ಟಿವಿ ಸುದ್ದಿ ವಾಹಿನಿಗಳು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಗಳನ್ನು ಸಂದರ್ಭದಿಂದ ಹೊರಗಿಟ್ಟು ಚರ್ಚೆ ಮಾಡುವುದರಿಂದ ಎಲ್ಲಕ್ಕಿಂತ ಹೆಚ್ಚು ಮಾಲಿನ್ಯವನ್ನು ಉಂಟುಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ಪ್ರತಿಯೊಂದು ಟಿವಿ ಚಾನೆಲ್‌ಗಳೂ ಅದರದೇ ಆದ ಕಾರ್ಯಸೂಚಿಯನ್ನು ಹೊಂದಿರುತ್ತದೆ. ಅವುಗಳು ತಮ್ಮ ಚರ್ಚೆಗಳಲ್ಲಿ ಹೇಳಿಕೆಗಳನ್ನು ಸಂದರ್ಭಗಳಿಂದ ಹೊರಗಿಡುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ
“ನೀವು ಕೆಲವು ಸಮಸ್ಯೆಯನ್ನು ಬಳಸಿಕೊಳ್ಳಲು ಬಯಸುತ್ತೀರಿ. ನಮ್ಮನ್ನು ಗಮನಿಸುವಂತೆ ಮಾಡಿ ನಂತರ ಅದನ್ನು ವಿವಾದಾತ್ಮಕವಾಗಿ ಮಾಡಲು ಬಯಸುತ್ತೀರಿ. ಅದರ ನಂತರ ಆರೋಪಗಳ ಆಟಗಳು ಮಾತ್ರ ಉಳಿಯುತ್ತವೆ” ಎಂದು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಹೇಳಿದೆ.
“ಟಿವಿಯಲ್ಲಿನ ಚರ್ಚೆಗಳು ಎಲ್ಲಕ್ಕಿಂತ ಹೆಚ್ಚು ಮಾಲಿನ್ಯವನ್ನು ಸೃಷ್ಟಿಸುತ್ತಿವೆ. ಏನಾಗುತ್ತಿದೆ ಮತ್ತು ಸಮಸ್ಯೆ ಏನೆಂದು ಅವರು ಅರ್ಥ ಮಾಡಿಕೊಳ್ಳಲ್ಲ. ಹೇಳಿಕೆಗಳನ್ನು ಸಂದರ್ಭದಿಂದ ಹೊರಗಿಡಲಾಗುತ್ತದೆ. ಪ್ರತಿಯೊಬ್ಬರಿಗೂ ಅವರದೇ ಆದ ಅಜೆಂಡಾವಿದೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.
ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನ ಈ ಮೇಲಿನಂತೆ ಅವಲೋಕಿಸಿದೆ. ದೆಹಲಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸಲ್ಲಿಸಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಸುಪ್ರೀಂಕೋರ್ಟ್ ಮೌಖಿಕವಾಗಿ ಮಾಧ್ಯಮಗಳ ಮೇಲೆ ಟೀಕೆಗಳನ್ನು ಮಾಡಿದೆ.
ಇದನ್ನೂ ಓದಿ: ತ್ರಿಪುರಾ: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್, 71 ಜನರ ವಿರುದ್ಧ ಪ್ರಕರಣ


