Homeಮುಖಪುಟಟಿವಿ ಡಿಬೇಟ್‌‌ಗಳು ಎಲ್ಲಕ್ಕಿಂತ ಹೆಚ್ಚು ಮಾಲಿನ್ಯ ಉಂಟು ಮಾಡುತ್ತವೆ: ಸುಪ್ರೀಂಕೋರ್ಟ್

ಟಿವಿ ಡಿಬೇಟ್‌‌ಗಳು ಎಲ್ಲಕ್ಕಿಂತ ಹೆಚ್ಚು ಮಾಲಿನ್ಯ ಉಂಟು ಮಾಡುತ್ತವೆ: ಸುಪ್ರೀಂಕೋರ್ಟ್

- Advertisement -
- Advertisement -

ಟಿವಿ ಸುದ್ದಿ ವಾಹಿನಿಗಳು ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಗಳನ್ನು ಸಂದರ್ಭದಿಂದ ಹೊರಗಿಟ್ಟು ಚರ್ಚೆ ಮಾಡುವುದರಿಂದ ಎಲ್ಲಕ್ಕಿಂತ ಹೆಚ್ಚು ಮಾಲಿನ್ಯವನ್ನು ಉಂಟುಮಾಡುತ್ತಿವೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ಪ್ರತಿಯೊಂದು ಟಿವಿ ಚಾನೆಲ್‌ಗಳೂ ಅದರದೇ ಆದ ಕಾರ್ಯಸೂಚಿಯನ್ನು ಹೊಂದಿರುತ್ತದೆ. ಅವುಗಳು ತಮ್ಮ ಚರ್ಚೆಗಳಲ್ಲಿ ಹೇಳಿಕೆಗಳನ್ನು ಸಂದರ್ಭಗಳಿಂದ ಹೊರಗಿಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

“ನೀವು ಕೆಲವು ಸಮಸ್ಯೆಯನ್ನು ಬಳಸಿಕೊಳ್ಳಲು ಬಯಸುತ್ತೀರಿ. ನಮ್ಮನ್ನು ಗಮನಿಸುವಂತೆ ಮಾಡಿ ನಂತರ ಅದನ್ನು ವಿವಾದಾತ್ಮಕವಾಗಿ ಮಾಡಲು ಬಯಸುತ್ತೀರಿ. ಅದರ ನಂತರ ಆರೋಪಗಳ ಆಟಗಳು ಮಾತ್ರ ಉಳಿಯುತ್ತವೆ” ಎಂದು ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠವು ಹೇಳಿದೆ.

“ಟಿವಿಯಲ್ಲಿನ ಚರ್ಚೆಗಳು ಎಲ್ಲಕ್ಕಿಂತ ಹೆಚ್ಚು ಮಾಲಿನ್ಯವನ್ನು ಸೃಷ್ಟಿಸುತ್ತಿವೆ. ಏನಾಗುತ್ತಿದೆ ಮತ್ತು ಸಮಸ್ಯೆ ಏನೆಂದು ಅವರು ಅರ್ಥ ಮಾಡಿಕೊಳ್ಳಲ್ಲ. ಹೇಳಿಕೆಗಳನ್ನು ಸಂದರ್ಭದಿಂದ ಹೊರಗಿಡಲಾಗುತ್ತದೆ. ಪ್ರತಿಯೊಬ್ಬರಿಗೂ ಅವರದೇ ಆದ ಅಜೆಂಡಾವಿದೆ” ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯು ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನ ಈ ಮೇಲಿನಂತೆ ಅವಲೋಕಿಸಿದೆ. ದೆಹಲಿ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಸಲ್ಲಿಸಿದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಸುಪ್ರೀಂಕೋರ್ಟ್ ಮೌಖಿಕವಾಗಿ ಮಾಧ್ಯಮಗಳ ಮೇಲೆ ಟೀಕೆಗಳನ್ನು ಮಾಡಿದೆ.

ಇದನ್ನೂ ಓದಿ: ತ್ರಿಪುರಾ: ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಪೋಸ್ಟ್‌, 71 ಜನರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...