Homeಮುಖಪುಟಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ.

ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ ಜಿಲ್ಲೆಯ ತಿರುಚ್ಚಿ ಪೂರ್ವ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ವಿಜಯ್ ತಿಳಿಸಿದ್ದಾರೆ.

ಭಾನುವಾರ (ಮಾ.29) ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಪ್ರಕಟಿಸಿದ ವಿಜಯ್, “ಚೊಚ್ಚಲ ಚುನಾವಣೆಯಲ್ಲಿ ನಮಗೊಂದು ಅವಕಾಶ ನೀಡಿ” ಎಂದು ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ.

“ವಿಸಿಲ್‌ಗೆ ಮತ ಚಲಾಯಿಸಿ, ಇದು ವಿಸಿಲ್ ಕ್ರಾಂತಿಯ ಚುನಾವಣೆ” ಎಂದು ವಿಜಯ್ ತಮ್ಮ ಪಕ್ಷದ ಚುನಾವಣಾ ಚಿಹ್ನೆಯನ್ನು ಪ್ರದರ್ಶಿಸುತ್ತಾ ಹೇಳಿದ್ದಾರೆ. “ಮತದಾರರು ನನ್ನ ಮತ್ತು ಇತರ ಟಿವಿಕೆ ಅಭ್ಯರ್ಥಿಗಳ ನಡುವೆ ವ್ಯತ್ಯಾಸವನ್ನು ತೋರಿಸಬಾರದು, ನಾವೆಲ್ಲರೂ ಒಂದೇ” ಎಂದಿದ್ದಾರೆ.

“ಇದು ಕೇವಲ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಕಾರ್ಯಕ್ರಮವಲ್ಲ, ಬದಲಿಗೆ ಜನರ ರಕ್ಷಕರ ಹೆಸರುಗಳನ್ನು ಘೋಷಿಸುವ ಸಭೆಯಾಗಿದೆ. ನಮ್ಮ ಅಭ್ಯರ್ಥಿಗಳು ಸಾಮಾನ್ಯ ಹಿನ್ನೆಲೆಯಿಂದ ಬಂದವರಾಗಿದ್ದಾರೆಯೇ ಹೊರತು, ಯಾವುದೇ ಪ್ರಭಾವಿ ವ್ಯಕ್ತಿಗಳಲ್ಲ. ನಮ್ಮ ಶಾಸಕರು ಲೂಟಿ ಹೊಡೆಯುವ, ಅಕ್ರಮ ಗಣಿಗಾರಿಕೆ ನಡೆಸುವ ಅಥವಾ ಪ್ರಶ್ನಿಸುವ ಪತ್ರಕರ್ತರ ಮೇಲೆ ಹಲ್ಲೆ ಮಾಡುವಂತಹ ಅನುಭವ ಹೊಂದಿರಬಾರದು. ಡಿಎಂಕೆ ಅಭ್ಯರ್ಥಿಯೊಬ್ಬರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ, ಅವರು ಜೈಲಿಗೆ ಹೋಗಿ ಬಂದಿದ್ದಾರೆ. ಅವರು ಯಾರೆಂದು ನೀವೇ ಯೋಚಿಸಿ” ಎಂದು ಹೇಳಿದ್ದಾರೆ.

ಟಿವಿಕೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ತಾವು ಶ್ರಮವಹಿಸಿರುವುದಾಗಿ ತಿಳಿಸಿದ ವಿಜಯ್, “ಈ ಚುನಾವಣೆಯು ನಮ್ಮ ಜನರ ಮೈತ್ರಿಕೂಟ ಮತ್ತು ಎಂ.ಕೆ ಸ್ಟಾಲಿನ್ ಸರ್ ಅವರ ಮೈತ್ರಿಕೂಟದ ನಡುವಿನ ನೇರ ಹಣಾಹಣಿಯಾಗಿದೆ” ಎಂದಿದ್ದಾರೆ.

ಚುನಾವಣೆಯಲ್ಲಿ ಗೆದ್ದರೆ ತಮಿಳುನಾಡನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ ಮಾಡುವುದಾಗಿ ವಿಜಯ್ ಭರವಸೆ ನೀಡಿದ್ದಾರೆ. ಅಲ್ಲದೆ, 29 ವರ್ಷದ ನಂತರವೂ ಉದ್ಯೋಗ ಸಿಗದವರಿಗೆ ಮಾಸಿಕ ಆರ್ಥಿಕ ನೆರವು ನೀಡುವುದಾಗಿ ಮತ್ತು ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಖಚಿತಪಡಿಸಲು ಹೊಸ ಕಾನೂನು ತರುವುದಾಗಿ ಅವರು ಘೋಷಿಸಿದ್ದಾರೆ.

