Homeಮುಖಪುಟಟರ್ಕಿ ಮತ್ತು ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 23,831ಕ್ಕೆ ಏರಿಕೆ

ಟರ್ಕಿ ಮತ್ತು ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 23,831ಕ್ಕೆ ಏರಿಕೆ

- Advertisement -
- Advertisement -

ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೂಕಂಪದಿಂದ ಸಾವಿರಾರು ಜನರು ಪ್ರಣ ಕಳೆದುಕೊಂಡಿದ್ದಾರೆ. ಶನಿವಾರದವರೆಗೆ ಸಾವಿನ ಸಂಖ್ಯೆ 23,831ಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟರ್ಕಿಯಲ್ಲಿ 20,318ಕ್ಕೂ ಜನರು ಸಾವಿಗೀಡಾಗಿದ್ದು, 80,052 ಜನರು ಗಾಯಗೊಂಡಿದ್ದಾರೆ ಎಂದು ದೇಶದ ವಿಪತ್ತು ಸಂಸ್ಥೆ ಮಾಹಿತಿ ನೀಡಿದೆ.

ಸಿರಿಯಾದಲ್ಲಿ ಒಟ್ಟು 3,513 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ವಾಯುವ್ಯ ಪ್ರದೇಶದ ಬಂಡುಕೋರರ ಹಿಡಿತದಲ್ಲಿರುವ 2,166 ಜನರ ಸಾವುಗಳಾಗಿವೆ. ಸ್ವಯಂಸೇವಕ ಸಂಸ್ಥೆ ಸಿರಿಯಾ ಸಿವಿಲ್ ಡಿಫೆನ್ಸ್ ಪ್ರಕಾರ, ಇದನ್ನು ವೈಟ್ ಹೆಲ್ಮೆಟ್ ಎಂದೂ ಕರೆಯುತ್ತಾರೆ.

ಸಿರಿಯಾದ ಸರ್ಕಾರಿ ನಿಯಂತ್ರಿತ ಭಾಗಗಳಲ್ಲಿ 1,347 ಸಾವುಗಳು ಸಂಭವಿಸಿವೆ ಎಂದು ಸಿರಿಯನ್ ರಾಜ್ಯ ಮಾಧ್ಯಮ ವರದಿ ಮಾಡಿದೆ.

ಇದನ್ನೂ ಓದಿ: ಇಂದು ಟರ್ಕಿಯಲ್ಲಿ ಮತ್ತೆ 5.6 ಭೂಕಂಪನ: 3 ತಿಂಗಳ ತುರ್ತು ಪರಿಸ್ಥಿತಿ ಘೋಷಣೆ

ಸೋಮವಾರ ಸಂಭವಿಸಿದ ಈ ವಿನಾಶಕಾರಿ ಭೂಕಂಪದಿಂದ ಮಧ್ಯಾಹ್ನದ ನಂತರ ದಕ್ಷಿಣ ಟರ್ಕಿಯಲ್ಲಿ ವ್ಯಾಪಕ ವಿನಾಶ ಉಂಟಾಯಿತು. ಹತ್ತಿರದ ದೇಶಗಳಲ್ಲೂ ಭೂಕಂಪನದ ಅನುಭವವಾಗಿದೆ.

ಈ ಭೂಕಂಪವು ಶತಮಾನದ ಏಳನೇ ಅತ್ಯಂತ ಮಾರಣಾಂತಿಕ ನೈಸರ್ಗಿಕ ವಿಕೋಪವಾಗಿದೆ. ಜಪಾನ್‌ನ 2011 ರ ಕಂಪನ, ಸುನಾಮಿ ಮತ್ತು 2003ರ ಇರಾನ್ ಭೂಕಂಪ 31,000 ಜನರನ್ನು ಬಲಿತೆಗೆದುಕೊಂಡಿದೆ.

ಈ ಅನಾಹುತದ ಸುದ್ದಿಗಳು ಎಲ್ಲರನ್ನೂ ಕುಗ್ಗಿಸುತ್ತಿರುವಾಗಲೇ, ಶುಕ್ರವಾರ ರಾತ್ರಿ ಕಟ್ಟಡದ ಅವಶೇಷಗಳಲ್ಲಿ ಸಿಕ್ಕಿಬಿದ್ದ 10 ದಿನದ ನವಜಾತ ಶಿಶುವನ್ನು ರಕ್ಷಕರು ಹೊರತೆಗೆದಾಗ ಭರವಸೆ ಮೂಡಿಸಿದೆ.

ಮಗು ಯಾಗಿಜ್ ಉಲಾಸ್‌ನ್ನು ಥರ್ಮಲ್ ಕಂಬಳಿಯಲ್ಲಿ ಸುತ್ತಿಕೊಂಡು ಸುರಕ್ಷಿತವಾಗಿ ಫೀಲ್ಡ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ತುರ್ತು ಕಾರ್ಯಕರ್ತರು ಮಗುವಿನ ಅವನ ತಾಯಿಯನ್ನು ಸಹ ಕರೆದುಕೊಂಡು ಹೋದರು. ಮಗು ಅರೆಪ್ರಜ್ಞಾಸ್ಥಿಯಲ್ಲಿದ್ದು, ಸ್ಟ್ರೆಚರ್‌ನಲ್ಲಿ ತೆಗೆದುಕೊಂಡು ಹೋಗಲಾಯಿತು.

ಭಾರತದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಗುರುವಾರ ಬೆಳಿಗ್ಗೆ, ಗಾಜಿಯಾಂಟೆಪ್‌ನಲ್ಲಿನ ಅವಶೇಷಗಳಿಂದ 6 ವರ್ಷದ ಬಾಲಕಿಯನ್ನು ಜೀವಂತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...