Homeಮುಖಪುಟಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಲು ಮುಂದಾದ ಗಾಂಧೀಜಿ ಮರಿ ಮೊಮ್ಮಗ ತುಷಾರ್ ಗಾಂಧಿ

ಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಲು ಮುಂದಾದ ಗಾಂಧೀಜಿ ಮರಿ ಮೊಮ್ಮಗ ತುಷಾರ್ ಗಾಂಧಿ

- Advertisement -
- Advertisement -

ಹಿಂದುತ್ವ ನಾಯಕ ಸಂಭಾಜಿ ಭಿಡೆ ಅವರು ತಮ್ಮ ಭಾಷಣದ ವೇಳೆ ಮಹಾತ್ಮಾ ಗಾಂಧಿಯವರ ವಂಶಾವಳಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಇದೀಗ ಅವರ ವಿರುದ್ಧ ಮಹಾತ್ಮಾ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿಯವರು ಅಧಿಕೃತ ದೂರು ದಾಖಲಿಸುವುದಾಗಿ ಗುರುವಾರ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ನಾನು ಪುಣೆಗೆ ಹೋಗುತ್ತಿದ್ದೇನೆ. ಈ ಮಧ್ಯೆ ಇಂದು ಮಧ್ಯಾಹ್ನ ಡೆಕ್ಕನ್ ಪೊಲೀಸ್ ಠಾಣೆಯಲ್ಲಿ ಪ್ರಧಾನಮಂತ್ರಿಯವರ ‘ಪೂಜ್ಯ ಗುರೂಜಿ’ಯಾದ ಭಿಡೆ ವಿರುದ್ಧ ಕ್ರಿಮಿನಲ್ ಮಾನನಷ್ಟ ದೂರು ದಾಖಲಿಸಲಿದ್ದೇನೆ. ನನ್ನ ಪೂರ್ವಜರ ವಿರುದ್ಧ ಅಪಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಆಗಬೇಕು” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ಶ್ರೀ ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆಯ ಸಂಸ್ಥಾಪಕ ಭಿಡೆ ಅವರ ಭಾಷಣದಲ್ಲಿ ಮಹಾತ್ಮ ಗಾಂಧಿಯವರ ವಂಶಾವಳಿಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಅಮರಾವತಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಮಹಾತ್ಮಾ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿಕೆಯನ್ನು ಖಂಡಿಸಿದ ವಿರೋಧ ಪಕ್ಷಗಳು ಭಿಡೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬೇಡಿಕೆ ಇಟ್ಟಿದ್ದರು. ಕಳೆದ ವಾರ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ರಾಷ್ಟ್ರೀಯ ಐಕಾನ್‌ಗಳನ್ನು ಅವಮಾನಿಸುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಬುದ್ಧ, ಪುಲೆ, ಪೆರಿಯಾರ್ ವಿರುದ್ಧವೂ ಭಿಡೆ ಅವಹೇಳನ

ಆ ಬಳಿಕ ಭಿಡೆ ಅವರು ಗೌತಮ್ ಬುದ್ಧ, ಜ್ಯೋತಿಬಾ ಫುಲೆ ಮತ್ತು ಪೆರಿಯಾರ್ ನಾಯ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಮತ್ತೊಂದು ಪ್ರಕರಣವನ್ನು ದಾಖಲಿಸಲಾಗಿದೆ.

ದೂರಿನಲ್ಲಿ ಕೆಲವು ಆನ್‌ಲೈನ್ ವೀಡಿಯೋಗಳನ್ನು ಉಲ್ಲೇಖಿಸಲಾಗಿದೆ, ಇದರಲ್ಲಿ ಭಿಡೆ ಸಮಾಜ ಸುಧಾರಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...