ್ವಜನಿಕರನ್ನು ವಿನಂತಿಸುತ್ತಿದ್ದೇವೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂಎಸ್ ದಿವಾಕರ್ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಣ್ಣ ನೀರಾವರಿ ಸಚಿವ ಎನ್‌ಎಸ್ ಬೋಸರಾಜು ಅವರೊಂದಿಗೆ ಭಾನುವಾರ ಮಧ್ಯಾಹ್ನ ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ ಕ್ರೆಸ್ಟ್ ಗೇಟ್ ಸಂಖ್ಯೆ 19 ಅನ್ನು ಪರಿಶೀಲಿಸಿದರು.

ಡಿ ಕೆ ಶಿವಕುಮಾರ್ ಅವರು ಕ್ರೆಸ್ಟ್ ಗೇಟ್ ಸಂಖ್ಯೆ 19 ರಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಹರಿವು ತಡೆಯಲು ಸಾಧ್ಯವಿರುವ ಎಲ್ಲಾ ಕ್ರಿಯಾ ಯೋಜನೆಗಳ ಕುರಿತು ಚರ್ಚಿಸಿದರು. ಟಿಬಿ ಅಣೆಕಟ್ಟು ಪ್ರಾಧಿಕಾರ ಮತ್ತು ತಜ್ಞರ ಸಮಿತಿ ನೀಡಿದ ಮಾಹಿತಿಯಂತೆ ಅಣೆಕಟ್ಟಿನ ಸಂಗ್ರಹವು 105.788 ಟಿಎಂಸಿಯಿಂದ 65 ಟಿಎಂಸಿಗೆ ಇಳಿಕೆಯಾಗುವವರೆಗೆ ದುರಸ್ತಿ ಕಾರ್ಯ ಅಸಾಧ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.

ಪ್ರಸ್ತುತ, ನದಿ ನೀರಿನ ಹೊರಹರಿವು 1.46 ಲಕ್ಷ ಕ್ಯೂಸೆಕ್‌ಗೆ ತಲುಪಿದ್ದು, ಗೇಟ್ ಸಂಖ್ಯೆ 19 ರಿಂದ 40,000 ಕ್ಯೂಸೆಕ್ ನೀರು ಹೊರಹರಿವು ವರದಿಯಾಗಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಹಂಪಿ ಹಾಗೂ ಕಂಪ್ಲಿ ಗಂಗಾವತಿ ಸೇತುವೆಯ ಹಲವು ಸ್ಮಾರಕಗಳು ಭಾನುವಾರ ಮುಳುಗಡೆಯಾಗಿದ್ದವು.

ಇದನ್ನೂ ಓದಿ; ವಯನಾಡ್‌ ಭೂಕುಸಿತ | ನಾಪತ್ತೆಯಾದವರಿಗಾಗಿ ಹುಡುಕಾಟ ಪುನರಾರಂಭ; ಬದುಕುಳಿದವರಿಂದ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...