ವಿಜಯ್ ಹೊರತು ಟಿವಿಕೆಯಿಂದ ಸ್ಪರ್ಧಿಸುತ್ತಿರುವ ಇತರ ಅಭ್ಯರ್ಥಿಗಳನ್ನು ನೋಡುವುದಾದರೆ..ತಮಿಳುನಾಡು ಚುನಾವಣೆಯ ಹೈ-ವೋಲ್ಟೇಜ್ ಕ್ಷೇತ್ರ ಕೊಳತ್ತೂರಿನಲ್ಲಿ ಡಿಎಂಕೆ ನಾಯಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ವಿರುದ್ಧ ಟಿವಿಕೆಯ ವಿ.ಎಸ್. ಬಾಬು ಸ್ಪರ್ಧೆಗಿಳಿದಿದ್ದಾರೆ.

ಚೇಪಾಕ್-ತಿರುವಲ್ಲಿಕೇಣಿ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಕಾಂಗ್ರೆಸ್ ತೊರೆದು ಟಿವಿಕೆ ಸೇರಿರುವ ಸೆಲ್ವಂ ಅವರನ್ನು ವಿಜಯ್ ಕಣಕ್ಕಿಳಿಸಿದ್ದಾರೆ.

ವಿಲ್ಲಿವಾಕ್ಕಂನಲ್ಲಿ ಟಿವಿಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಆದವ್ ಅರ್ಜುನಾ ಸ್ಪರ್ಧಿಸುತ್ತಿದ್ದಾರೆ. ಗೋಪಿಚೆಟ್ಟಿಪಾಳ್ಯಂನಲ್ಲಿ ಟಿವಿಕೆ ಪರವಾಗಿ ಸೆಂಗೊಟ್ಟಯ್ಯನ್ ಅವರು ಸ್ಪರ್ಧೆಯಲ್ಲಿದ್ದಾರೆ.

ತಮಿಳುನಾಡು ವಿಧಾನಸಭೆಯ 234 ಕ್ಷೇತ್ರಗಳಿಗೆ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.

ಪ್ರಸ್ತುತ ಅಧಿಕಾರದಲ್ಲಿರುವ ಡಿಎಂಕೆ ಐದು ಕೋನಗಳ ಸ್ಪರ್ಧೆಯನ್ನು ಎದುರಿಸುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿಯ ಎನ್‌ಡಿಎ ಬಣವು ಮತ್ತೆ ಅಧಿಕಾರಕ್ಕೆ ಬರಲು ಎದುರು ನೋಡುತ್ತಿದೆ. ವಿಜಯ್ ಅವರ ಟಿವಿಕೆ ದೊಡ್ಡ ಚೊಚ್ಚಲ ಪ್ರವೇಶಕ್ಕೆ ಸಜ್ಜಾಗಿದೆ. ಎಸ್. ರಾಮದಾಸ್ ನೇತೃತ್ವದ ಪಿಎಂಕೆ ಮತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸಹಾಯಕಿ ಶಶಿಕಲಾ ಸ್ಥಾಪಿಸಿದ ಪಕ್ಷದ ಮೈತ್ರಿ ನಾಲ್ಕನೇ ರಂಗವನ್ನು ತೆರೆದಿದೆ. ಸೀಮನ್ ನೇತೃತ್ವದ ನಾಮ್ ತಮಿಳರ್ ಕಚ್ಚಿ (ಎನ್‌ಟಿಕೆ) ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ವಿಜಯ್ ಸ್ಪರ್ಧಿಸುತ್ತಿರುವ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಎರಡೂ ಸ್ಥಾನಗಳು ಪ್ರಸ್ತುತ ಡಿಎಂಕೆ ಪ್ರತಿನಿಧಿಸುತ್ತಿವೆ. ಆರ್‌ಡಿ ಶೇಖರ್ ಪೆರಂಬೂರು ಶಾಸಕರಾಗಿದ್ದು, ಇನಿಗೋ ಎಸ್ ಇರುದಯರಾಜ್ ತಿರುಚ್ಚಿ ಪೂರ್ವದ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...